ETV Bharat / state

ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ - ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಸುದ್ದಿಗೋಷ್ಟಿ

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ತಿರಸ್ಕರಿಸಿದ್ದ ವಿದ್ಯಾರ್ಥಿಗಳ ರಿಸಲ್ಟ್​ ಇಂದು ಪ್ರಕಟವಾಗಿದ್ದು,‌ ಸಚಿವ ನಾಗೇಶ್ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದರು.

BC Nagesh
ಬಿ.ಸಿ ನಾಗೇಶ್
author img

By

Published : Sep 20, 2021, 12:02 PM IST

ಬೆಂಗಳೂರು: ಪ್ರಸಕ್ತ ಸಾಲಿನ ಆಗಸ್ಟ್, ಸೆಪ್ಟೆಂಬರ್​ನಲ್ಲಿ ನಡೆದ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಶೇ. 29.91 ರಷ್ಟು ಮಕ್ಕಳು ತೇರ್ಗಡೆ ಹೊಂದಿದ್ದಾರೆ.

ವಿಧಾನಸೌಧದಲ್ಲಿ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದು, ಒಟ್ಟು 18,413 ಮಕ್ಕಳು ಪರೀಕ್ಷೆಗೆ ಹಾಜರಾಗಿದ್ದರು. ಇವರಲ್ಲಿ 5,507 ಮಕ್ಕಳು ತೇರ್ಗಡೆ ಹೊಂದಿದ್ದು, 12,906 ಮಕ್ಕಳು ಅನುತ್ತೀರ್ಣರಾಗಿದ್ದಾರೆ ಎಂದರು.

ವಿಧಾನಸೌಧದಲ್ಲಿ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಸುದ್ದಿಗೋಷ್ಠಿ

ಹೊಸದಾಗಿ 592 ಜನ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಇದರಲ್ಲಿ ತೇರ್ಗಡೆಯಾದವರು- 556, ಅನುತ್ತೀರ್ಣ - 36, ಒಟ್ಟು ಫಲಿತಾಂಶ ಶೇಕಡಾ 93.92. ಹಾಗೆಯೇ ಕಳೆದ ವರ್ಷ ಫೇಲ್​ ಆಗಿ ಈ ಬಾರಿ ಪರೀಕ್ಷೆ ತೆಗೆದುಕೊಂಡ ಪುನರಾವರ್ತಿತ ವಿದ್ಯಾರ್ಥಿಗಳಲ್ಲಿ ಒಟ್ಟು 351 ಜನ ಪರೀಕ್ಷೆಗೆ ಹಾಜರಾಗಿದ್ದರು.

ಇವರಲ್ಲಿ 183 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು, 168 ಜನ ಅನುತ್ತೀರ್ಣರಾಗಿದ್ದಾರೆ. ಒಟ್ಟಾರೆ ಫಲಿತಾಂಶ ಶೇಕಡಾ 52.29 ಎಂದರು. ಇನ್ನು ಖಾಸಗಿ ಅಭ್ಯರ್ಥಿಗಳು 17,470 ಮಂದಿ ಪರೀಕ್ಷೆ ಬರೆದಿದ್ದರು. ಇವರಲ್ಲಿ 4,768 ಜನ ತೇರ್ಗಡೆ ಹೊಂದಿದ್ದು, 12,702 ಮಂದಿ ಅನುತ್ತೀರ್ಣರಾಗಿದ್ದಾರೆ. ಒಟ್ಟಾರೆ ಫಲಿತಾಂಶ - ಶೇ 27.29 ಎಂದು ನಾಗೇಶ್ ತಿಳಿಸಿದರು.

ಬಾಲಕರು, ಬಾಲಕೀಯರ ಫಲಿತಾಂಶದಲ್ಲಿ ಭಾರಿ ವ್ಯತ್ಯಾಸ ಇದೆ. ಗ್ರಾಮಾಂತರ ಪ್ರದೇಶದಲ್ಲಿ ಶೇ.32.59, ನಗರದಲ್ಲಿ ಶೇ. 28.62 ರಷ್ಟು ಮಕ್ಕಳು ತೇರ್ಗಡೆ ಹೊಂದಿದ್ದಾರೆ. ಗ್ರಾಮಾಂತರದಲ್ಲಿ ಉತ್ತಮ ಫಲಿತಾಂಶ ಇದೆ. ಕನ್ನಡ ಮಾಧ್ಯಮದಲ್ಲಿ ಶೇ.31.27 ಮತ್ತು ಇಂಗ್ಲಿಷ್ ಮಾಧ್ಯಮದಲ್ಲಿ ಶೇ.26.08 ರಷ್ಟು ತೇರ್ಗಡೆಯಾಗಿದ್ದು, ಗ್ರಾಮೀಣ ಭಾಗದವರೇ ಹೆಚ್ಚು.

ಇದನ್ನು ಓದಿ: ದ್ವಿತೀಯ ಪಿಯು ಫಲಿತಾಂಶ ತಿರಸ್ಕರಿಸಿ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳ ರಿಸಲ್ಟ್​ ಇಂದು ಪ್ರಕಟ

ಇನ್ನು ವಿಜ್ಞಾನದಲ್ಲಿ 573 ವಿದ್ಯಾರ್ಥಿಗಳು ಹೆಚ್ಚು ಅಂಕ ಗಳಿಸಿದ್ದಾರೆ. ವಾಣಿಜ್ಯ - 594, ಕಲಾ - 592 ಹೆಚ್ಚು ಅಂಕ ಪಡೆದಿದ್ದಾರೆ. ವಿಭಾಗವಾರು ಫಲಿತಾಂಶ ಗಮನಿಸಿದಾಗ ಕಲಾ ವಿಭಾಗದಲ್ಲಿ - 12,203 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 3,912 ಮಕ್ಕಳು ಉತ್ತೀರ್ಣರಾಗಿದ್ದು, ಶೇಕಡಾ 32.6 ರಷ್ಟು ಫಲಿತಾಂಶ ಬಂದಿದೆ.

ವಾಣಿಜ್ಯ ವಿಭಾಗದಲ್ಲಿ 6,114 ಮಕ್ಕಳು ಪರೀಕ್ಷೆ ಬರೆದಿದ್ದು, 1,527 ಮಕ್ಕಳು ತೇರ್ಗಡೆ ಹೊಂದಿದ್ದು, ಶೇ.24.98 ಫಲಿತಾಂಶ ಬಂದಿದೆ. ವಿಜ್ಞಾನ ವಿಭಾಗದಲ್ಲಿ 96 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 68 ಮಂದಿ ಉತ್ತೀರ್ಣರಾಗಿದ್ದಾರೆ. ಒಟ್ಟಾರೆ, ಫಲಿತಾಂಶ ಶೇಕಡಾ 70.83 ಎಂದು ವಿವರಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.