ETV Bharat / state

ಬೆಳಗಾವಿ-ರಾಯಚೂರು ಹೊಸ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಕೇಂದ್ರ ಒಪ್ಪಿಗೆ

ಬೆಳಗಾವಿ ರಾಯಚೂರು ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಶೀಘ್ರ ಕಾಮಗಾರಿ ಆರಂಭವಾಗಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ತಿಳಿಸಿದ್ದಾರೆ.

belagavi raichur national highway
ಪ್ರಲ್ಹಾದ್​ ಜೋಶಿ
author img

By

Published : Dec 1, 2022, 6:41 AM IST

ಬೆಂಗಳೂರು: ಕೇಂದ್ರ ಸರ್ಕಾರವು ರಾಜ್ಯದಲ್ಲಿ ಸುಮಾರು 320 ಕಿ.ಮೀ ಉದ್ದದ ಹುನಗುಂದ ಮಾರ್ಗವಾಗಿ ಹಾದುಹೋಗುವ 'ಬೆಳಗಾವಿ-ರಾಯಚೂರು' ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಅನುಮೋದನೆ ನೀಡಿದೆ. ಉತ್ತರ ಕರ್ನಾಟಕ ಮತ್ತು ಹೈದರಾಬಾದ್ ಕರ್ನಾಟಕ ಸಂಪರ್ಕಿಸುವ 320 ಕಿಲೋ ಮೀಟರ್ ಹೆದ್ದಾರಿ ನಿರ್ಮಾಣಕ್ಕಾಗಿ ಈ ಹಿಂದೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಇದೀಗ ರಾಷ್ಟ್ರೀಯ ಹೆದ್ದಾರಿ‌ ನಿರ್ಮಾಣ ಕಾಮಗಾರಿಗೆ ಅನುಮೋದನೆ ದೊರಕಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್​ ಜೋಶಿ ಮಾಹಿತಿ ನೀಡಿದರು.

ಹೆದ್ದಾರಿ ನಿರ್ಮಾಣ ಯೋಜನೆಗೆ ಈಗಾಗಲೇ ಭೂಸ್ವಾಧೀನ ಪ್ರಕ್ರಿಯೆ ನಡೆಯುತ್ತಿದೆ. ಈ ಭಾಗದ ಜನರ ಬಹುಕಾಲದ ಬೇಡಿಕೆಯೊಂದು ಶೀಘ್ರವೇ ಈಡೇರುವ ಕಾಲ ಸನ್ನಿಹಿತವಾಗಿದೆ. ಶೀಘ್ರವೇ ಕಾಮಗಾರಿ ಆರಂಭವಾಗಲಿದೆ. ಮೂಲಸೌಕರ್ಯ ಅಭಿವೃದ್ಧಿ ಮತ್ತು ಜನರ ಅನುಕೂಲಕ್ಕೆ ಅನುಗುಣವಾಗಿ ಕಾಮಗಾರಿಗೆ ಒಪ್ಪಿಗೆ ನೀಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಧನ್ಯವಾದಗಳು ಎಂದು ಜೋಶಿ ತಿಳಿಸಿದ್ದಾರೆ.

belagavi raichur national highway
ಬೆಳಗಾವಿ-ರಾಯಚೂರು ಹೊಸ ರಾಷ್ಟ್ರೀಯ ಹೆದ್ದಾರಿ ಮ್ಯಾಪ್​

ಇದನ್ನೂ ಓದಿ: ರಾಜ್ಯ ಹೆದ್ದಾರಿ ಅಭಿವೃದ್ದಿಗೆ 3500 ಕೋಟಿ ರೂಪಾಯಿ ಬಿಡುಗಡೆ: ಸಚಿವ ಸಿ.ಸಿ.ಪಾಟೀಲ್

ನಿತಿನ್ ಗಡ್ಕರಿ ಭೇಟಿ: ಈ ಬೆಳವಣಿಗೆ ನಡುವೆ ಬುಧವಾರ ನವದೆಹಲಿಯಲ್ಲಿ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ಮಾಡಿ, ಹುಬ್ಬಳ್ಳಿ-ಧಾರವಾಡ ಬೈ ಪಾಸ್ ರಸ್ತೆ ಅಗಲೀಕರಣದ‌‌ ಕುರಿತು ಚರ್ಚೆ ನಡೆಸಿದ್ದಾರೆ.

ಇದನ್ನೂ ಓದಿ: ಕಾನೂನಿನ ಮುಂದೆ ಎಲ್ಲರೂ ಸಮಾನರು, ​ಗಾಂಧಿ ಕುಟುಂಬಕ್ಕೆ ವಿಶೇಷ ಆದ್ಯತೆಯಿಲ್ಲ: ಪ್ರಲ್ಹಾದ್​ ಜೋಶಿ

ಹುಬ್ಬಳ್ಳಿ ಧಾರವಾಡ ಅವಳಿ ನಗರದ ಸುತ್ತಮುತ್ತಲಿನ ಹೆದ್ದಾರಿಗಳ ಅಭಿವೃದ್ಧಿ, ಚತುಷ್ಪಥ ಮತ್ತು ಷಟ್ಪಥ ರಸ್ತೆ ಹಾಗೂ ಅಂಡರ್ ಪಾಸ್​ಗಳ ಅಭಿವೃದ್ಧಿಯ ಕುರಿತು ಕೇಂದ್ರ ಸಚಿವ ನಿತಿನ್ ಗಡ್ಕರಿಯವರು ಭರವಸೆ ನೀಡಿದ್ದು, ಶೀಘ್ರದಲ್ಲಿಯೇ ಕಾಮಗಾರಿ ಆರಂಭವಾಗಲಿದೆ. ಈ ರಸ್ತೆ ಅಭಿವೃದ್ಧಿ ಕಾರ್ಯಗಳು ಸಾರ್ವಜನಿಕರ ಸಂಚಾರಕ್ಕೆ ತುಂಬಾ ಅನುಕೂಲವಾಗಲಿದ್ದು, ಪ್ರಯಾಣದ ಸಮಯವನ್ನು ತಗ್ಗಿಸಲಿವೆ ಹಾಗೂ ಸುಗಮ ಸಂಚಾರಕ್ಕೆ ಅನುವು ಮಾಡಿ ಕೊಡಲಿವೆ ಎಂದು ಸಚಿವ ಜೋಶಿ ಹೇಳಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.