ETV Bharat / state

ಬೆಳಗಾವಿ ಮಹಿಳೆ ವಿವಸ್ತ್ರ ಪ್ರಕರಣ: ಮೌನ ವಹಿಸಿದ್ದ ಗ್ರಾಮಸ್ಥರಿಗೆ ಸಾಮೂಹಿಕ ಜವಾಬ್ದಾರಿ ನಿಗದಿಪಡಿಸಲು ಹೈಕೋರ್ಟ್ ಸಲಹೆ - ಮಹಿಳೆಯ ಬೆತ್ತಲೆ ಪ್ರಕರಣ

ಬೆಳಗಾವಿಯಲ್ಲಿ ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿ ವಿದ್ಯುತ್ ಕಂಬಕ್ಕೆ ಕಟ್ಟಿ ಥಳಿಸಿದ ಪ್ರಕರಣ ಸಂಬಂಧ ಮೌನ ವಹಿಸಿದ್ದ ಇಡೀ ಗ್ರಾಮದವರಿಗೆ ಶಿಕ್ಷೆ ಅಥವಾ ದಂಡ ವಿಧಿಸಬಹುದಾದ ಯೋಜನೆ ರೂಪಿಸುವಂತೆ ಹೈಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದೆ.

High Court
ಹೈಕೋರ್ಟ್
author img

By ETV Bharat Karnataka Team

Published : Dec 18, 2023, 12:10 PM IST

Updated : Dec 18, 2023, 8:36 PM IST

ಬೆಂಗಳೂರು : ಗ್ರಾಮದಲ್ಲಿ ಅಮಾನವೀಯ ಕೃತ್ಯ ನಡೆಯುತ್ತಿದ್ದರೂ ಅದನ್ನು ತಡೆಯದೆ ಮೌನವಾಗಿದ್ದ ಇಡೀ ಗ್ರಾಮಸ್ಥರಿಗೆ ದಂಡ ವಿಧಿಸಬಹುದಾದ ಸಾಮೂಹಿಕ ಜವಾಬ್ದಾರಿ ನಿಗದಿಪಡಿಸುವ ಮಾದರಿಯಲ್ಲಿ ಯೋಜನೆ ಅಥವಾ ಕಾನೂನು ರೂಪಿಸಲು ರಾಜ್ಯ ಹೈಕೋರ್ಟ್ ಸರ್ಕಾರಕ್ಕೆ ಮೌಖಿಕ ಸಲಹೆ ನೀಡಿದೆ.

ಬೆಳಗಾವಿ ತಾಲೂಕಿನ ಗ್ರಾಮವೊಂದರಲ್ಲಿ ನಡೆದ ಮಹಿಳೆಯ ವಿವಸ್ತ್ರಗೊಳಿಸಿ ಮೆರವಣಿಗೆ ಮತ್ತು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ನ್ಯಾಯಪೀಠ ಈ ಸಲಹೆ ನೀಡಿದೆ.

ವಿಚಾರಣೆ ವೇಳೆ ನ್ಯಾಯಪೀಠ, ಬ್ರಿಟಿಷ್ ಆಡಳಿತದಲ್ಲಿ ವಿಲಿಯಂ ಬೆಂಟಿಂಕ್ ಎಂಬುವರು ಕಳ್ಳತನ ಮಾಡುವವರಿದ್ದ ಗ್ರಾಮಕ್ಕೆ ಪುಂಡಗಂದಾಯ ಎಂಬ ತೆರಿಗೆ ವಿಧಿಸುತ್ತಿದ್ದರು. ತಪ್ಪು ನಡೆಯುತ್ತಿದ್ದರೂ ಮೂಕ ಪ್ರೇಕ್ಷಕರಂತೆ ನೋಡುತ್ತಿದ್ದ ಸಾರ್ವಜನಿಕರಿಗೂ ಅದೇ ರೀತಿಯಲ್ಲಿ ತೆರಿಗೆ ವಿಧಿಸಲು ಮುಂದಾದಲ್ಲಿ ಗ್ರಾಮಗಳಲ್ಲಿ ಜನರಿಗೆ ಸ್ವಲ್ಪ ಜವಾಬ್ದಾರಿ ಹೆಚ್ಚಾಗಲಿದೆ. ಇಂತಹ ಘಟನೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ ಮೌನವಾಗಿರದೆ ಕನಿಷ್ಠ ರಕ್ಷಣಾ ಕ್ರಮಕ್ಕೆ ಮುಂದಾಗಲಿದ್ದಾರೆ ಎಂದು ಪೀಠ ತಿಳಿಸಿತು. ಅಲ್ಲದೆ, ಈ ರೀತಿಯ ಸಂದೇಶ ರವಾನೆಯಾಗಲೇಬೇಕು. ಗ್ರಾಮದ ಎಲ್ಲರಿಗೂ, ನಿರ್ದಿಷ್ಟವಾಗಿ ತಪ್ಪು ಮಾಡಿದವರು ಹಣ ಪಾವತಿಸುವಂತೆ ಮಾಡಬೇಕು ಎಂದು ಪೀಠ ತಿಳಿಸಿತು.

ಇಂತಹ ಘಟನೆ ನಡೆಯುತ್ತಿರುವ ಸಂದರ್ಭದಲ್ಲಿ ಕೃತ್ಯದಲ್ಲಿ ಭಾಗಿಯಾಗಿರುವವರಿಗಿಂತಲೂ ಅದನ್ನು ನೋಡುತ್ತ ಮೂಕ ಪ್ರೇಕ್ಷಕರಂತೆ ನಿಂತಿದ್ದವರು ಅತ್ಯಂತ ಅಪಾಯಕಾರಿ ಎಂದು ಮುಖ್ಯ ನ್ಯಾಯಮೂರ್ತಿಗಳು ತಿಳಿಸಿದರು. ಇದಕ್ಕೆ ನ್ಯಾ. ದೀಕ್ಷಿತ್ ಅವರು, ನೆರೆದಿದ್ದವರ ಮುಂದೆ ಆರೋಪಿಗಳು ಹಿರೋಗಳಾಗಲು ಬಯಸುತ್ತಾರೆ. ಇದು ಸಾಮೂಹಿಕ ಮೂರ್ಖತನ, ಗ್ರಾಮಸ್ಥರ ಬೇಜವಾಬ್ದಾರಿತನ ಎಂದು ಎಂದು ಕಟುವಾಗಿ ನುಡಿದರು.

ಜೊತೆಗೆ, ಗ್ರಾಮದ ಸಾಕ್ಷರತೆ ಪ್ರಮಾಣವೇನು? ಸರ್ಕಾರ ಯಾವಾಗಲೂ ಆಲಸಿಯಾಗಿ ವರ್ತಿಸುತ್ತದೆ. ಜನರ ಭಾಗಿದಾರಿಕೆ ಹೇಗಿದೆ?. ಇಂಥ ಘಟನೆಗಳನ್ನು ನಿಯಂತ್ರಿಸುವುದಾದರೂ ಹೇಗೆ? ನಾವು ನಾಗರಿಕ ಸಮಾಜ ಎಂದು ಹೇಳಿಕೊಳ್ಳುತ್ತೇವೆ. ಇದರಲ್ಲಿ ಗ್ರಾಮಸ್ಥರ ಪಾತ್ರ ಏನಿದೆ?, ಈ ಘಟನೆಗೆ ಜನರು ಏಕೆ ಮೂಕ ಪ್ರೇಕ್ಷಕರಾಗಿದ್ದರು ಎಂಬುದಕ್ಕೆ ಕಾರಣಗಳಿವೆಯೇ?, ಅವರು ಪೊಲೀಸ್, ನ್ಯಾಯಾಂಗ, ರಾಜಕೀಯ ವ್ಯಕ್ತಿಗಳಿಗೆ ಹೆದರಿದ್ದಾರೆಯೇ? ಎಂದು ಪ್ರಶ್ನಿಸಿದರು.

ಈ ವೇಳೆ ಪ್ರತಿಕ್ರಿಯಿಸಿದ ಮುಖ್ಯ ನ್ಯಾಯಮೂರ್ತಿಗಳು, ಜನ ಏಕೆ ಅಪರಾಧದ ಬಗ್ಗೆ ಮಾಹಿತಿ ನೀಡುವುದಿಲ್ಲ ಎಂಬ ಸಾಮಾಜಿಕ ಆಯಾಮವನ್ನು ನಿರ್ಲಕ್ಷಿಸಲಾಗದು. ತಮ್ಮನ್ನು ನ್ಯಾಯಾಂಗ ಪ್ರಕ್ರಿಯೆಯಲ್ಲಿ ಸಿಲುಕಿಸಲಾಗುತ್ತದೆ. ತಮಗೆ ಸೂಕ್ತ ಗೌರವ ಸಿಗುವುದಿಲ್ಲ ಎಂದು ಸಾಕ್ಷಿಗಳು ಹೆದರುತ್ತಾರೆ ಎಂದು ಪ್ರಶ್ನಿಸಿದರು.

ಇದಕ್ಕೆ ನ್ಯಾಯಮೂರ್ತಿ ದೀಕ್ಷಿತ್, ಕೆಲವು ಕಡೆಗಳಲ್ಲಿ ಹೊರತುಪಡಿಸಿ ಪೊಲೀಸ್ ಠಾಣೆಗಳಲ್ಲಿ ಸಾಕ್ಷಿಗಳು ಮತ್ತು ಆರೋಪಿಗಳಿಗೆ ವ್ಯತ್ಯಾಸವೇ ಇರುವುದಿಲ್ಲ. ಇದು ಜನರಿಗೆ ಒಪ್ಪಿಗೆಯಾಗುವುದಿಲ್ಲ. ಪೊಲೀಸರ ನಡತೆ ಸಹ ಜನರಲ್ಲಿ ನಂಬಿಕೆ ಹುಟ್ಟುವಂತೆ ಮಾಡುವುದಿಲ್ಲ ಎಂದು ತಿಳಿಸಿದರು.

ಅಷ್ಟೇ ಅಲ್ಲದೆ, ಘಟನೆ ನಡೆಯುತ್ತಿದ್ದ ಸಂದರ್ಭದಲ್ಲಿ ಇಡೀ ಗ್ರಾಮದಲ್ಲಿ ಯಾರು ಏಕೆ ಮುಂದೆ ಬರಲಿಲ್ಲ. ಅದು ಏಕೆ ಹಾಗಾಯಿತು. ಈ ವಿಚಾರಗಳನ್ನು ಸಂಗ್ರಹಿಸಬೇಕು. ಇದನ್ನು ಕಾನೂನು ಆಯೋಗಕ್ಕೆ ತಿಳಿಸಬೇಕು. ಅದು ಕಾನೂನು ರೂಪಿಸಲು ಸಲಹೆ ನೀಡಬಹುದು. ಈ ರೀತಿಯಲ್ಲಿ ಕಾನೂನು ಮುನ್ನಡೆಯುತ್ತದೆ. ಇಲ್ಲವಾದಲ್ಲಿ ಅದು ಜನರ ಕಾನೂನಾಗುವುದಿಲ್ಲ. ಜನರ ಬದುಕನ್ನು ಕಾನೂನು ಆಧರಿಸಿರಬೇಕು. ಆಗ ಅದಕ್ಕೆ ಅರ್ಥಬರುತ್ತದೆ. ಇಲ್ಲವಾದಲ್ಲಿ ಅದೊಂದು ಅಪರಿಚಿತ ದೇಹವಾಗಿಯೇ ಉಳಿದುಕೊಳ್ಳಲಿದೆ ಎಂದು ಪೀಠ ಬೇಸರದಿಂದ ತಿಳಿಸಿತು.

ಹೆಣ್ಣು ಮಗು ರಕ್ಷಣೆಗೆ ಬೇಟಾ ಪಡಾವೋ ಬೇಕಾಗಿದೆ : ಮಹಿಳೆಯರೊಂದಿಗೆ ಹೇಗೆ ವರ್ತಿಸಬೇಕು ಎಂಬುದನ್ನು ಪುರುಷರಿಗೆ ಕಲಿಸಬೇಕಾಗಿದೆ. ಇದು ಬೇಟಿ ಬಚಾವೋ, ಬೇಟಿ ಪಡಾವೋ ಅಲ್ಲದೆ, ಹೆಣ್ಣು ಮಗುವನ್ನು ರಕ್ಷಣೆ ಮಾಡುವ ಬಗ್ಗೆ ಬೇಟಾ ಪಡಾವೋ ಆಗಬೇಕು. ಈ ಕುರಿತು ಗಂಡು ಮಗುವಿಗೆ ಹೇಳಲೇಬೇಕಾಗಿದೆ. ಇದನ್ನು ಮನೆಯ ಗಂಡು ಮಕ್ಕಳಿಗೆ ಮನವರಿಕೆ ಮಾಡಿಕೊಡಲೇಬೇಕು ಎಂದು ನ್ಯಾಯಪೀಠ ಇದೇ ವೇಳೆ ತಿಳಿಸಿತು.

800 ಜನರಿರುವ ಗ್ರಾಮದಲ್ಲಿ ಒಬ್ಬ ಮಾತ್ರ ರಕ್ಷಣೆಗೆ ಮುಂದಾದರು : ಇಡೀ ಗ್ರಾಮದಲ್ಲಿ ಸುಮಾರು 800 ಜನರಿದ್ದಾರೆ. ಘಟನೆ ವೇಳೆ 13 ಮಂದಿ ಮಹಿಳೆಯ ಮೇಲೆ ಆಕ್ರಮಣ ಮಾಡುತ್ತಿದ್ದಾರೆ. ಸುಮಾರು 60ಕ್ಕೂ ಹೆಚ್ಚು ಮಂದಿ ಘಟನೆಯನ್ನು ಮೂಕಪ್ರೇಕ್ಷಕರಂತೆ ನೋಡುತ್ತಿದ್ದಾರೆ. ಅದರಲ್ಲಿ ಜಹಂಗೀರ್ ಎಂಬುವ ಒಬ್ಬ ವ್ಯಕ್ತಿ ಮಹಿಳೆಯ ರಕ್ಷಣೆಗೆ ಮುಂದಾಗಿ ಹಲ್ಲೆಗೊಳಗಾಗಿದ್ದಾರೆ. ಇನ್ನುಳಿದ ಜನ ಯಾವ ಕಾರಣಕ್ಕೆ ಮುಂದಾಗಿಲ್ಲ ಎಂದು ಪೀಠ ಬೇಸರ ವ್ಯಕ್ತಪಡಿಸಿತು.

ಉತ್ತಮ ಸಮಾಜ ಕಟ್ಟದಿದ್ದಲ್ಲಿ ರಾಷ್ಟ್ರ ನಿರ್ಮಾಣ ಅಸಾಧ್ಯ: ರೋಮನ್ ಸಾಮ್ರಾಜ್ಯದ ಕುರಿತ ಪುಸ್ತಕವನ್ನು ಪ್ರಸ್ತಾಪಿಸಿದ ನ್ಯಾಯಪೀಠ, ಒಂದು ಉತ್ತಮ ಸಮಾಜವನ್ನು ನಿರ್ಮಿಸದ ಹೊರತು ರಾಷ್ಟ್ರ ಕಟ್ಟುವುದಕ್ಕೆ ಸಾಧ್ಯವಿಲ್ಲ. ರೋಮನ್ ಸಾಮ್ರಾಜ್ಯ ಜನ್ಮತಾಳಿದ 20ವರ್ಷಗಳಲ್ಲಿಯೇ ಪತನವಾಯಿತು. ಮುಂದಿನ ಪೀಳಿಗೆಗೆ ಮೌಲ್ಯಗಳನ್ನು ತಿಳಿಸದಿದ್ದಲ್ಲಿ ನ್ಯಾಯಾಲಯ, ವಕೀಲರು ಮೂಕಪ್ರೇಕ್ಷಕರಾಗಿರುತ್ತಾರೆ ಎಂದು ಪೀಠ ಹೇಳಿತು.

ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 5 ಲಕ್ಷ, 2 ಎಕರೆ ಭೂಮಿ: ಸಂತ್ರಸ್ತ ಮಹಿಳೆಗೆ ಕಾನೂನು ಸೇವಾ ಪ್ರಾಧಿಕಾರದಿಂದ ನೀಡುವ 50 ಸಾವಿರ ಪರಿಹಾರವನ್ನು ತಕ್ಷಣ ಬಿಡುಗಡೆ ಮಾಡುವುದಕ್ಕೆ ನ್ಯಾಯಪೀಠ ಇದೇ ವೇಳೆ ಸೂಚನೆ ನೀಡಿತು. ಅಲ್ಲದೆ, ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 5 ಲಕ್ಷ ರೂ. ಪರಿಹಾರ ಹಾಗೂ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ಮಂಜೂರು ಮಾಡಿರುವ 2.3 ಎಕರೆ ಜಮೀನನ್ನು ಸರ್ಕಾರ ನೀಡಿರುವ ಸಂಬಂಧ ಆದೇಶದಲ್ಲಿ ಉಲ್ಲೇಖಿಸಿತು. ಇದೇ ವೇಳೆ ಸಂತ್ರಸ್ತೆಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರ ಜೊತೆ ನ್ಯಾಯಪೀಠವು ಸಮಾಲೋಚನೆ ನಡೆಸಿತು.

ಅಲ್ಲದೆ, ಡಿಸೆಂಬರ್ 31ರ ಅಂತ್ಯದ ವೇಳೆಗೆ ಸರ್ಕಾರ ಮಂಜೂರು ಮಾಡಿರುವ ಜಮೀನು ಸಂತ್ರಸ್ತೆಯ ಹೆಸರಿಗೆ ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸಬೇಕು. 2024ರ ಜನವರಿ 1ರ ವೇಳೆಗೆ ಭೂಮಿ ಹಸ್ತಾಂತರವಾಗಿರಬೇಕು ಎಂದು ನ್ಯಾಯಪೀಠ ಇದೇ ವೇಳೆ ಸರ್ಕಾರಕ್ಕೆ ಸೂಚನೆ ನೀಡಿ, ವಿಚಾರಣೆಯನ್ನು ಜನವರಿ ಎರಡನೇ ವಾರಕ್ಕೆ ಮುಂದೂಡಿದೆ.

ಇದನ್ನೂ ಓದಿ : ಮಹಿಳೆ ಬೆತ್ತಲೆಗೊಳಿಸಿ, ಹಲ್ಲೆ ಪ್ರಕರಣ : ಸಂತ್ರಸ್ತೆಯನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ ಗೃಹ ಸಚಿವ ಪರಮೇಶ್ವರ್​

Last Updated : Dec 18, 2023, 8:36 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.