ETV Bharat / state

Bengaluru bandh: ನಾಳೆ ಬೆಂಗಳೂರು ಬಂದ್.. ಶಾಲಾ- ಕಾಲೇಜುಗಳಿಗೆ ರಜೆ, ಆಟೋ, ಟ್ಯಾಕ್ಸಿ ಸೇವೆಯೂ ಇರಲ್ಲ - ಬೆಂಗಳೂರು ಬಂದ್

ನಾಳೆ ನಡೆಯುವ ಬೆಂಗಳೂರು ಬಂದ್​ಗೆ 150ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ಸೂಚಿಸಿವೆ.

Bengaluru Bandh tomorrow
ನಾಳೆ ಬೆಂಗಳೂರು ಬಂದ್
author img

By ETV Bharat Karnataka Team

Published : Sep 25, 2023, 7:56 PM IST

Updated : Sep 25, 2023, 9:09 PM IST

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವುದನ್ನು ಖಂಡಿಸಿ ವಿವಿಧ ಸಂಘಟನೆಗಳು ಕರೆ ಕೊಟ್ಟಿರುವ ಮಂಗಳವಾರದ ಬೆಂಗಳೂರು ಬಂದ್‌ಗೆ ರಾಜ್ಯ ರಾಜಧಾನಿ ಬಹುತೇಕ ಸ್ತಬ್ಧವಾಗಲಿದೆ. ಬೆಳಗ್ಗೆ 6 ರಿಂದ ಸಂಜೆ 6ರ ವರೆಗೆ ಬೆಂಗಳೂರು ಬಂದ್ ಆಗಲಿದೆ. ಶಾಲಾ ಕಾಲೇಜುಗಳಿಗೂ ರಜೆ ಇರಲಿದೆ. ಸಿನಿಮಾ, ಟ್ಯಾಕ್ಸಿ, ಐಟಿ-ಬಿಟಿ, ಹೋಟೆಲ್ ಮಾಲೀಕರು ಸ್ವಯಂಪ್ರೇರಿತವಾಗಿ ಬಂದ್ ಮಾಡಿ ಬೆಂಬಲ ವ್ಯಕ್ತಪಡಿಸಬೇಕೆಂದು ಸಂಘಟನೆಗಳು ಕೋರಿವೆ.

ಬೆಳಗ್ಗೆ ಟೌನ್ ಹಾಲ್‌ನಿಂದ ಫ್ರೀಡಂ ಪಾರ್ಕ್​ವರೆಗೆ ಬೃಹತ್ ಮೆರವಣಿಗೆ ಹಮ್ಮಿಕೊಳ್ಳಲು ಸಂಘಟನೆಗಳು ನಿರ್ಧರಿಸಿವೆ. 150 ಕ್ಕೂ ಹೆಚ್ಚು ಸಂಘಟನೆಗಳು ಬೆಂಗಳೂರು ಬಂದ್‌ಗೆ ಬೆಂಬಲ ಸೂಚಿಸಿವೆ. ಬಿಜೆಪಿ, ಜನತಾ ದಳ ಹಾಗೂ ಆಮ್ ಆದ್ಮಿ ಪಕ್ಷ ಬೆಂಬಲ ಘೋಷಿಸಿವೆ.

ಏನೇನು ಇರಲ್ಲ: ಆಟೋಗಳು, ಟ್ಯಾಕ್ಸಿ, ಓಲಾ, ಊಬರ್, ಪೆಟ್ರೋಲ್ ಬಂಕ್, ಶಾಲಾ-ಕಾಲೇಜು, ಭಾಗಶಃ ಸರ್ಕಾರಿ ಮತ್ತು ಖಾಸಗಿ ಬಸ್ ಸಂಚಾರ ಇರಲ್ಲ. ಕೈಗಾರಿಕೆಗಳು, ವಾಣಿಜ್ಯೋದ್ಯಮ, ಅಂಗಡಿ ಮುಂಗಟ್ಟುಗಳು, ಕೆ ಆರ್ ಮಾರುಕಟ್ಟೆ ಬಂದ್ ಆಗಲಿದೆ.

ಏನೇನು ಇರಲಿದೆ: ಬೀದಿಬದಿ ವ್ಯಾಪಾರಗಳು, ಸರ್ಕಾರಿ ಕಚೇರಿಗಳು, ನಮ್ಮ ಮೆಟ್ರೋ, ಖಾಸಗಿ ಕಚೇರಿಗಳು, ಆಸ್ಪತ್ರೆ, ಔಷಧ ಅಂಗಡಿಗಳು, ಆಂಬ್ಯುಲೆನ್ಸ್, ಹಾಲು ಮತ್ತು ಅಗತ್ಯ ಸೇವೆಗಳು ದೊರೆಯಲಿವೆ.

ಕನ್ನಡ ಸಂಘಟನೆಗಳಿಂದ ಬಂದ್​ಗೆ ವಿರೋಧ: ಕಾವೇರಿ ಬಗ್ಗೆ ಇದೇ ಶುಕ್ರವಾರ(ಸೆ.29) ರಂದು ನಡೆಯುವ "ಅಖಂಡ ಕರ್ನಾಟಕ ಬಂದ್" ಮತ್ತು ರಾಜ್ಯಾದ್ಯಂತ ಭಾರಿ ಚಳವಳಿ ನಡೆಸುವ ಬಗ್ಗೆ ಕನ್ನಡ ಒಕ್ಕೂಟದ ಆಶ್ರಯದಲ್ಲಿ ಕನ್ನಡಪರ ಸಂಘಟನೆಗಳು ಕರೆ ನೀಡಿವೆ. ನಾಳೆ ನಡೆಯುವ ಬೆಂಗಳೂರು ಬಂದ್​ಗೆ ಕನ್ನಡ ಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದು, ರಾಜಭವನಕ್ಕೆ ಮುತ್ತಿಗೆ ಹಾಕಲು ಸಜ್ಜಾಗಿದ್ದಾರೆ.

ಶಾಲಾ- ಕಾಲೇಜುಗಳಿಗೆ ರಜೆ - ಜಿಲ್ಲಾಧಿಕಾರಿ ದಯಾನಂದ: ತಮಿಳುನಾಡಿಗೆ ಕಾವೇರಿ ಜಲಾಶಯದಿಂದ ನೀರು ಹರಿಸಿರುವುದನ್ನು ಖಂಡಿಸಿ ನಗರದ ವಿವಿಧ ಸಂಘಟನೆಗಳು ಸೆಪ್ಟೆಂಬರ್ 26 ರಂದು 'ಬೆಂಗಳೂರು ಬಂದ್' ಘೋಷಿಸಿರುವುದರಿಂದ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಂಗಳೂರು ನಗರದ ಎಲ್ಲಾ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ ಎ ದಯಾನಂದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಪ್ಪುಪಟ್ಟಿ ಧರಿಸಿ ಪರೀಕ್ಷೆಗೆ ವಿದ್ಯಾರ್ಥಿಗಳು ಹಾಜರು: ಬೆಂಗಳೂರು ಬಂದ್‌ಗೆ ಖಾಸಗಿ ಶಾಲೆಗಳ ಒಕ್ಕೂಟ ಬೆಂಬಲ ಘೋಷಿಸಿದೆ. ತಮ್ಮ ಒಕ್ಕೂಟದ ಎಲ್ಲ ಖಾಸಗಿ ಶಾಲೆಗಳನ್ನು ಬಂದ್‌ ಮಾಡಲಿದ್ದಾರೆ. ಪರೀಕ್ಷಾ ವಿದ್ಯಾರ್ಥಿಗಳು ಕಪ್ಪುಪಟ್ಟಿ ಧರಿಸಿ ಪರೀಕ್ಷೆಗೆ ಹಾಜರಾಗುತ್ತಾರೆ ಎಂದು ಒಕ್ಕೂಟದ ಮುಖಂಡರಾದ ಲೋಕೇಶ್‌ ತಾಳಿಕೋಟೆ ತಿಳಿಸಿದ್ದಾರೆ.

ಐಟಿ ಬಂದ್‌: ಐಟಿ ಕನ್ನಡಿಗರ ಬಳಗ ಮೂರೂವರೆ ಸಾವಿರಕ್ಕೂ ಹೆಚ್ಚು ಐಟಿ ಕಂಪನಿಗಳ ನೌಕರರು ಕೆಲಸಕ್ಕೆ ರಜೆ ಹಾಕಿ ಬೈಕ್ ರ‍್ಯಾಲಿ ನಡೆಸಲಿದ್ದಾರೆ ಎಂದು ಸಂಘಟನೆ ಅಧ್ಯಕ್ಷ ಶಿವಾನಂದ್ ಹೇಳಿದ್ದಾರೆ.

ಇದನ್ನೂ ಓದಿ : ನಾಳೆ ಬೆಂಗಳೂರು ಬಂದ್: ಹಿರಿಯ ಅಧಿಕಾರಿಗಳೊಂದಿಗೆ ನಗರ ಪೊಲೀಸ್ ಆಯುಕ್ತರಿಂದ ಸಭೆ

Last Updated : Sep 25, 2023, 9:09 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.