ETV Bharat / state

ಬೆಂಗಳೂರಿನಲ್ಲಿ ಜೆಸಿಬಿ ಘರ್ಜನೆ: ₹30 ಕೋಟಿ ಮೌಲ್ಯದ ಬಿಡಿಎ ಆಸ್ತಿ ಮರುವಶ - etv bharat kannada

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಭೂಒತ್ತುವರಿದಾರರ ವಿರುದ್ಧ ದಾಳಿಯನ್ನು ಮುಂದುವರೆಸಿದ್ದು, ಸುಮಾರು 30 ಕೋಟಿ ರೂಪಾಯಿ ಮೌಲ್ಯದ 22 ಗುಂಟೆ ಜಾಗವನ್ನು ತನ್ನ ವಶಕ್ಕೆ ಪಡೆದುಕೊಂಡಿದೆ.

BDA recovers 30 crore worth of encroached land
ಬೆಳ್ಳಂಬೆಳಗ್ಗೆ ಜೆಸಿಬಿ ಘರ್ಜನೆ: 30 ಕೋಟಿ ಮೌಲ್ಯದ ಬಿಡಿಎ ಆಸ್ತಿ ಮರುವಶ
author img

By

Published : Nov 22, 2022, 1:09 PM IST

ಬೆಂಗಳೂರು: ಭೂ ಒತ್ತುವರಿದಾರರ ವಿರುದ್ಧ ಸಮರ ಮುಂದುವರಿಸಿರುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ) ಇಂದು ಬೆಳ್ಳಂಬೆಳಗ್ಗೆ ಸುಮಾರು 30 ಕೋಟಿ ರೂಪಾಯಿ ಮೌಲ್ಯದ 22 ಗುಂಟೆ ಜಾಗವನ್ನು ತನ್ನ ವಶಕ್ಕೆ ತೆಗೆದುಕೊಂಡಿದೆ.

ಎಲ್ಲೆಲ್ಲಿ ಒತ್ತುವರಿ ತೆರವು?: ಜೆಪಿ ನಗರ 9 ನೇ ಹಂತದ 1ನೇ ಬ್ಲಾಕ್‌ನಲ್ಲಿನ ಆಲಹಳ್ಳಿ ಸರ್ವೆ ಸಂಖ್ಯೆ 4/1 ರಲ್ಲಿ 22 ಗುಂಟೆ ಜಾಗ ಬಿಡಿಎಗೆ ಸೇರಿದ್ದಾಗಿತ್ತು. ಆದರೆ, ಕೆಲವು ಅತಿಕ್ರಮಣದಾರರು ಈ ಜಾಗದಲ್ಲಿ ಕಳೆದ ಹತ್ತು ವರ್ಷಗಳಿಂದ ತಾತ್ಕಾಲಿಕ್ ಶೆಡ್‌ಗಳನ್ನು ನಿರ್ಮಿಸಿಕೊಂಡು ವ್ಯಾಪಾರ ವಹಿವಾಟು ನಡೆಸುತ್ತಿದ್ದರು. ಬಿಡಿಎ ಅಧ್ಯಕ್ಷ ಎಸ್.ಆರ್ ವಿಶ್ವನಾಥ್ ಸೂಚನೆ ಮೇರೆಗೆ, ಒತ್ತುವರಿ ಮತ್ತು ಬಿಡಿಎ ಜಾಗವನ್ನು ಮರುವಶಕ್ಕೆ ಪಡೆದುಕೊಳ್ಳಬೇಕೆಂದು ಬಿಡಿಎ ಅಧಿಕಾರಿಗಳು ಮತ್ತು ಎಂಜಿನಿಯರ್‌ಗಳು ತೆರವು ಕಾರ್ಯಾಚರಣೆ ನಡೆಸಿದ್ದಾರೆ. ಬಿಗಿ ಪೊಲೀಸ್ ಬಂದೋಬಸ್ತ್​ನಲ್ಲಿ 6 ತಾತ್ಕಾಲಿಕ ಶೆಡ್​ಗಳನ್ನು ತೆರವುಗೊಳಿಸಲಾಯಿತು.

ನಕಲಿ ಎನ್ಒಸಿ ಇದ್ದರೆ ಕ್ರಿಮಿನಲ್ ಕೇಸ್: ಈ ಬಗ್ಗೆ ಮಾತನಾಡಿದ ಬಿಡಿಎ ಅಧ್ಯಕ್ಷ ಎಸ್.ಆರ್ ವಿಶ್ವನಾಥ್, ಈ ಹಿಂದೆ ಕೆಲವು ಅಧಿಕಾರಿಗಳು ಮತ್ತು ಸಿಬ್ಬಂದಿ ಹಣದಾಸೆಗೆ ಬಿದ್ದು ಪ್ರಭಾವಿಗಳು ಮತ್ತು ಭೂ ಕಬಳಿಕೆದಾರರಿಗೆ ನಕಲಿ ಎನ್ಒಸಿಗಳನ್ನು ಕೊಟ್ಟು ಬಿಡಿಎ ಜಾಗವನ್ನು ಅತಿಕ್ರಮಣವಾಗುವಂತೆ ಮಾಡಿದ್ದರು. ಇದೀಗ ಇಂತಹ ನಕಲಿ ಎನ್ಒಸಿ ಪ್ರಕರಣಗಳನ್ನು ಬಯಲಿಗೆ ತರಲಾಗುತ್ತಿದ್ದು, ತನಿಖೆ ನಡೆಸಲಾಗುತ್ತಿದೆ. ಯಾವುದೇ ಅಧಿಕಾರಿ ಮತ್ತು ಸಿಬ್ಬಂದಿ ತಪ್ಪೆಸಗಿದ್ದರೆ ಅಂತಹವರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತದೆ. ಅದೇ ರೀತಿ, ನಕಲಿ ಎನ್ಒಸಿ ಬಳಸಿಕೊಂಡು ಬಿಡಿಎ ಜಾಗವನ್ನು ತಮ್ಮ ಸುಪರ್ದಿಯಲ್ಲಿಟ್ಟುಕೊಂಡಿರುವ ಕಬಳಿಕೆದಾರರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಮಾಹಿತಿ ನೀಡುವಂತೆ ಸಾರ್ವಜನಿಕರಿಗೆ ಮನವಿ: ಈ ಮಧ್ಯೆ, ನಕಲಿ ದಾಖಲೆಗಳನ್ನು ಸೃಷ್ಟಿಸಿ ಬಿಡಿಎ ಜಾಗದಲ್ಲಿ ಹಿಡಿತ ಸಾಧಿಸುತ್ತಿರುವ ಭೂ ಕಬಳಿಕೆದಾರರ ಬಗ್ಗೆ ಮಾಹಿತಿ ಮತ್ತು ದಾಖಲೆಗಳಿದ್ದರೆ ಬಿಡಿಎ ಅಧ್ಯಕ್ಷರು, ಆಯುಕ್ತರು ಮತ್ತು ಜಾಗೃತ ದಳದ ಪೊಲೀಸ್ ವರಿಷ್ಠಾಧಿಕಾರಿಗಳ ಗಮನಕ್ಕೆ ತರಬೇಕೆಂದು ಮನವಿ ಮಾಡಿದ್ದಾರೆ. ಹೀಗೆ ಮಾಹಿತಿ ನೀಡುವ ಸಾರ್ವಜನಿಕರ ಹೆಸರನ್ನು ಗೌಪ್ಯವಾಗಿಟ್ಟು, ತನಿಖೆ ನಡೆಸಿ ಅಂತಹ ಜಾಗಗಳನ್ನು ವಶಕ್ಕೆ ಪಡೆದು, ಸಾರ್ವಜನಿಕರಿಗೆ ಹಂಚಿಕೆ ಮಾಡಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ:ಮಹಾರಾಷ್ಟ್ರದಲ್ಲಿರುವ ಕನ್ನಡಿಗ ಸ್ವಾತಂತ್ರ್ಯ, ಏಕೀಕರಣ ಹೋರಾಟಗಾರರಿಗೆ ಪಿಂಚಣಿ: ಸಿಎಂ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.