ETV Bharat / state

ಸಚಿವ ಮಧು ಬಂಗಾರಪ್ಪಗೆ ಅಹಂ ಜಾಸ್ತಿ, ಅಧಿಕಾರದ ಪಿತ್ತ ನೆತ್ತಿಗೇರಿದೆ: ಬೇಳೂರು ಗೋಪಾಲಕೃಷ್ಣ - ಮಧು ಬಂಗಾರಪ್ಪ ವಿರುದ್ಧ ಕಿಡಿ

ತಮ್ಮದೇ ಪಕ್ಷದ ಸಚಿವ ಮಧು ಬಂಗಾರಪ್ಪ ವಿರುದ್ಧ ಶಾಸಕ ಬೇಳೂರು ಗೋಪಾಲ ಕೃಷ್ಣ ವಾಗ್ದಾಳಿ ನಡೆಸಿದ್ದಾರೆ.

ಮಧು ಬಂಗಾರಪ್ಪ ವಿರುದ್ಧ ಬೇಳೂರು ಗೋಪಾಲಕೃಷ್ಣ ವಾಗ್ದಾಳಿ

author img

By ETV Bharat Karnataka Team

Published : Dec 2, 2023, 6:55 PM IST

ಬೆಂಗಳೂರು: ಸಚಿವ ಮಧು ಬಂಗಾರಪ್ಪಗೆ ಅಹಂ ಜಾಸ್ತಿ ಆಗಿದೆ. ಅಧಿಕಾರದ ಪಿತ್ತ ನೆತ್ತಿಗೆ ಏರಿದೆ ಎಂದು ಬೇಳೂರು ಗೋಪಾಲ ಕೃಷ್ಣ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಲ್ಲಿ ಮಾತನಾಡಿದ ಅವರು, ಎಲ್ಲಾ ಉಸ್ತುವಾರಿ ಸಚಿವರು ಸರಿ ಇದ್ದಾರೆ. ಆದರೆ ನಮ್ಮ ಉಸ್ತುವಾರಿ ಸಚಿವರಿಗೆ ಅಹಂ ಜಾಸ್ತಿ. ಎಲ್ಲಾ ವಿಚಾರದಲ್ಲಿ ಮೂಗು ತೂರಿಸುತ್ತಾರೆ. ನಾವು ಶಾಸಕರಲ್ವಾ ನಮಗೂ ಜವಾಬ್ದಾರಿ ಇಲ್ವಾ?. ನಾವು ಯಡಿಯೂರಪ್ಪನ ಮಕ್ಕಳನ್ನ ಸೋಲಿಸಬೇಕು. ರಾಘವೇಂದ್ರನನ್ನು ಸೋಲಿಸಬೇಕು ಅಂತ ಇದ್ದೇವೆ. ಆದರೆ ನಮ್ಮ ಸಚಿವರು ನಮ್ಮಲ್ಲೇ ಒಡಕು ಮೂಡಿಸ್ತಿದ್ದಾರೆ ಎಂದು ಕಿಡಿ ಕಾರಿದರು.

ಶಿವಮೊಗ್ಗದಲ್ಲಿ ಪಕ್ಷ ಒಡೆದು ಎರಡು ಬಣವಾಗಿದೆ: ಮಾಜಿ ಮುಖ್ಯಮಂತ್ರಿ ಮಗ, ಅವರ ತಂದೆ ಗರಡಿಯಲ್ಲಿ ಪಳಗಿದವರು ನಾವು. ಎಲ್ಲರನ್ನು ಒಗ್ಗೂಡಿಸಿ ಕರೆದೊಯ್ಯಬೇಕು. ಅವರೇ ಪಕ್ಷವನ್ನು ಒಡೆಯುವುದಲ್ಲ. ಶಿವಮೊಗ್ಗದಲ್ಲಿ ಪಕ್ಷ ಒಡೆದು ಎರಡು ಬಣವಾಗಿದೆ. ಅವರೇ ಅದಕ್ಕೆ ಕುಮ್ಮಕ್ಕು ನೀಡುವುದಲ್ಲ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು. ಶಿವಮೊಗ್ಗ ಲೋಕಸಭಾ ಕ್ಷೇತ್ರ ಅಭ್ಯರ್ಥಿ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಯಾರು ಅನ್ನೋದು ಹೈ ಕಮಾಂಡ್ ತೀರ್ಮಾನ ಮಾಡುತ್ತದೆ. ನಾನು ಒಬ್ಬ ಪ್ರಬಲ ಆಕಾಂಕ್ಷಿ ಎಂದರು.

ಈ ಹಿಂದೆ ಕೂಡ ಸಚಿವ ಮಧು ಬಂಗಾರಪ್ಪ ವಿರುದ್ಧ ಕಿಡಿ: ಜಿಲ್ಲೆಯ ಉಸ್ತುವಾರಿ ಸಚಿವರಾಗಿರುವ ಮೊದಲು ಮಧು ಬಂಗಾರಪ್ಪ ಯಾರು ಅಂತ ಗೊತ್ತಿಲ್ಲ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು, ಸಚಿವ ಮಧು ಬಂಗಾರಪ್ಪ ವಿರುದ್ಧ ಶಿವಮೊಗ್ಗದಲ್ಲಿ ಅಸಮಾಧಾನ ಹೊರಹಾಕಿದ್ದರು.

ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಕೆಡಿಪಿ ಸಭೆ ಸಭೆಗೆ ಕರೆದಿಲ್ಲ. ಇದರಿಂದ ನಾನು ಆ ಸಭೆಗೆ ಹೋಗುವುದಿಲ್ಲ. ನನ್ನದು ಯಾವುದೇ ಸಮಸ್ಯೆ ಇಲ್ಲ. ದೆಹಲಿ ನಾಯಕರು ನಮಗೆ ಗೊತ್ತಿಲ್ಲ. ನಮಗೆ ರಾಜ್ಯದ ನಾಯಕರು ಮಾತ್ರ ಗೊತ್ತು. ನಾನು ಕ್ಷೇತ್ರದ ಜನರಿಂದ ಗೆದ್ದಿದ್ದು, ಯಾರಿಂದಲೂ ಗೆದ್ದಿಲ್ಲ'' ಎಂದ ಅವರು, ''ನನಗೆ ಇಷ್ಟು ದಿನ ಮಂತ್ರಿ ಸ್ಥಾನ ಸಿಗದೇ ಇರುವುದಕ್ಕೆ ಅಸಮಾಧಾನ ಇಲ್ಲ. ಆದರೆ, ನನಗೂ ಮಂತ್ರಿ ಸ್ಥಾನ ನೀಡಿ ಎಂಬುದು ನನ್ನ ಬೇಡಿಕೆ. ನಾನು ಯಾವುದೇ ಭಿನ್ನಮತ ಮಾಡಲ್ಲ. ನಾನು ಹೆದರಿಕೊಂಡು ಹೋಗಲು ಕುಮಾರ ಬಂಗಾರಪ್ಪ ಅಲ್ಲ. ನಾನು ಗೋಪಾಲಕೃಷ್ಣ ಬೇಳೂರು''ಎಂದು ವಾಗ್ದಾಳಿ ನಡೆಸಿದ್ದರು.

ಇದನ್ನೂ ಓದಿ: ದೂರು ನೀಡಿದ್ದವರೆಲ್ಲ ಸಚಿವರ ಅಡುಗೆ ಮನೆಯಲ್ಲಿರುವವರು: ಶಾಸಕ ಬೇಳೂರು ಗೋಪಾಲಕೃಷ್ಣ ಆರೋಪ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.