ETV Bharat / state

Cauvery Water Dispute: ಕಾವೇರಿ ಹೋರಾಟದ ಜಾಗೃತಿ ಸಭೆ : ಸೆ.26ಕ್ಕೆ ಬೆಂಗಳೂರು ಬಂದ್‌ಗೆ ಕರೆ ನೀಡಿದ ಸರ್ವ ಸಂಘಟನೆ

Bangalore bandh: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆಯನ್ನು ಖಂಡಿಸಿ ಸೆಪ್ಟೆಂಬರ್​ 26ರಂದು ಬೆಂಗಳೂರು ಬಂದ್​ಗೆ ನಿರ್ಧರಿಸಲಾಗಿದೆ.

Etv Bharat
Etv Bharat
author img

By ETV Bharat Karnataka Team

Published : Sep 23, 2023, 4:07 PM IST

ಸೆಪ್ಟೆಂಬರ್​ 26ರಂದು ಬೆಂಗಳೂರು ಬಂದ್​

ಬೆಂಗಳೂರು : ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಸೆಪ್ಟೆಂಬರ್ 26ರಂದು ಬೆಂಗಳೂರು ಬಂದ್​ಗೆ ನಿರ್ಧರಿಸಲಾಗಿದೆ ಎಂದು ರೈತ ಮುಖಂಡ ಕುರುಬೂರು ಶಾಂತಕುಮಾರ್ ಘೋಷಿಸಿದ್ದಾರೆ. ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿರೋಧಿಸಿ, ಆಮ್ ಆದ್ಮಿ ಪಕ್ಷದ ನೇತೃತ್ವದಲ್ಲಿ ಇಂದು ನಗರದ ಫ್ರೀಡಂ ಪಾರ್ಕ್​ನಲ್ಲಿ ನಡೆದ ಸರ್ವ ಸಂಘಟನೆಗಳ ಕಾವೇರಿ ಹೋರಾಟದ ಜಾಗೃತಿ ಸಭೆಯಲ್ಲಿ ಸೆಪ್ಟೆಂಬರ್ 26ಕ್ಕೆ ಬೆಂಗಳೂರು ಬಂದ್‌ ಘೋಷಿಸಲಾಯಿತು.

ಕುಡಿಯುವ ನೀರಿನ ಅಗತ್ಯತೆ ಅರಿಯದೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನೀಡಿರುವ ಅವೈಜ್ಞಾನಿಕ ಆದೇಶ ಖಂಡಿಸಲು ಕರ್ನಾಟಕ ಜಲ ಸಂರಕ್ಷಣಾ ಸಮಿತಿಯ ರೈತ ಸಂಘಟನೆಗಳ ಒಕ್ಕೂಟ, ಕನ್ನಡಪರ ಸಂಘಟನೆಗಳ ಒಕ್ಕೂಟ, ಆಮ್ ಆದ್ಮಿ ಪಕ್ಷ, ಮತ್ತಿತರ ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು ಒಟ್ಟಾಗಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಶನಿವಾರ ಕಾವೇರಿ ಹೋರಾಟದ ಜಾಗೃತಿ ಸಭೆ ನಡೆಸಿದರು.

ಬೆಂಗಳೂರಿನ ಜನ ಹೋರಾಟ ಮಾಡಲಿ : ಬೆಂಗಳೂರಿನಲ್ಲಿ 1.30 ಕೋಟಿ ಜನ ಇದ್ದು, ಇದರಲ್ಲಿ 65 ಲಕ್ಷ ಜನ ಅನ್ಯ ಭಾಷಿಕರು ಇದ್ದಾರೆ. ಅವರಿಗೂ ಕುಡಿಯುವ ನೀರಿನ ಅವಶ್ಯಕತೆ ಇದೆ. 45 ದಿನಗಳಿಂದ ಕಾವೇರಿ ನೀರಿಗಾಗಿ ಹೋರಾಟ ನಡೆಯುತ್ತಿದ್ದರೂ ಬೆಂಗಳೂರಿನ ಜನ ಮಲಗಿದ್ದಾರೆ. ಇದು ಸರಿಯಲ್ಲ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಹೇಳಿದರು. ಯಾವುದೇ ಭಾಷಿಕರು ಆದರೂ ಕುಡಿಯಲು ನೀರು ಮುಖ್ಯ. ಆದ್ದರಿಂದ ಎಲ್ಲರೂ ಈ ಹೋರಾಟಕ್ಕೆ ಕೈಜೋಡಿಸಬೇಕು ಎಂದು ಅವರು ಮನವಿ ಮಾಡಿದರು. ಜನರ ಬದುಕು ಮುಖ್ಯ, ಯಾವುದೇ ಆದೇಶ ಏನೂ ಮಾಡಲು ಆಗಲ್ಲ. ಕುಡಿಯುವ ನೀರಿಗೆ ಆದ್ಯತೆ ಎಂದು ಸುಪ್ರೀಂಕೋರ್ಟ್ ಹೇಳಿದೆ. ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಬಿಡುತ್ತಿದೆ ಎಂದರು.

ರಾಜ್ಯ ಸರ್ಕಾರ ವಿರುದ್ಧ ಮುಖ್ಯಮಂತ್ರಿ ಚಂದ್ರು ವಾಗ್ದಾಳಿ : ಇದೇ ವೇಳೆ ಮಾತನಾಡಿದ ಆಮ್‌ ಆದ್ಮಿ ಪಕ್ಷದ ರಾಜ್ಯಾಧಕ್ಷ ಮುಖ್ಯಮಂತ್ರಿ ಚಂದ್ರು, 'ಮೇಕೆದಾಟು ಯೋಜನೆ ಜಾರಿಗೆ ಹೋರಾಟ ಮಾಡಿ ಅಧಿಕಾರಕ್ಕೆ ಬಂದಿದ್ದೀರಲ್ಲಾ ಏನು ಕಡಿದು ಕಟ್ಟೆ ಹಾಕಿದ್ದೀರಾ, ಮೇಕೆದಾಟು ಯೋಜನೆ ಯಾಕೆ ಪ್ರಾರಂಭಿಸಿಲ್ಲ. ಇದರ ಬದಲಾಗಿ ನೀವು ಎಲ್ಲಿದ್ದೀರಿ ಎಂದು ನಮಗೆ ಪ್ರಶ್ನೆ ಮಾಡ್ತೀರಾ? ಎಂದು ವಾಗ್ದಾಳಿ ನಡೆಸಿದರು. ಅಧಿವೇಶನ ಕರೆದು ನೀರು ಬಿಡಲ್ಲ ಎಂದು ನಿರ್ಣಯ ಮಾಡಿ, ಸುಪ್ರೀಂಕೋರ್ಟ್‌ಗೂ ವಿಚಾರ ತಿಳಿಸಿ, ಕೋರ್ಟ್ ಛೀಮಾರಿ ಹಾಕಬಹುದು. ಜೈಲಿಗೆ ಹಾಕಬಹುದು, ಏನೇನಕ್ಕೋ ಜೈಲಿಗೆ ಹೋಗ್ತಿರಾ ರಾಜ್ಯದ ಹಿತಕ್ಕಾಗಿ ಜೈಲಿಗೆ ಹೋಗಲು ಆಗಲ್ಲವಾ? ' ಎಂದು ರಾಜ್ಯ ಸರ್ಕಾರದ ವಿರುದ್ಧ ಗುಡುಗಿದರು.

ತಮಿಳುನಾಡಿಗೆ ನೀರು ಬಿಟ್ಟರೆ ಮುಂದಿನ ದಿನಗಳಲ್ಲಿ ಬೆಂಗಳೂರಿಗೆ ಕುಡಿಯುವ ನೀರಿನ ಕೊರತೆಯಾಗಲಿದೆ. ಇಷ್ಟು ವರ್ಷ ಅಧಿಕಾರ ನಡೆಸಿದ ಮೂರು ಪಕ್ಷಗಳು, ಸಮಸ್ಯೆಗೆ ಶಾಶ್ವತ ಪರಿಹಾರ ಹುಡುಕುವಲ್ಲಿ ವಿಫಲವಾಗಿವೆ. ನಿಮಗೆ ನಾಡಿನ ಹಿತ ಕಾಪಾಡುವ ಬದ್ಧತೆ ಇಲ್ವಾ ಎಂದು ಪ್ರಶ್ನಿಸಿದರು. ಸಭೆಯಲ್ಲಿ ಆಮ್ ಆದ್ಮಿ ಪಕ್ಷ, ರೈತ ಸಂಘಟನೆಗಳ ಒಕ್ಕೂಟ ಹಾಗೂ ಕನ್ನಡಪರ ಸಂಘಟನೆಗಳ ಒಕ್ಕೂಟ ಮತ್ತಿತರ ಸಂಘ ಸಂಸ್ಥೆಗಳ ಮುಖಂಡರು ಪದಾಧಿಕಾರಿಗಳು ಭಾಗಿಯಾಗಿದ್ದರು.

ಇದನ್ನೂ ಓದಿ : ಕಾವೇರಿ ಬಿಕ್ಕಟ್ಟು: ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪ್ರತಿಭಟನೆ... ರಸ್ತೆ ತಡೆಗೆ ಮುಂದಾದ ನಾಯಕರನ್ನು ವಶಕ್ಕೆ ಪಡೆದ ಪೊಲೀಸರು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.