ETV Bharat / state

ನಗರದಲ್ಲಿ ಘರ್ಜಿಸಿದ ಜೆಸಿಬಿಗಳು : 100 ಕೋಟಿ ರೂಪಾಯಿ ಮೌಲ್ಯದ ಬಿಡಿಎ ಆಸ್ತಿ ವಶ

author img

By

Published : Jun 28, 2022, 4:46 PM IST

ಬಿಡಿಎ ಅಧ್ಯಕ್ಷ ಎಸ್. ಆರ್ ವಿಶ್ವನಾಥ್ ಮತ್ತು ಆಯುಕ್ತ ರಾಜೇಶ್ ಗೌಡ ಅವರ ಮಾರ್ಗದರ್ಶನದಲ್ಲಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಭಾಸ್ಕರ್ ಮತ್ತು ರವಿಕುಮಾರ್ ನೇತೃತ್ವದಲ್ಲಿ ಕಾರ್ಯಪಾಲಕ ಇಂಜಿನಿಯರ್ ಜಿ.ಕುಮಾರ್ ಅವರನ್ನೊಳಗೊಂಡ ಅಧಿಕಾರಿಗಳ ತಂಡವು ಸ್ಥಳೀಯ ಪೊಲೀಸರ ನೆರವಿನಿಂದ 15ಕ್ಕೂ ಹೆಚ್ಚು ಜೆಸಿಬಿಗಳನ್ನು ಬಳಸಿ 15 ವಾಣಿಜ್ಯ ಮಳಿಗೆಗಳು ಹಾಗೂ ಶೆಡ್‌ಗಳನ್ನು ನೆಲಸಮ ಮಾಡಿ ಜಾಗವನ್ನು ಬಿಡಿಎ ವಶಕ್ಕೆ ಪಡೆದುಕೊಂಡಿದೆ..

ಬೆಳ್ಳಂಬೆಳಗ್ಗೆ ಘರ್ಜಿಸಿದ ಜೆಸಿಬಿ
ಬೆಳ್ಳಂಬೆಳಗ್ಗೆ ಘರ್ಜಿಸಿದ ಜೆಸಿಬಿ

ಬೆಂಗಳೂರು : ನಗರದಲ್ಲಿ ಇಂದು ಬಿಡಿಎ ಅಧಿಕಾರಿಗಳು ಜೆಸಿಬಿಗಳನ್ನು ಬಳಸಿ ಬಿಡಿಎಗೆ ಸೇರಿದ ಜಾಗದಲ್ಲಿ ನಿರ್ಮಿಸಲಾಗಿದ್ದ 15ಕ್ಕೂ ಹೆಚ್ಚು ವಾಣಿಜ್ಯ ಮಳಿಗೆಗಳು ಮತ್ತು ಶೆಡ್​ಗಳನ್ನು ತೆರವುಗೊಳಿಸಿ ಸುಮಾರು 100 ಕೋಟಿ ಮೌಲ್ಯದ ಒಂದೂಕಾಲು ಎಕರೆ ಜಾಗವನ್ನು ವಶಕ್ಕೆ ಪಡೆದಿದ್ದಾರೆ.

ಹೆಚ್​ಬಿಆರ್​ ಬಡಾವಣೆಯ 2ನೇ ಹಂತದ ನಾಗವಾರದಲ್ಲಿ ಬಿಡಿಎ ಸ್ವಾಧೀನಪಡಿಸಿಕೊಂಡ ಸರ್ವೆ ನಂಬರ್ 75ರ ಒಂದೂ ಕಾಲು ಎಕರೆ ಜಾಗವನ್ನು ಬಿಟ್ಟುಕೊಡದೇ ಭೂಮಾಲೀಕರು ಆ ಜಾಗದಲ್ಲಿ 15ಕ್ಕೂ ಹೆಚ್ಚು ವಾಣಿಜ್ಯ ಮಳಿಗೆಗಳು ಮತ್ತು ಶೆಡ್‌ಗಳನ್ನು ನಿರ್ಮಿಸಿದ್ದರು.

ಸದರಿ ಸರ್ವೇ ನಂಬರ್‌ನ 6 ಎಕರೆ ಜಮೀನನ್ನು ಹೆಚ್​ಆರ್​ಬಿ 2ನೇ ಹಂತದ ಬಡಾವಣೆ ನಿರ್ಮಾಣಕ್ಕೆ 1989ರಲ್ಲಿ ಬಿಡಿಎ ಸ್ವಾಧೀನಪಡಿಸಿಕೊಂಡಿತ್ತು. ಈ ಪೈಕಿ ಒಂದೂವರೆ ಎಕರೆ ಜಾಗವನ್ನು ವರ್ತುಲ ರಸ್ತೆಗೆ ಬಳಸಿಕೊಳ್ಳಲಾಗಿತ್ತು. ಉಳಿದ ನಾಲ್ಕೂವರೆ ಎಕರೆ ಪೈಕಿ ಒಂದೂವರೆ ಎಕರೆ ಜಾಗವನ್ನು ಬಿಟ್ಟುಕೊಟ್ಟಿರಲಿಲ್ಲ.

ಬೆಳ್ಳಂಬೆಳಗ್ಗೆ ಘರ್ಜಿಸಿದ ಜೆಸಿಬಿ
ಬೆಳ್ಳಂಬೆಳಗ್ಗೆ ಘರ್ಜಿಸಿದ ಜೆಸಿಬಿ

ಬಿಡಿಎ ಸ್ವಾಧೀನವನ್ನು ಪ್ರಶ್ನಿಸಿ ಮಾಲೀಕರು 1989ರಲ್ಲಿ ಸಿಟಿ ಸಿವಿಲ್ ಕೋರ್ಟ್​ನ ಮೊರೆ ಹೋಗಿದ್ದರಾದರೂ ಬಿಡಿಎ ಪರವಾಗಿ ತೀರ್ಪು ಬಂದಿತ್ತು. ಇದಲ್ಲದೇ, ಎರಡು ಬಾರಿ ಹೈಕೋರ್ಟ್​ಗೆ ಹೋಗಿದ್ದರೂ ಅಲ್ಲಿಯೂ ಅವರಿಗೆ ಸೋಲುಂಟಾಗಿತ್ತು. ಆದಾಗ್ಯೂ, ಸದರಿ ಜಾಗದಲ್ಲಿ ವಾಣಿಜ್ಯ ಮಳಿಗೆಗಳನ್ನು ನಿರ್ಮಾಣ ಮಾಡಿ ಅದರಿಂದ ಆದಾಯ ಗಳಿಸುತ್ತಿದ್ದರು. ಹಲವು ಬಾರಿ ಬಿಡಿಎ ಎಚ್ಚರಿಕೆ ನೀಡಿದ್ದರೂ ತೆರವು ಮಾಡಿರಲಿಲ್ಲ.

ಬೆಳ್ಳಂಬೆಳಗ್ಗೆ ಘರ್ಜಿಸಿದ ಜೆಸಿಬಿ : ಈ ಹಿನ್ನೆಲೆ ಮಂಗಳವಾರ ಬಿಡಿಎ ಅಧ್ಯಕ್ಷ ಎಸ್ ಆರ್ ವಿಶ್ವನಾಥ್ ಮತ್ತು ಆಯುಕ್ತ ರಾಜೇಶ್ ಗೌಡ ಅವರ ಮಾರ್ಗದರ್ಶನದಲ್ಲಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಭಾಸ್ಕರ್ ಮತ್ತು ರವಿಕುಮಾರ್ ನೇತೃತ್ವದಲ್ಲಿ ಕಾರ್ಯಪಾಲಕ ಇಂಜಿನಿಯರ್ ಜಿ. ಕುಮಾರ್ ಅವರನ್ನೊಳಗೊಂಡ ಅಧಿಕಾರಿಗಳ ತಂಡವು ಸ್ಥಳೀಯ ಪೊಲೀಸರ ನೆರವಿನಿಂದ 15ಕ್ಕೂ ಹೆಚ್ಚು ಜೆಸಿಬಿಗಳನ್ನು ಬಳಸಿ 15 ವಾಣಿಜ್ಯ ಮಳಿಗೆಗಳು ಹಾಗೂ ಶೆಡ್‌ಗಳನ್ನು ನೆಲಸಮ ಮಾಡಿ ಜಾಗವನ್ನು ಬಿಡಿಎ ವಶಕ್ಕೆ ಪಡೆದುಕೊಂಡಿದೆ.

200ಕ್ಕೂ ಹೆಚ್ಚು ಪೊಲೀಸರಿಂದ ಭದ್ರತೆ : ಈ ಹಿಂದೆ ಮೂರ್ನಾಲ್ಕು ಬಾರಿ ಕಟ್ಟಡಗಳನ್ನು ನೆಲಸಮ ಮಾಡಲು ತೆರಳಿದ ಸಂದರ್ಭದಲ್ಲಿ ಮಾಲೀಕರು ತಮ್ಮ ಪ್ರಭಾವ ಬೀರಿ ಮತ್ತು ಪ್ರತಿಭಟನೆ ನಡೆಸಿದ್ದರಿಂದ ತೆರವುಗೊಳಿಸಲು ಸಾಧ್ಯವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಬಿಡಿಎ ಅಧಿಕಾರಿಗಳು 200ಕ್ಕೂ ಹೆಚ್ಚು ಪೊಲೀಸರ ಭದ್ರತೆಯನ್ನು ಪಡೆದುಕೊಂಡು ತೆರವು ಕಾರ್ಯಾಚರಣೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ.

ಕ್ರಿಮಿನಲ್ ಕೇಸ್ : ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಡಿಎ ಅಧ್ಯಕ್ಷ ಎಸ್. ಆರ್ ವಿಶ್ವನಾಥ್, ಬಿಡಿಎ ಉಸ್ತುವಾರಿಯನ್ನೂ ಹೊತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಎಷ್ಟೇ ಪ್ರಭಾವಿಗಳು ಬಿಡಿಎ ಜಾಗವನ್ನು ಒತ್ತುವರಿ ಮಾಡಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಜಾಗವನ್ನು ವಶಕ್ಕೆ ತೆಗೆದುಕೊಳ್ಳಬೇಕೆಂದು ಸೂಚನೆ ನೀಡಿದ್ದಾರೆ. ಅದರಂತೆ ಬಿಡಿಎ ಕ್ರಮಕೈಗೊಳ್ಳುತ್ತಿದೆ ಎಂದು ತಿಳಿಸಿದ್ದಾರೆ.

ಹೆಚ್​ಬಿಆರ್, ಹೆಚ್ಎಸ್ಆರ್ ಬಡಾವಣೆಗಳು ಸೇರಿದಂತೆ ನಗರದ ವಿವಿಧ ಬಡಾವಣೆಗಳಲ್ಲಿ ಸಾವಿರಾರು ಕೋಟಿ ರೂಪಾಯಿ ಮೌಲ್ಯದ ಬಿಡಿಎ ಜಾಗವನ್ನು ಒತ್ತುವರಿ ಮಾಡಿಕೊಂಡಿರುವ ಮಾಹಿತಿಗಳಿವೆ. ಈ ಹಿನ್ನೆಲೆಯಲ್ಲಿ ಒತ್ತುವರಿದಾರರು ಬಿಡಿಎ ಜಾಗವನ್ನು ಸ್ವಯಂಪ್ರೇರಿತವಾಗಿ ಕೂಡಲೇ ಬಿಟ್ಟು ಕೊಡಬೇಕು. ಇಲ್ಲವಾದರೆ, ಕಾನೂನು ರೀತಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ, ಸದರಿ ಜಾಗಗಳನ್ನು ವಶಪಡಿಸಿಕೊಳ್ಳಲಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಓದಿ: 40% ಕಮಿಷನ್ ಆರೋಪಕ್ಕೆ ಸಂಬಂಧಿಸಿದಂತೆ ದಾಖಲೆ ಕೇಳಿದ್ದನ್ನು ಸ್ವಾಗತಿಸಿದ ಸಚಿವರು

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.