ETV Bharat / state

24 ವರ್ಷ ಕಳೆದರೂ ಭೂ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸದ ಬಿಡಿಎ: ಮಾಲೀಕರಿಗೆ ಜಮೀನು ಹಿಂದಿರುಗಿಸಿದ ಹೈಕೋರ್ಟ್ - ಈಟಿವಿ ಭಾರತ ಕನ್ನಡ

ಭೂ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸದ ಮಾಲೀಕರಿಗೆ ಜಮೀನು ಹಿಂತಿರುಗಿಸುವಂತೆ ಹೈಕೋರ್ಟ್​ ಆದೇಶಿಸಿದೆ.

bda-not-completed-land-acquisition-process-high-court-ordered-to-return-the-land
24 ವರ್ಷ ಕಳೆದರೂ ಭೂ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸದ ಬಿಡಿಎ: ಮಾಲೀಕರಿಗೆ ಜಮೀನು ಹಿಂದಿರುಗಿಸಿದ ಹೈಕೋರ್ಟ್
author img

By

Published : Feb 22, 2023, 5:56 PM IST

ಬೆಂಗಳೂರು : ರಾಜಧಾನಿ ಬೆಂಗಳೂರು ನಗರದ ಎಚ್‌ಎಸ್‌ಆರ್ ಬಡಾವಣೆ ನಿರ್ಮಾಣಕ್ಕಾಗಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ) 11 ಮಂದಿಯ ಭೂಮಿಯನ್ನು ಸ್ವಾಧೀನಕ್ಕೆ ಅಧಿಸೂಚನೆ ಹೊರಡಿಸಿ 24 ವರ್ಷ ಕಳೆದರೂ ಪ್ರಕ್ರಿಯೆ ಪೂರ್ಣಗೊಳಿಸದ ಹಿನ್ನೆಲೆಯಲ್ಲಿ ಭೂಮಿಯನ್ನು ಮಾಲೀಕರಿಗೆ ಹಿಂದಿರುಗಿಸುವಂತೆ ಹೈಕೋರ್ಟ್ ಸೂಚನೆ ನೀಡಿ ಆದೇಶಿಸಿದೆ. ಹೈಕೋರ್ಟನ ಈ ಆದೇಶದಿಂದ ಕಳೆದ 24 ವರ್ಷಗಳ ಕಾಲ ನ್ಯಾಯಾಂಗ ಹೋರಾಟ ನಡೆಸಿದ ಮಾಲೀಕರಿಗೆ ತಮ್ಮ ಭೂಮಿ ಮತ್ತೆ ಲಭ್ಯವಾದಂತಾಗಿದೆ.

ಭೂ ಸ್ವಾಧೀನಕ್ಕೆ ಅಧಿಸೂಚನೆ ಹೊರಡಿಸಿ 24 ವರ್ಷ ಕಳೆದರೂ ಪ್ರಕ್ರಿಯೆ ಪೂರ್ಣಗೊಳಿಸದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕ್ರಮವನ್ನು ಪ್ರಶ್ನಿಸಿ ಆರು ಮೇಲ್ಮನವಿ ಅರ್ಜಿಗಳು ಮತ್ತು ಐದು ಅರ್ಜಿಗಳು ಸೇರಿ 11 ಮಂದಿ ಭೂ ಮಾಲೀಕರು ಪ್ರತ್ಯೇಕವಾಗಿ ಆರು ಅರ್ಜಿಗಳನ್ನು ಸಲ್ಲಿಸಿದ್ದರು. ಈ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆಲೋಕ್ ಆರಾಧೆ ಮತ್ತು ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ.

ಅಲ್ಲದೆ, 1984ರಲ್ಲಿ ಪ್ರಕ್ರಿಯೆ ಪ್ರಾರಂಭವಾಗಿದ್ದರೂ, 2011ರ ವರೆಗೂ ಪ್ರಕ್ರಿಯೆ ಪೂರ್ಣಗೊಳಿಸಿಲ್ಲ. ಈ ಪ್ರಕ್ರಿಯೆಯಲ್ಲಿ ಬಿಡಿಎ ಸಂಪೂರ್ಣ ವಿಫಲವಾಗಿದೆ. ಇದೊಂದು ಅಸಮಂಜಸ ಮತ್ತು ವಿವರಿಸಲಾಗದ ಪ್ರಕರಣವಾಗಿದೆ ಎಂದು ಅಭಿಪ್ರಾಯ ಪಟ್ಟಿರುವ ನ್ಯಾಯಪೀಠ ಬಿಡಿಎ ಭೂ ಸ್ವಾಧೀನಕ್ಕೆ ಹೊರಡಿಸಿದ್ದ ಅಧಿಸೂಚನೆಯನ್ನು ರದ್ದುಪಡಿಸಿದೆ.

ಇನ್ನು ಈ ಪ್ರಕರಣದಲ್ಲಿ 24 ವರ್ಷ ಕಳೆದರೂ, ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ ಭೂ ಮಾಲೀಕರಿಗೆ ಪರಿಹಾರವನ್ನು ನೀಡಿಲ್ಲ. ಭೂ ಸ್ವಾಧೀನ ಪ್ರಕ್ರಿಯೆ ಕಾಯಿದೆಯಲ್ಲಿರುವ ಕಾಲ ಮಿತಿಗಿಂತಲೂ ಹೆಚ್ಚು ಸಮಯ ತೆಗೆದುಕೊಳ್ಳಲಾಗಿದೆ. ಇದಕ್ಕೆ ಬಿಡಿಎ ಯಾವುದೇ ರೀತಿಯ ಸಮಂಜಸವನ್ನು ನೀಡಿಲ್ಲ. ಜತೆಗೆ, ಭೂಮಿಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳನ್ನೂ ಕೈಗೊಂಡಿಲ್ಲ. ಹೀಗಾಗಿ ವಿನಾ ಕಾರಣ ವಿಳಂಬ ಮಾಡಲಾಗಿದೆ ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ತಿಳಿಸಿದೆ.

ಪ್ರಕರಣದ ಹಿನ್ನೆಲೆ : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಭೂಸ್ವಾಧೀನಪಡಿಸಿಕೊಳ್ಳುವುದಕ್ಕಾಗಿ 1984ರಲ್ಲಿ ಪ್ರಾಥಮಿಕ ಅಧಿಸೂಚನೆ ಹೊರಡಿಸಿತ್ತು. 1986ರಲ್ಲಿ ಅಂತಿಮ ಅಧಿಸೂಚನೆ ಹೊರಡಿಸಿತ್ತು. ಆದರೆ, ಬಿಡಿಎ ಭೂಮಿ ಸ್ವಾಧೀನ ಪಡಿಸಿಕೊಳ್ಳುವುದಕ್ಕಾಗಿ ಯಾವುದೇ ರೀತಿಯ ಪರಿಹಾರವನ್ನು ಮಾಲೀಕರಿಗೆ ನೀಡಿರಲಿಲ್ಲ. ಇದನ್ನು ಪ್ರಶ್ನಿಸಿ ಭೂ ಮಾಲೀಕರು 2010ರಲ್ಲಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿ ವಿಚಾರಣೆ ನಡೆಸಿದ್ದ ಏಕ ಸದಸ್ಯಪೀಠ, 2011ರಲ್ಲಿ ಭೂ ಸ್ವಾಧೀನ ಪ್ರಕ್ರಿಯೆ ವಿಳಂಬವಾಗಿದೆ ಎಂದು ತಿಳಿಸಿದ್ದರೂ, ಸ್ವಾಧೀನ ಪ್ರಕ್ರಿಯೆಯನ್ನು ರದ್ದು ಮಾಡುವುದಕ್ಕೆ ಮುಂದಾಗಿರಲಿಲ್ಲ. ಆದರೆ, ಮಾರುಕಟ್ಟೆ ಮೌಲ್ಯಕ್ಕಿಂತ ಶೇ.12 ರಷ್ಟು ಹೆಚ್ಚುವರಿ ಪರಿಹಾರ ನೀಡಬೇಕು ಎಂದು ಆದೇಶಿಸಿತ್ತು.
ಏಕ ಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ಅರ್ಜಿದಾರರು ಹೈಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಇತರೆ ಅರ್ಜಿದಾರರು ಭೂಸ್ವಾಧೀನ ಪ್ರಕ್ರಿಯೆಯನ್ನು ವಿಳಂಬ ಮಾಡಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದರು. ಎಲ್ಲ ಅರ್ಜಿಗಳ ಏಕಕಾಲಕ್ಕೆ ವಿಚಾರಣೆ ನಡೆಸಿದ ನ್ಯಾಯಪೀಠ ಭೂಮಿಯನ್ನು ಮಾಲೀಕರಿಗೆ ಹಿಂದಿರುಗಿಸಲು ಸೂಚನೆ ನೀಡಿ ಆದೇಶಿಸಿದೆ.

ಇದನ್ನೂ ಓದಿ : ಹಿಜಾಬ್‌ ತುರ್ತು ವಿಚಾರಣೆಗಾಗಿ ಪಟ್ಟಿ ಮಾಡಲು ಮುಖ್ಯ ನ್ಯಾಯಮೂರ್ತಿಗಳ ಒಪ್ಪಿಗೆ!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.