ETV Bharat / state

ಬೆಳ್ತಂಗಡಿ ವಿದ್ಯಾರ್ಥಿನಿ ಅತ್ಯಾಚಾರ, ಕೊಲೆ : ಆರೋಪಿ ಖುಲಾಸೆಗೊಳಿಸಿದ್ದ ಆದೇಶ ಪ್ರಶ್ನಿಸಿ ಸಿಬಿಐ ಹೈಕೋರ್ಟ್​ಗೆ​ ಅರ್ಜಿ - ಕಾರ್ಕಳ ಮೂಲದ ಸಂತೋಷ್ ರಾವ್

ಬೆಳ್ತಂಗಡಿ ವಿದ್ಯಾರ್ಥಿನಿ ಅತ್ಯಾಚಾರ ಕೊಲೆಗೆ ಸಂಬಂಧಿಸಿದಂತೆ ಆರೋಪಿಯನ್ನು ಖುಲಾಸೆಗೊಳಿಸಿದ್ದ ಆದೇಶ ಪ್ರಶ್ನಿಸಿ ಸಿಬಿಐ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದೆ.

ಹೈಕೋರ್ಟ್
ಹೈಕೋರ್ಟ್
author img

By ETV Bharat Karnataka Team

Published : Nov 8, 2023, 8:38 PM IST

ಬೆಂಗಳೂರು : ಬೆಳ್ತಂಗಡಿ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಆರೋಪಿಯನ್ನು ಖುಲಾಸೆಗೊಳಿಸಿ ಸಿಬಿಐ ವಿಶೇಷ ನ್ಯಾಯಾಲಯ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಸಿಬಿಐ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದೆ. 2012ರ ಅಕ್ಟೋಬರ್ 12ರಂದು ವಿದ್ಯಾರ್ಥಿನಿ ಅತ್ಯಾಚಾರ ಮತ್ತು ಕೊಲೆ ಪ್ರಕರಣ ನಡೆದಿತ್ತು. ಬೆಳ್ತಂಗಡಿ ಪೊಲೀಸರು ಸಂತೋಷ್‌ರಾವ್‌ನನ್ನು ಬಂಧಿಸಿದ್ದರು. ಸಿಬಿಐ ವಿಶೇಷ ನ್ಯಾಯಾಲಯದ ಆದೇಶ ಹೊರಬಿದ್ದು, 4 ತಿಂಗಳ ಬಳಿಕ ಸಿಬಿಐ ಮೇಲ್ಮನವಿ ಸಲ್ಲಿಸಿದ್ದು, ಈ ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ.

ಪ್ರಕರಣದ ಆರೋಪಿಯಾಗಿರುವ ಸಂತೋಷ್‌ರಾವ್ ನಿರ್ದೂಷಿ ಎಂದು ಸಿಬಿಐ ವಿಶೇಷ ನ್ಯಾಯಾಲಯ 2023ರ ಜೂನ್ 16ರಂದು ತೀರ್ಪು ನೀಡಿತ್ತು. ಮೇಲ್ಮನವಿ ಸಲ್ಲಿಸಲು ಸಿಬಿಐಗೆ 60 ದಿನಗಳ ಕಾಲಾವಕಾಶ ಸಹ ನೀಡಲಾಗಿತ್ತು. ಆದರೆ, 4 ತಿಂಗಳ ಬಳಿಕ ಸಿಬಿಐ ಮೇಲ್ಮನವಿ ಸಲ್ಲಿಸಿದೆ.

ಪ್ರಕರಣ ಸಂಬಂಧ ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆಯಲ್ಲಿ 11 ವರ್ಷಗಳ ಬಳಿಕ ಆರೋಪಿ ನಿರ್ದೂಷಿ ಎಂದು ಸಿಬಿಐ ವಿಚಾರಣಾ ನ್ಯಾಯಾಲಯ ತೀರ್ಪು ನೀಡಿತ್ತು. ಈ ಮಧ್ಯೆ ಪ್ರಕರಣದ ಮರು ತನಿಖೆಗೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು.

ಪ್ರಕರಣದ ಹಿನ್ನೆಲೆ ಏನು ?: 2012ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ, ಕೊಲೆ ಮಾಡಿದ ಘಟನೆ ನಡೆದಿತ್ತು. ಪ್ರಕರಣವನ್ನು ಮೊದಲಿಗೆ ಬೆಳ್ತಂಗಡಿ ಠಾಣೆ ಪೊಲೀಸರು ತನಿಖೆ ನಡೆಸಿದ್ದರು. ಬಳಿಕ ತನಿಖೆಯನ್ನು ಸಿಐಡಿಗೆ ವಹಿಸಲಾಗಿತ್ತು. 2013ರ ನವೆಂಬರ್​ 6ರಂದು ಸರ್ಕಾರವು ಸಿಬಿಐಗೆ ತನಿಖೆಗೆ ಆದೇಶಿಸಿತ್ತು. ತನಿಖಾಧಿಕಾರಿಗಳು ಕಾರ್ಕಳ ಮೂಲದ ಸಂತೋಷ್ ರಾವ್ ಎಂಬಾತನನ್ನು ಆರೋಪಿಯಾಗಿ ಗುರುತಿಸಿದ್ದರು. ಸಿಬಿಐ ವಿಶೇಷ ನ್ಯಾಯಾಲಯವು 2023ರ ಜುಲೈ 16ರಂದು ಆರೋಪಿಯನ್ನು ಖುಲಾಸೆಗೊಳಿಸಿತ್ತು.

ಇದನ್ನೂ ಓದಿ: ಬೆಳ್ತಂಗಡಿ ವಿದ್ಯಾರ್ಥಿನಿ ಅತ್ಯಾಚಾರ ಕೊಲೆ ಪ್ರಕರಣ: ಮರು ತನಿಖೆ ಕೋರಿದ್ದ ಅರ್ಜಿ ವಜಾ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.