ETV Bharat / state

ರೈತರ ಬಗ್ಗೆ ಮೃದು ಧೋರಣೆ ಇರಲಿ: ಬ್ಯಾಂಕಿನ ಮುಖ್ಯಸ್ಥರಿಗೆ ಸಿಎಂ ಹೆಚ್​ಡಿಕೆ ಸಲಹೆ - ವಿಧಾನಸೌಧದ ಸಮಿತಿ ಕೊಠಡಿ

ಕಳೆದ 15 ವರ್ಷಗಳಲ್ಲಿ ಕರ್ನಾಟಕ 12 ವರ್ಷ ಬರ ಪರಿಸ್ಥಿತಿ ಎದುರಿಸಿದೆ. ರೈತರು ಬಹಳ ಸಂಕಷ್ಟದಲ್ಲಿದ್ದಾರೆ. ಆದ್ದರಿಂದ ಬ್ಯಾಂಕುಗಳು ರೈತರ ಬಗ್ಗೆ ಸ್ವಲ್ಪ ಮೃದು ಧೋರಣೆಯನ್ನು ಅನುಸರಿಸಬೇಕು ಎಂದು ಬ್ಯಾಂಕಿನ ಅಧಿಕಾರಿಗಳಿಗೆ ಸಿಎಂ ಸಲಹೆ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಲೀಡ್‍ ಬ್ಯಾಂಕ್ ಮುಖ್ಯಸ್ಥರು, ಬ್ಯಾಂಕುಗಳು ರೈತರ ಬಗ್ಗೆ ಕಾಳಜಿ ವಹಿಸುತ್ತವೆ ಎಂದರು.

ಸಭೆ
author img

By

Published : Jun 14, 2019, 9:52 PM IST

ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಶುಕ್ರವಾರ ಸಾಲಮನ್ನಾ ಯೋಜನೆಗೆ ಸಂಬಂಧಿಸಿದಂತೆ ಸರ್ಕಾರದ ಅಧಿಕಾರಿಗಳು ಹಾಗೂ ಬ್ಯಾಂಕ್ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಶುಕ್ರವಾರ ಸಂಜೆ ನಡೆದ ಸಭೆಯಲ್ಲಿ 14 ಬ್ಯಾಂಕುಗಳ ಪ್ರತಿನಿಧಿಗಳು ಭಾಗವಹಿಸಿದ್ದರು.

ಸಾಲಮನ್ನಾ ಯೋಜನೆಯಡಿ 4 ವರ್ಷಗಳಲ್ಲಿ ಹಂತ ಹಂತವಾಗಿ ಬ್ಯಾಂಕುಗಳಿಗೆ ಮೊತ್ತ ಪಾವತಿಸುವುದಾಗಿ ತಿಳಿಸಲಾಗಿತ್ತು. ಆದರೆ ಒಂದೇ ವರ್ಷದೊಳಗಾಗಿ ಎಲ್ಲ ಅರ್ಹ ಖಾತೆಗಳಿಗೆ ಸರ್ಕಾರದ ಮಾರ್ಗಸೂಚಿಯನ್ವಯ ಸಂಪೂರ್ಣ ಮೊತ್ತ ಪಾವತಿ ಮಾಡಲಾಗಿದೆ. ಆದ್ದರಿಂದ ರೈತರಿಗೆ ಮತ್ತೆ ಬೆಳೆ ಸಾಲ ಪಡೆಯಲು ಅವಕಾಶ ಕಲ್ಪಿಸಬೇಕು ಎಂದು ಮುಖ್ಯಮಂತ್ರಿಗಳು ಬ್ಯಾಂಕ್ ಪ್ರತಿನಿಧಿಗಳಿಗೆ ತಿಳಿಸಿದರು.

ಕಳೆದ 15 ವರ್ಷಗಳಲ್ಲಿ ಕರ್ನಾಟಕ 12 ವರ್ಷ ಬರ ಪರಿಸ್ಥಿತಿ ಎದುರಿಸಿದೆ. ರೈತರು ಬಹಳ ಸಂಕಷ್ಟದಲ್ಲಿದ್ದಾರೆ. ಆದ್ದರಿಂದ ಬ್ಯಾಂಕುಗಳು ರೈತರ ಬಗ್ಗೆ ಸ್ವಲ್ಪ ಮೃದು ಧೋರಣೆಯನ್ನು ಅನುಸರಿಸಬೇಕು ಎಂದು ಬ್ಯಾಂಕಿನ ಅಧಿಕಾರಿಗಳಿಗೆ ಸಲಹೆ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಲೀಡ್‍ ಬ್ಯಾಂಕ್ ಮುಖ್ಯಸ್ಥರು, ಬ್ಯಾಂಕುಗಳು ರೈತರ ಬಗ್ಗೆ ಕಾಳಜಿ ವಹಿಸುತ್ತವೆ ಎಂದರು.

ಸಭೆ ಬಳಿಕ ಮಾಹಿತಿ ನೀಡಿದ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್, ರೈತರ ಖಾತೆಯಿಂದ ಹಣ ವಾಪಸ್ ಆಗಿದೆ ಅನ್ನುವ ಸುದ್ದಿ ಹಿನ್ನೆಲೆಯಲ್ಲಿ ಸಭೆ ಮಾಡಿದ್ದು, 13,123 ಪ್ರಕರಣಗಳಲ್ಲಿ ಬ್ಯಾಂಕುಗಳು ಖುದ್ದಾಗಿ ಪರಿಶೀಲಿಸಿ ಅನರ್ಹ ಖಾತೆಗಳನ್ನು ಪತ್ತೆ ಹಚ್ಚಿವೆ. ಹೀಗಾಗಿ ಆ ಖಾತೆಗಳಿಂದ ಹಣ ವಾಪಸ್ ಪಡೆದಿದ್ದಾರೆ. ಈ ಖಾತೆಗಳನ್ನು ಬ್ಯಾಂಕ್​ನವರೇ ಪತ್ತೆ ಹಚ್ಚಿದ್ದಾರೆ. ಸುಮಾರು ₹ 59 ಕೋಟಿ ಹಣವನ್ನು ಬ್ಯಾಂಕ್​ನವರೇ ಸರ್ಕಾರಕ್ಕೆ ವಾಪಸ್ ನೀಡಿದ್ದಾರೆ ಎಂದು ಹೇಳಿದರು.

ಎಲ್ಲೆಲ್ಲಿ ಸಾಲಮನ್ನಾ ಆಗಿಲ್ಲವೋ ಅಲ್ಲಿ ಬ್ಯಾಂಕ್ ಅಧಿಕಾರಿಗಳೇ ಹೋಗಿ ಪತ್ತೆ ಹಚ್ಚಿದ್ದಾರೆ. ಸಾಲ‌ಮನ್ನಾ ಆಗಿರುವ ರೈತರಿಗೆ ತಕ್ಷಣ ಬೆಳೆ ಸಾಲಮನ್ನಾಗೆ ಆದೇಶ ನೀಡಲಾಗಿದೆ. ವಾಣಿಜ್ಯ ಬ್ಯಾಂಕ್ ಸಾಲಮನ್ನಾದ ವಿವರ ಈ ರೀತಿ ಇದ್ದು, ರಾಜ್ಯದಲ್ಲಿ ಒಟ್ಟು 16.31 ಲಕ್ಷ ರೈತರ ಸಾಲ ಇದೆ. ಅದರಲ್ಲಿ 4 ಲಕ್ಷ ರೈತರು ಸಹಕಾರಿ ಬ್ಯಾಂಕ್ ಸಾಲದಲ್ಲಿ ಸೇರಿಕೊಂಡಿದ್ದಾರೆ ಎಂದು ಹೇಳಿದರು.

ಹೀಗಾಗಿ 12 ಲಕ್ಷ ರೈತರು ಮಾತ್ರ ವಾಣಿಜ್ಯ ಬ್ಯಾಂಕ್ ಸಾಲದ ವ್ಯಾಪ್ತಿಗೆ ಬರುತ್ತಾರೆ. ಅದರಲ್ಲಿ 1.60 ಲಕ್ಷ ರೈತರು ಇನ್ನು ಸರಿಯಾದ ದಾಖಲಾತಿ‌ ಕೊಟ್ಟಿಲ್ಲ. ಹೀಗಾಗಿ ಅವರ ಸಾಲಮನ್ನಾ ಆಗಿಲ್ಲ. ಒಟ್ಟಾರೆ ₹ 27 ಸಾವಿರ ಕೋಟಿ ವಾಣಿಜ್ಯ ಬ್ಯಾಂಕ್ ಸಾಲ ಇದೆ. ಈ ಪೈಕಿ ₹ 5,297 ಕೋಟಿ ಬ್ಯಾಂಕ್​ಗಳಿಗೆ ಬಿಡುಗಡೆಯಾಗಿದೆ. ಈಗ ಮತ್ತೆ ಎನ್​​ಪಿಎ ಅಕೌಂಟ್​ನ ಒಂದು ಲಕ್ಷ ರೈತರ ಸಾಲಮನ್ನಾಕ್ಕಾಗಿ ₹ 960 ಕೋಟಿ ಬಿಡುಗಡೆಯಾಗಿದೆ. ಒಟ್ಟಾರೆ 8.5 ಲಕ್ಷ ರೈತರಿಗೆ ಸಾಲಮನ್ನಾ ಹಣ ಬಿಡುಗಡೆಯಾಗಿದೆ ಎಂದು ವಿಜಯ್​ ಭಾಸ್ಕರ್​ ವಿವರಿಸಿದರು.

Intro:ಬೆಂಗಳೂರು : ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ಸಾಲ ಮನ್ನಾ ಯೋಜನೆಗೆ ಸಂಬಂಧಿಸಿದಂತೆ ಸರ್ಕಾರದ ಹಿರಿಯ ಅಧಿಕಾರಿಗಳು ಹಾಗೂ ಬ್ಯಾಂಕ್ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.Body:ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಇಂದು ಸಂಜೆ ನಡೆದ ಸಭೆಯಲ್ಲಿ 14 ಬ್ಯಾಂಕುಗಳ ಪ್ರತಿನಿಧಿಗಳು ಭಾಗವಹಿಸಿದ್ದರು.
ಸಾಲ ಮನ್ನಾ ಯೋಜನೆಯಡಿ 4 ವರ್ಷಗಳಲ್ಲಿ ಹಂತ ಹಂತವಾಗಿ ಬ್ಯಾಂಕುಗಳಿಗೆ ಮೊತ್ತ ಪಾವತಿಸುವುದಾಗಿ ತಿಳಿಸಲಾಗಿತ್ತು. ಆದರೆ ಒಂದೇ ವರ್ಷದೊಳಗಾಗಿ ಎಲ್ಲ ಅರ್ಹ ಖಾತೆಗಳಿಗೆ ಸರ್ಕಾರದ ಮಾರ್ಗಸೂಚಿಯನ್ವಯ ಸಂಪೂರ್ಣ ಮೊತ್ತ ಪಾವತಿ ಮಾಡಲಾಗಿದೆ. ಆದ್ದರಿಂದ ಈ ರೈತರಿಗೆ ಮತ್ತೆ ಬೆಳೆ ಸಾಲ ಪಡೆಯಲು ಅವಕಾಶ ಕಲ್ಪಿಸಬೇಕು ಎಂದು ಮುಖ್ಯಮಂತ್ರಿಗಳು ಬ್ಯಾಂಕ್ ಪ್ರತಿನಿಧಿಗಳಿಗೆ ತಿಳಿಸಿದರು.
ಕಳೆದ 15 ವರ್ಷಗಳಲ್ಲಿ ಕರ್ನಾಟಕ 12 ವರ್ಷ ಬರ ಪರಿಸ್ಥಿತಿಯನ್ನು ಎದುರಿಸಿದೆ. ರೈತರು ಬಹಳ ಸಂಕಷ್ಟದಲ್ಲಿದ್ದಾರೆ. ಆದ್ದರಿಂದ ಬ್ಯಾಂಕುಗಳು ರೈತರ ಬಗ್ಗೆ ಸ್ವಲ್ಪ ಮೃದು ಧೋರಣೆಯನ್ನು ಅನುಸರಿಸುವಂತೆ ಮುಖ್ಯಮಂತ್ರಿಗಳು ಬ್ಯಾಂಕರುಗಳಿಗೆ ಸಲಹೆ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಲೀಡ್‍ ಬ್ಯಾಂಕ್ ಮುಖ್ಯಸ್ಥರು, ಬ್ಯಾಂಕುಗಳೂ ರೈತರ ಬಗ್ಗೆ ಕಾಳಜಿ ವಹಿಸುವುದು ಎಂದು ತಿಳಿಸಿದರು.
ಸರ್ಕಾರದ ಮಾರ್ಗಸೂಚಿಯನ್ವಯ ಫಲಾನುಭವಿಗಳನ್ನು ಗುರುತಿಸುವಾಗ ಕೆಲವು ಬ್ಯಾಂಕುಗಳು ತಪ್ಪು ಗ್ರಹಿಕೆಯಿಂದ ಲೋಪವುಂಟಾಗಿದೆ. ಇದನ್ನು ಕೂಡಲೇ ಸರಿಪಡಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.
ಇಂದು ಎನ್‍ ಪಿಎ ಸಾಲಗಳ ಮನ್ನಾ ಮೊತ್ತ ಬಿಡುಗಡೆಗೆ ಸರ್ಕಾರಿ ಆದೇಶ ಹೊರಡಿಸಿದ್ದು, ಈ ತಿಂಗಳೊಳಗಾಗಿ ಎಲ್ಲ ಬ್ಯಾಂಕುಗಳ ಎಲ್ಲ ಅರ್ಹ ಫಲಾನುಭವಿಗಳ ಸಾಲ ಖಾತೆಗೆ ಸಾಲ ಮನ್ನಾ ಮೊತ್ತ ಬಿಡುಗಡೆ ಮಾಡಲು ಕ್ರಮ ವಹಿಸುವಂತೆ ಮನವಿ ಮಾಡಲಾಯಿತು.
ಸಹಕಾರ ಸಚಿವ ಬಂಡೆಪ್ಪಾ ಕಾಶೆಂಪೂರ್, ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಅಭಿವೃದ್ಧಿ ಆಯುಕ್ತರಾದ ವಂದಿತಾ ಶರ್ಮ, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣರೆಡ್ಡಿ, ಕಾರ್ಯದರ್ಶಿ ಡಾ.ಎಸ್. ಸೆಲ್ವಕುಮಾರ್, ಭೂ ದಾಖಲೆಗಳು ಮತ್ತು ಭೂ ಮಾಪನಾ ಇಲಾಖೆ ಆಯುಕ್ತ ಮುನೀಶ್ ಮೌದ್ಗಿಲ್ ಮತ್ತಿತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
ಸಭೆ ಬಳಿಕ ಮಾಹಿತಿ ನೀಡಿದ ಸರ್ಕಾದ ಮುಖ್ಯಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್ ಅವರು, ರೈತರ ಖಾತೆಯಿಂದ ಹಣ ವಾಪಸ್ ಆಗಿದೆ ಅನ್ನುವ ಸುದ್ದಿ ಹಿನ್ನಲೆಯಲ್ಲಿ ಸಭೆ ಮಾಡಿದ್ದು,
13,123 ಪ್ರಕರಣಗಳಲ್ಲಿ ಬ್ಯಾಂಕ್ ಗಳು ಖುದ್ದಾಗಿ ಪರಿಶೀಲಿಸಿ ಅನರ್ಹ ಖಾತೆಗಳನ್ನು ಪತ್ತೆ ಹಚ್ಚಿದ್ದಾರೆ. ಹೀಗಾಗಿ ಆ ಖಾತೆಗಳಿಂದ ಹಣ ವಾಪಸ್ ಪಡೆದಿದ್ದಾರೆ. ಈ ಖಾತೆಗಳನ್ನು ಬ್ಯಾಂಕ್ ನವರೇ ಪತ್ತೆ ಹಚ್ಚಿದ್ದಾರೆ. ಸುಮಾರು 59 ಕೋಟಿ ರೂ. ಬ್ಯಾಂಕ್ ನವರೇ ಸರ್ಕಾರಕ್ಕೆ ವಾಪಸ್ ನೀಡಿದ್ದಾರೆ ಎಂದು ಹೇಳಿದರು.
ಎಲ್ಲೆಲ್ಲಿ ಸಾಲಮನ್ನಾ ಆಗಿಲ್ಲವೋ ಅಲ್ಲಿ ಬ್ಯಾಂಕ್ ಅಧಿಕಾರಿಗಳೇ ಹೋಗಿ ಪತ್ತೆ ಹಚ್ಚಿದ್ದಾರೆ. ಸಾಲ‌ಮನ್ನಾ ಆಗಿರೋ ರೈತರಿಗೆ ತಕ್ಷಣ ಬೆಳೆ ಸಾಲ ಮನ್ನಾಗೆ ಆದೇಶ ನೀಡಲಾಗಿದೆ.
ವಾಣಿಜ್ಯ ಬ್ಯಾಂಕ್ ಸಾಲಮನ್ನಾದ ವಿವರ ಈ ರೀತಿ ಇದ್ದು, ರಾಜ್ಯದಲ್ಲಿ ಒಟ್ಟು 16.31 ಲಕ್ಷ ರೈತರ ಸಾಲ ಇದೆ. ಅದರಲ್ಲಿ 4 ಲಕ್ಷ ರೈತರು ಸಹಕಾರಿ ಬ್ಯಾಂಕ್ ಸಾಲದಲ್ಲಿ ಸೇರಿಕೊಂಡಿದ್ದಾರೆ.
ಹೀಗಾಗಿ 12 ಲಕ್ಷ ರೈತರು ಮಾತ್ರ ವಾಣಿಜ್ಯ ಬ್ಯಾಂಕ್ ಸಾಲದ ವ್ಯಾಪ್ತಿಗೆ ಬರುತ್ತಾರೆ. ಅದರಲ್ಲಿ 1.60 ಲಕ್ಷ ರೈತರು ಇನ್ನು ಸರಿಯಾದ ದಾಖಲಾತಿ‌ ಕೊಟ್ಟಿಲ್ಲ. ಹೀಗಾಗಿ ಅವರ ಸಾಲಮನ್ನಾ ಆಗಿಲ್ಲ. ಒಟ್ಟಾರೆ 27 ಸಾವಿರ ಕೋಟಿ ರೂ. ವಾಣಿಜ್ಯ ಬ್ಯಾಂಕ್ ಸಾಲ ಇದೆ. ಈ ಪೈಕಿ 5,297 ಕೋಟಿ ರೂ. ಹಣ ಬ್ಯಾಂಕ್ ಗಳಿಗೆ ಬಿಡುಗಡೆಯಾಗಿದೆ. ಜೊತೆಗೆ ಇದು 7.49 ಲಕ್ಷ ರೈತರ ಅಕೌಂಟ್ ಸಾಲಮನ್ನಾದ ಹಣವಾಗಿದ್ದು, ಈಗ ಮತ್ತೆ ಎನ್ ಪಿಎ ಅಕೌಂಟ್ ನ ಒಂದು ಲಕ್ಷ ರೈತರ ಸಾಲಮನ್ನಾಕ್ಕಾಗಿ 960 ಕೋಟಿ ರೂ. ಬಿಡುಗಡೆಯಾಗಿದೆ. ಒಟ್ಟಾರೆ 8.5 ಲಕ್ಷ ರೈತರಿಗೆ ಸಾಲಮನ್ನಾ ಹಣ ಬಿಡುಗಡೆಯಾಗಿದೆ ಎಂದು ಸಿಎಸ್ ವಿವರಿಸಿದರು.
Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.