ETV Bharat / state

ಬೆಂಗಳೂರು ಹೊರವರ್ತುಲ ರಸ್ತೆಯಲ್ಲಿ ಮೆಟ್ರೋ ಕಾಮಗಾರಿ: 833 ಮರಗಳಿಗೆ ಕೊಡಲಿಯೇಟು

ಸೆಂಟ್ರಲ್ ಸಿಲ್ಕ್ ಬೋರ್ಡ್​ನಿಂದ ಕಾಡುಬೀಸನಹಳ್ಳಿಯವರಿಗೆ ಮೆಟ್ರೋ ಮಾರ್ಗ ನಿರ್ಮಾಣಕ್ಕಾಗಿ ಹೊರವರ್ತುಲ ರಸ್ತೆಯಲ್ಲಿ 833 ಮರಗಳನ್ನು ಕಡಿಯಲು ಬಿಬಿಎಂಪಿ ಬೆಂಗಳೂರು ಮೆಟ್ರೋ ರೈಲು ನಿಗಮಕ್ಕೆ ಅನುಮತಿ ನೀಡಿದೆ.

bengaluru
ಮರಗಳಿಗೆ ಕೊಡಲಿಯೇಟು
author img

By

Published : Jun 27, 2021, 7:52 AM IST

ಬೆಂಗಳೂರು: ಅಭಿವೃದ್ಧಿ ಹೆಸರಲ್ಲಿ ಉದ್ಯಾನ ನಗರಿಯಲ್ಲಿ ಮರಗಳ ಮಾರಣಹೋಮ ನಡೆಯುತ್ತಿದೆ. 2ನೇ ಹಂತದ ನಮ್ಮ ಮೆಟ್ರೋ ಮಾರ್ಗ ನಿರ್ಮಾಣಕ್ಕಾಗಿ ಹೊರವರ್ತುಲ ರಸ್ತೆಯಲ್ಲಿ 833 ಮರಗಳನ್ನು ಕಡಿಯಲು ಬಿಬಿಎಂಪಿ ಬೆಂಗಳೂರು ಮೆಟ್ರೋ ರೈಲು ನಿಗಮಕ್ಕೆ ಅನುಮತಿ ನೀಡಿದೆ.

ಸೆಂಟ್ರಲ್ ಸಿಲ್ಕ್ ಬೋರ್ಡ್​ನಿಂದ ಕಾಡುಬೀಸನಹಳ್ಳಿಯವರಿಗೆ ಮೆಟ್ರೋ ಮಾರ್ಗ ನಿರ್ಮಾಣಕ್ಕೆ ಈ ಮರಗಳು ಅಡ್ಡಿಯಾಗಿದ್ದು, ರಸ್ತೆ ಮಧ್ಯಭಾಗದಲ್ಲೇ ಇರುವುದರಿಂದ ಕಡಿಯುವುದು ಅನಿವಾರ್ಯವಾಗಿದೆ. ಈ ಬಗ್ಗೆ ಸಾರ್ವಜನಿಜರಿಗೆ ಆಕ್ಷೇಪಣೆ ಸಲ್ಲಿಸುವ ಅವಕಾಶವಿದ್ದು, ಜು.4ರೊಳಗೆ ಆಕ್ಷೇಪಣೆ ಸಲ್ಲಿಸಬೇಕು ಎಂದು ಪಾಲಿಕೆ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಹೆಚ್.ಎಸ್.ರಂಗನಾಥ ಸ್ವಾಮಿ ತಿಳಿಸಿದರು.

ಈ ಮರಗಳೇನು ಅಷ್ಟು ದೊಡ್ಡವಲ್ಲ. ಸ್ಥಳಾಂತರಿಸಲು ಕೂಡಾ ಬೇರುಗಳು ಅಷ್ಟು ಆಳವಾಗಿಲ್ಲ. ಮರಗಳನ್ನು ಕಡಿಯಲೇಬೇಕಾಗಿದ್ದು, ನಿಗಮವು ಒಂದು ಮರಕ್ಕೆ 10 ಸಸಿ ನೆಟ್ಟು ಪೋಷಿಸಬೇಕೆಂದು ನ್ಯಾಯಾಲಯ ಹೇಳಿದೆ ಎಂದು ಅವರು ತಿಳಿಸಿದರು.

ಅವಧಿ ವಿಸ್ತರಣೆ:

ಸಿಂಗನಾಯಕನಹಳ್ಳಿ ಕೆರೆ ಅಭಿವೃದ್ಧಿ ಗೆ 6,316 ಮರಗಳನ್ನು ಕಡಿಯುವುದಕ್ಕೆ ಮುಂದಾಗಿರುವ ಅರಣ್ಯ ಇಲಾಖೆಯ ಕ್ರಮಕ್ಕೆ ಪರಿಸರವಾದಿಗಳು ವಿರೋಧ ವ್ಯಕ್ತಪಡಿಸಿದ್ದಾರೆ. ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸುವಂತೆ ಒತ್ತಾಯ ಕೇಳಿ ಬಂದ ಹಿನ್ನೆಲೆ 10 ದಿನಗಳ ಕಾಲಾವಕಾಶವನ್ನು 20 ದಿನಕ್ಕೆ ವಿಸ್ತರಿಸಿದೆ.

ಇದನ್ನೂ ಓದಿ: ವಿಧಾನಸೌಧ ಬಳಿ ತಲೆ ಎತ್ತಲಿದೆ ಬಸವಣ್ಣನ ಪುತ್ಥಳಿ: ಕಡತ ಸಿದ್ಧಪಡಿಸಲು ಸಿಎಂ ಸೂಚನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.