ಬೆಂಗಳೂರು: ಬೆಳಗಾವಿಯಿಂದ ಗೋವಾಕ್ಕೆ ಸಂಪರ್ಕ ಕಲ್ಪಿಸುವ ಎನ್ಎಚ್4ಎ ರಸ್ತೆ ಅಗಲೀಕರಣ ಕಾಮಗಾರಿಗೆ ಸದ್ಯ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ವನ್ಯ ಸಂಕುಲವನ್ನು ರಕ್ಷಿಸುವ ನಿಟ್ಟಿನಲ್ಲಿ ಪರಿಸರವಾದಿ ಸುರೇಶ್ ಹೆಬ್ಳಿಕರ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಿನ್ನೆ ಸಿಜೆ ಎ.ಎಸ್.ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.
ಬೆಳಗಾವಿ ಮತ್ತು ಗೋವಾ ನಡುವಿನ ರಾಷ್ಟ್ರೀಯ ಹೆದ್ದಾರಿ-4ಎ ಅಗಲೀಕರಣಕ್ಕೆ ರಾಷ್ಟ್ರೀಯ ವನ್ಯಜೀವಿ ಮಂಡಳಿಯಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(ಎನ್‌ಎಚ್‌ಎಐ)ವು 5 ವರ್ಷಗಳ ಹಿಂದೆಯೇ ಅನುಮತಿ ಪಡೆದಿದ್ದು, ಇದನ್ನು ನವೀಕರಿಸಿಲ್ಲ ಎಂದು ಪೀಠಕ್ಕೆ ತಿಳಿಸಿದರು. ಅರಣ್ಯ ಪ್ರದೇಶವನ್ನು ಸೂಕ್ಷ್ಮ ಪರಿಸರ ವಲಯಯೆಂದು ಈಗಾಗಲೇ ಘೋಷಣೆಯಾಗಿದ್ದರೂ 14 ಕೀ.ಮೀ ರಸ್ತೆಯನ್ನು ವಿಸ್ತರಿಸುವ ನೆಪದಲ್ಲಿ 22 ಸಾವಿರ ಮರಗಳನ್ನು ಕತ್ತರಿಸಿದ್ದು, ಮುಂದಿನ ದಿನಗಳಲ್ಲಿ 1 ಲಕ್ಷ ಮರಗಳನ್ನು ಕತ್ತರಿಸಲು ಸಜ್ಜಾಗಿದ್ದಾರೆ ಎಂದು ಪೀಠಕ್ಕೆ ತಿಳಿಸಿದರು. ಆದರಿಂದ ಮುಖ್ಯನ್ಯಾಯಾಧೀಶರು ಈ ಕಾಮಗಾರಿ ಸದ್ಯಕ್ಕೆ ನಿಲ್ಲಿಸುವಂತೆ ತಾತ್ಕಾಲಿಕ ತಡೆ ನೀಡಿದ್ದಾರೆ.