ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟವು ಬೆಂಗಳೂರಿನಲ್ಲಿ ಇಂದು ಖಾಸಗಿ ಸಾರಿಗೆ ಬಂದ್ಗೆ ಕರೆ ನೀಡಿದೆ. ಈ ಹಿನ್ನೆಲೆಯಲ್ಲಿ ಆಟೋ, ಟ್ಯಾಕ್ಸಿ, ಕ್ಯಾಬ್, ಖಾಸಗಿ ಬಸ್, ಗೂಡ್ಸ್ ವಾಹನ, ಶಾಲಾ ವಾಹನಗಳು ಸೇರಿ ಎಲ್ಲ ಖಾಸಗಿ ವಾಹನಗಳ ಸಂಚಾರ ಸ್ತಬ್ಧವಾಗಿದೆ. ಹೀಗಾಗಿ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಬಿಎಂಟಿಸಿ ವಾಯುವಜ್ರ ಬಸ್‌ನಲ್ಲಿ ಪ್ರಯಾಣಿಸಿದರು.
-
BMTC trip back home today from the airport. pic.twitter.com/jUTfHk1HrE
— Anil Kumble (@anilkumble1074) September 11, 2023 " class="align-text-top noRightClick twitterSection" data="
">BMTC trip back home today from the airport. pic.twitter.com/jUTfHk1HrE
— Anil Kumble (@anilkumble1074) September 11, 2023BMTC trip back home today from the airport. pic.twitter.com/jUTfHk1HrE
— Anil Kumble (@anilkumble1074) September 11, 2023
ಖಾಸಗಿ ವಾಹನಗಳ ಸಂಚಾರವಿಲ್ಲದೇ ಇರುವುದರಿಂದ ಅವರು ಬಿಎಂಟಿಸಿ ಬಸ್‌ನಲ್ಲಿ ಮನೆಗೆ ತೆರಳಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿರುವ ಕುಂಬ್ಳೆ, ಬಿಎಂಟಿಸಿ ಬಸ್‌ನಲ್ಲಿ ನಿಂತು ಪ್ರಯಾಣಿಸುತ್ತಿರುವ ಫೋಟೋ ಶೇರ್ ಮಾಡಿಕೊಂಡಿದ್ದಾರೆ. 'ಇಂದು ವಿಮಾನ ನಿಲ್ದಾಣದಿಂದ ಮನೆಗೆ ಮರಳಲು ಬಿಎಂಟಿಸಿ ಪ್ರಯಾಣ' ಎಂದು ಕ್ಯಾಪ್ಶನ್ ನೀಡಿದ್ದಾರೆ.
ಇದನ್ನೂ ಓದಿ: ಬೆಂಗಳೂರಿನಲ್ಲಿ ಖಾಸಗಿ ಸಾರಿಗೆ ಬಂದ್, ಬೇಡಿಕೆ ಈಡೇರಿಸಲು ಆಗ್ರಹ; ಸರ್ಕಾರದಿಂದ ಹೆಚ್ಚುವರಿ ಬಸ್ ವ್ಯವಸ್ಥೆ
ಪ್ರಯಾಣಿಕರ ಜೇಬಿಗೆ ಕತ್ತರಿ: ಬಂದ್ ಹಿನ್ನೆಲೆಯಲ್ಲಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟ್ಯಾಕ್ಸಿಗಳಿಲ್ಲದೇ ಜನರು ಪರದಾಡುವಂತಾಗಿದೆ. ಇದನ್ನೇ ಕೆಲ ವಾಹನ ಸವಾರರು ಬಂಡವಾಳ ಮಾಡಿಕೊಂಡು, ವೈಟ್ ಬೋರ್ಡ್ ಕಾರುಗಳನ್ನು ತಂದು ದುಪ್ಪಟ್ಟು ಹಣ ವಸೂಲಿ ಮಾಡುತ್ತಿದ್ದಾರೆ. ಏರ್‌ಪೋರ್ಟ್‌ನಿಂದ ನಗರಕ್ಕೆ ತೆರಳುವ ಪ್ರಯಾಣಿಕರಿಂದ ಹೆಚ್ಚು ಹಣ ಪಡೆಯಲಾಗುತ್ತಿದೆ. ವೈಟ್ ಬೋರ್ಡ್ ಕಾರುಗಳಲ್ಲಿ 1,300 ರಿಂದ 2 ಸಾವಿರ ರೂಪಾಯಿವರೆಗೂ ವಸೂಲಿ ಮಾಡುತ್ತಿದ್ದಾರೆ.
ಏರ್‌ಪೋರ್ಟ್‌ನಿಂದ ಮೆಜೆಸ್ಟಿಕ್, ಬನಶಂಕರಿಗೆ ಸಾವಿರಾರು ರೂಪಾಯಿ ಹಣ ಹೆಚ್ಚುವರಿಯಾಗಿ ಪಡೆಯಲಾಗುತ್ತಿದೆ. ಈ ಹಿಂದೆ 800 ರಿಂದ 1 ಸಾವಿರ ರೂ.ಗೆ ಟ್ಯಾಕ್ಸಿ ಚಾಲಕರು ಪ್ರಯಾಣಿಕರನ್ನು ಕರೆದುಕೊಂಡು ಹೋಗುತ್ತಿದ್ದರು. ಆದರೆ ಇಂದು ಮುಷ್ಕರದಿಂದಾಗಿ ದುಪ್ಪಟ್ಟು ಹಣವನ್ನು ಪ್ರಯಾಣಿಕರಿಂದ ಪೀಕುತ್ತಿದ್ದಾರೆ. ತುರ್ತಾಗಿ ತೆರಳಬೇಕಾದ ಕೆಲವರು ಹೆಚ್ಚು ಹಣ ನೀಡಿ ಪ್ರಯಾಣಿಸಿದ್ರೆ, ಇನ್ನು ಕೆಲವರು ಹಣ ಜಾಸ್ತಿಯಾಯ್ತು ಅಂತ ಬಸ್ನಲ್ಲೇ ಸಂಚರಿಸುತ್ತಿದ್ದಾರೆ.
ಸರ್ಕಾರದಿಂದ ಹೆಚ್ಚುವರಿ ಬಸ್ ವ್ಯವಸ್ಥೆ: ಖಾಸಗಿ ಸಾರಿಗೆ ಚಾಲಕರು, ಮಾಲೀಕರ ಮುಷ್ಕರಕ್ಕೆ ರಾಜ್ಯ ಸರ್ಕಾರ ಸೆಡ್ಡು ಹೊಡೆದಿದೆ. ಮುಷ್ಕರದಿಂದ ಸಾರ್ವಜನಿಕರಿಗೆ ತೊಂದರೆಯಾಗದಂತೆ ಹೆಚ್ಚುವರಿ ಬಿಎಂಟಿಸಿ, ಕೆಎಸ್ಆರ್ಟಿಸಿ ಬಸ್‌ಗಳನ್ನು ರಸ್ತೆಗಿಳಿಸಲಾಗಿದೆ. ಅಲ್ಲದೇ ಮೆಟ್ರೋ ರೈಲು ಸಹ ಹೆಚ್ಚುವರಿ ಓಡಾಟ ನಡೆಸುತ್ತಿದೆ. ಬಂದ್ ನಡುವೆಯೂ ನಗರದ ಅನೇಕ ಕಡೆಗಳಲ್ಲಿ ಖಾಸಗಿ ವಾಹನಗಳ ಓಡಾಟ ಕಂಡುಬಂದಿದೆ. ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗದಂತೆ ಮೆಜೆಸ್ಟಿಕ್ನಿಂದ ಏರ್ಪೋರ್ಟ್, ದೊಡ್ಡಬಳ್ಳಾಪುರ, ಚಿಕ್ಕಬಳ್ಳಾಪುರ, ಎಲೆಕ್ಟ್ರಾನಿಕ್ ಸಿಟಿ ಸೇರಿದಂತೆ ನಗರದ ಎಲ್ಲಾ ಭಾಗಗಳಿಗೂ ಹೆಚ್ಚುವರಿ ಸರ್ಕಾರಿ ಬಸ್ ವ್ಯವಸ್ಥೆ ಮಾಡಲಾಗಿದೆ.
ಇದನ್ನೂ ಓದಿ: ಬೆಂಗಳೂರು: ಬಂದ್ ನಡುವೆ ರಸ್ತೆಗಿಳಿದ ಕೆಲವು ಕ್ಯಾಬ್, ರ‍್ಯಾಪಿಡೋ ಚಾಲಕರ ಮೇಲೆ ಹಲ್ಲೆ; ಮೊಟ್ಟೆ ಎಸೆದು ಆಕ್ರೋಶ