ETV Bharat / state

ಬೆಂಗಳೂರು: ಶಾಂತಿ, ಸೌಹಾರ್ದತೆಯಿಂದ ಗಣೇಶ ಹಬ್ಬ ಆಚರಿಸಲು ಪೊಲೀಸ್ ಆಯುಕ್ತರ ಕರೆ

ಸಂಬಂಧಪಟ್ಟ ಇಲಾಖೆಯಿಂದ ಅನುಮತಿ ಪಡೆದು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಶಾಂತಿ ಸೌಹಾರ್ದಯುತವಾಗಿ ಗಣೇಶ ಹಬ್ಬ ಆಚರಿಸುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

ಶಾಂತಿ ಪಾಲನಾ ಸಭೆ
author img

By

Published : Aug 30, 2019, 10:07 PM IST

ಬೆಂಗಳೂರು: ಗಣೇಶ ಮೂರ್ತಿಯನ್ನು ಸಾರ್ವಜನಿಕ ಸ್ಥಳದಲ್ಲಿ ಪ್ರತಿಷ್ಠಾಪಿಸುವ ಮೊದಲು ಸಂಬಂಧಪಟ್ಟ ಪೊಲೀಸ್ ಠಾಣೆಯಿಂದ ಕಡ್ಡಾಯವಾಗಿ ಅನುಮತಿ‌ ಪಡೆಯಬೇಕು. ವಾಹನ ಸಂಚಾರಕ್ಕೆ ತೊಂದರೆಯಾಗದಂತೆ ಆಯೋಜಕರು ಮುಂಜಾಗ್ರತ ಕ್ರಮ ಕೈಗೊಳ್ಳಬೇಕು ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ತಿಳಿಸಿದ್ದಾರೆ.

ಗಣೇಶ ಹಬ್ಬ ಆಚರಣಾ ಸಮಿತಿ, ಬೆಂಗಳೂರು ನಗರ ಪೊಲೀಸ್ ಹಾಗೂ ಬಿಬಿಎಂಪಿ ವತಿಯಿಂದ ನಗರದ ಪುರಭವನದಲ್ಲಿ ಏರ್ಪಡಿಸಿದ್ದ ಶಾಂತಿ ಪಾಲನಾ ಸಭೆಯಲ್ಲಿ‌ ಮಾತನಾಡಿ, ಗಣೇಶ ಮೂರ್ತಿ ಪ್ರತಿಷ್ಠಾಪಿಸುವ ಸಾರ್ವಜನಿಕ ಸ್ಥಳದಲ್ಲಿ ಚಪ್ಪರ ಅಥವಾ ಶಾಮಿಯಾನ ಹಾಕುವಾಗ ಬಿಬಿಎಂಪಿಯಿಂದ ಅನುಮತಿ ಪಡೆಯಬೇಕು. ಪ್ರತಿಷ್ಠಾಪನೆ ಜಾಗದಲ್ಲಿ ಆಯೋಜಕರ ಪರವಾಗಿ ಇಬ್ಬರು ಜವಾಬ್ದಾರಿಯುತ ಕಾರ್ಯಕರ್ತರು ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರವಹಿಸಬೇಕು. ಯಾವುದೇ ಕಾರಣಕ್ಕೂ ಗಣೇಶ ಪ್ರತಿಷ್ಠಾಪನೆ ಜಾಗ ವಿವಾದಿತ ಪ್ರದೇಶವಾಗಿರಬಾರದು. ಬೃಹತ್ ಗಣೇಶ ಮೂರ್ತಿ ಇಡುವ ಜಾಗದಲ್ಲಿ ಸಿಸಿಟಿವಿ ಕ್ಯಾಮರಾ, ಅಗ್ನಿ ನಂದಿಸುವ ಸಾಮಗ್ರಿ ಅಳವಡಿಸಿಕೊಳ್ಳಬೇಕು ಎಂದರು.

ವಿದ್ಯುತ್ ಅಲಂಕಾರಕ್ಕೆ ಸಂಬಂಧಿಸಿದಂತೆ ವೈರಿಂಗ್ ಬಗ್ಗೆ ಬೆಸ್ಕಾಂನಿಂದ ಅನುಮತಿ ಪಡೆಯಬೇಕು. ಅಗ್ನಿಶಾಮಕ‌ ಇಲಾಖೆ ಹಾಗೂ ಸಂಚಾರಿ ಪೊಲೀಸರಿಂದ ನಿರಾಪೇಕ್ಷಣಾ ಪತ್ರ ಪಡೆಯುವುದು ಕಡ್ಡಾಯವಾಗಿದೆ. ಶಾಲಾ ಮಕ್ಕಳಿಗೆ ಹಾಗೂ ಹಿರಿಯ‌ ನಾಗರಿಕರಿಗೆ ತೊಂದರೆಯಾಗದಂತೆ ಧ್ವನಿವರ್ಧಕವನ್ನು ಬೆಳ್ಳಗೆ 6 ರಿಂದ ರಾತ್ರಿ 10ಗಂಟೆಯವರೆಗೆ ಮಾತ್ರ ಬಳಸಲು ಅನುಮತಿಯಿದ್ದು, ಇದನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದರು.

ಶಾಂತಿ ಪಾಲನಾ ಸಭೆ

ಬಿಬಿಎಂಪಿ ಆಯುಕ್ತ ಅನೀಲ್ ಕುಮಾರ್ ಮಾತನಾಡಿ‌, ನಗರದಲ್ಲಿ ಗಣೇಶ ಪ್ರತಿಷ್ಠಾಪನೆ ಮಾಡುವ ಆಯೋಜಕರು ಏಕಗವಾಕ್ಷಿ ವ್ಯವಸ್ಥೆಯಡಿ 63 ಕಡೆಗಳಲ್ಲಿ ಪರವಾನಗಿ ಪಡೆಯಬಹುದಾಗಿದೆ. ನಗರದ ಸೂಕ್ತ ಕಡೆಗಳಲ್ಲಿ ನೀರಿನ ಟ್ಯಾಂಕರ್ ವ್ಯವಸ್ಥೆ ಮಾಡಲಾಗಿದೆ ಎಂದರು.

ಮಾಲಿನ್ಯ ನಿಯಂತ್ರಣ ಮಂಡಳಿ ಪರಿಸರ ಅಧಿಕಾರಿ ರಾಜಶೇಖರ್ ಮಾತನಾಡಿ, ಬಿಬಿಎಂಪಿ‌ ಸಹಯೋಗದೊಂದಿಗೆ ನಗರದ ವಿವಿಧೆಡೆ 11 ಮೊಬೈಲ್ ಟ್ಯಾಂಕರ್ ವ್ಯವಸ್ಥೆ ಮಾಡಿಕೊಳ್ಳಲಾಗಿದೆ‌.‌ ಗಣೇಶ ವಿಸರ್ಜಿಸುವಾಗ ಪಟಾಕಿ ಸಿಡಿಸಬಾರದು.‌ಈ ಮೂಲಕ ಮಾಲಿನ್ಯ ತಡೆಗಟ್ಟಬೇಕು ಎಂದು ಮನವಿ‌ ಮಾಡಿದರು.

Intro:

Body:ಮೊದಲು ಬೈಟ್- ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್

ಎರಡನೇಯವರು: ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.