ಬೆಂಗಳೂರು: ಅಕ್ರಮ-ಸಕ್ರಮ ಯೋಜನೆ ಮೂಲಕ ರಾಜ್ಯ ಖಜಾನೆ ಸಂಗ್ರಹಕ್ಕೆ ನಿರ್ಧರಿಸಿದ್ದು, ಈ ಸಂಬಂಧ ಬಿಡಿಎ ವ್ಯಾಪ್ತಿಗೆ ಸೀಮಿತವಾದ ಕ್ರಮಗಳ ಕುರಿತು ಚರ್ಚೆ ನಡೆಸಲಾಯಿತು.
ಸದ್ಯ ಸುಪ್ರೀಂಕೋರ್ಟ್ನಲ್ಲಿ ಈ ಸಂಬಂಧ ಪ್ರಕರಣ ಇರುವ ಕಾರಣ ಸಭೆಯಲ್ಲಿ ಯಾವುದೇ ನಿರ್ಧಾರ ಕೈಗೊಳ್ಳದೇ ಮತ್ತೊಮ್ಮೆ ಸಭೆ ನಡೆಸುವ ತೀರ್ಮಾನದೊಂದಿಗೆ ಸಭೆ ಮುಗಿಸಲಾಯಿತು ಎಂದು ಮೂಲಗಳು ತಿಳಿಸಿವೆ.
ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಇಂದು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಸಕ್ರಮೀಕರಣ ಉಪಸಮಿತಿ ಸಭೆ ಜರುಗಿತು.
ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಕಂದಾಯ ಸಚಿವ ಆರ್.ಅಶೋಕ್, ವಸತಿ ಸಚಿವ ವಿ.ಸೋಮಣ್ಣ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ, ಪ್ರಾಥಮಿಕ ಶಿಕ್ಷಣ ಸಚಿವ ಸುರೇಶ್ ಕುಮಾರ್, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಇದ್ದರು.