ETV Bharat / state

ಭೂ ಕಬಳಿಕೆದಾರರ ವಿರುದ್ಧ ಮುಂದುವರಿದ ಕಾರ್ಯಾಚರಣೆ: 40.57 ಕೋಟಿ ರೂ. ಮೌಲ್ಯದ ಆಸ್ತಿ ವಶಕ್ಕೆ ಪಡೆದ ಬಿಡಿಎ - BDA seized property news

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ನಿನ್ನೆ ನಗರದಲ್ಲಿ ಕಾರ್ಯಾಚರಣೆ ನಡೆಸಿ ಒಟ್ಟು 40.57 ಕೋಟಿ ರೂ. ಮೌಲ್ಯದ ಆಸ್ತಿಯನ್ನು ವಶಕ್ಕೆ ಪಡೆದುಕೊಂಡರು.

BDA seized 40.57 crore Rs.property in bengaluru
ಭೂ ಕಬಳಿಕೆದಾರರ ವಿರುದ್ಧ ಮುಂದುವರೆದ ಕಾರ್ಯಾಚರಣೆ
author img

By

Published : Sep 17, 2021, 9:30 AM IST

ಬೆಂಗಳೂರು: ಭೂ ಕಬಳಿಕೆದಾರರ ವಿರುದ್ಧ ಕಾರ್ಯಾಚರಣೆ ಮುಂದುವರೆಸಿರುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಗುರುವಾರ ಒಟ್ಟು 40.57 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಮರು ವಶ ಪಡೆಸಿಕೊಂಡಿದೆ.

ಬೆಂಗಳೂರು ಉತ್ತರ ತಾಲೂಕಿನ ಯಶವಂತಪುರ ಹೋಬಳಿಯ ಉಲ್ಲಾಳು ಗ್ರಾಮದ ಸರ್ವೇ ಸಂಖ್ಯೆ 156/2 ರಲ್ಲಿನ 1 ಎಕರೆ 12 ಗುಂಟೆ ಮತ್ತು ಸರ್ವೇ ನಂಬರ್​ 156/3 ರಲ್ಲಿನ 1 ಎಕರೆ 28 ಗುಂಟೆ ಪ್ರದೇಶವನ್ನು ಬಿಡಿಎ ಬಡಾವಣೆ ನಿರ್ಮಾಣಕ್ಕೆ ಎಂದು ಸ್ವಾಧೀನ ಮಾಡಿಕೊಂಡಿತ್ತು. ಈ ಬಗ್ಗೆ ಭೂ ಮಾಲೀಕರು ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದರು. ವಿಚಾರಣೆ ನಡೆಸಿದ್ದ ನ್ಯಾಯಾಲಯ ಬಿಡಿಎ ಪರವಾಗಿ ತೀರ್ಪು ನೀಡಿತ್ತು.

ಈ ಹಿನ್ನೆಲೆಯಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಭಾಸ್ಕರ್ ಮತ್ತು ಕಾರ್ಯಕಾರಿ ಇಂಜಿನಿಯರ್ ಸುಷ್ಮಾ ನೇತೃತ್ವದಲ್ಲಿ ಬಿಡಿಎ ಅಧಿಕಾರಿಗಳ ತಂಡ ಗುರುವಾರ ಜಾಗದಲ್ಲಿ ನಿರ್ಮಾಣವಾಗಿದ್ದ ತಾತ್ಕಾಲಿಕ ಶೆಡ್​ಗಳನ್ನು ತೆರವುಗೊಳಿಸಿ ಜಾಗವನ್ನು ಬಿಡಿಎ ವಶಕ್ಕೆ ಪಡೆದುಕೊಂಡರು. ಈ ಭೂಮಿಯ ಪ್ರಸ್ತುತ ಮಾರುಕಟ್ಟೆ ದರ 34.52 ಕೋಟಿ ರೂ ಎಂದು ತಿಳಿದು ಬಂದಿದೆ.

ನಗರದಲ್ಲಿ ಕಾರ್ಯಾಚರಣೆ ನಡೆಸಿದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು

ಮತ್ತೊಂದು ಕಾರ್ಯಾಚರಣೆ:

ಗುರುವಾರ ನಡೆದ ಮತ್ತೊಂದು ಕಾರ್ಯಾಚರಣೆಯಲ್ಲಿ ಸರ್ ಎಂ.ವಿಶ್ವೇಶ್ವರಯ್ಯ ಬಡಾವಣೆಯ 6 ನೇ ಬ್ಲಾಕ್ ನಲ್ಲಿ ನಿವೇಶನ ರಚನೆಗಾಗಿ ಭೂ ಸ್ವಾಧೀನಪಡಿಸಿಕೊಳ್ಳಲಾಗಿತ್ತು. ಆದರೆ, ಉಲ್ಲಾಳು ಗ್ರಾಮದ ಸರ್ವೇ ಸಂಖ್ಯೆ 202 ರಲ್ಲಿ ಸ್ವಾಧೀನಪಡಿಸಿಕೊಳ್ಳಲಾಗಿದ್ದ 30x40 ಅಳತೆಯ 7 ನಿವೇಶನಗಳಲ್ಲಿ ಅಕ್ರಮವಾಗಿ ತಾತ್ಕಾಲಿಕ ಶೆಡ್​ಗಳನ್ನು ನಿರ್ಮಾಣ ಮಾಡಲಾಗಿತ್ತು.

ನ್ಯಾಯಾಲಯದ ಆದೇಶದಂತೆ ಈ ಶೆಡ್​ಗಳನ್ನು ತೆರವುಗೊಳಿಸಿದ ಅಧಿಕಾರಿಗಳು ಸ್ವತ್ತನ್ನು ಬಿಡಿಎ ವಶಕ್ಕೆ ಪಡೆದುಕೊಂಡರು. ಈ ನಿವೇಶನಗಳ ಪ್ರಸ್ತುತ ಮಾರುಕಟ್ಟೆ ಮೌಲ್ಯ 6.05 ಕೋಟಿ ರೂ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್, ವಿವಿಧ ಬಡಾವಣೆಗಳಲ್ಲಿ ಬಿಡಿಎಗೆ ಸೇರಿದ ಅಪಾರ ಮೌಲ್ಯದ ಸ್ವತ್ತುಗಳು ಒತ್ತುವರಿಯಾಗಿವೆ. ಗಣೇಶ ಹಬ್ಬಕ್ಕೆ ಮುನ್ನ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಆರಂಭಿಸಿದ್ದೇವೆ. ಈ ಕಾರ್ಯಾಚರಣೆ ನಿರಂತರವಾಗಿ ನಡೆಯಲಿದ್ದು, ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅವರ ವಶದಲ್ಲಿರುವ ಬಿಡಿಎ ಆಸ್ತಿಯನ್ನು ವಶಪಡಿಸಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಇನ್ನು ಈ ಕಾರ್ಯಾಚರಣೆಯಲ್ಲಿ ಡಿವೈಎಸ್ ಪಿ ಬಾಲಕೃಷ್ಣ, ಪೊಲೀಸ್ ಇನ್ಸ್​ಪೆಕ್ಟರ್​ಗಳಾದ ಶ್ರೀನಿವಾಸ್ ಮತ್ತು ಲಕ್ಷ್ಮಯ್ಯ, ಇಂಜಿನಿಯರ್ ಪ್ರಕಾಶ್ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.