ETV Bharat / state

ಬೆಂಗಳೂರು ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಕರಡು ಮತದಾರರ ಪಟ್ಟಿ ಪ್ರಕಟ - ಚುನಾವಣೆಗೆ ಕರಡು ಮತದಾರರ ಪಟ್ಟಿ ಪ್ರಕಟ

MLC Election voters list: ಬೆಂಗಳೂರು ವಿಧಾನ ಪರಿಷತ್ ಚುನಾವಣೆಯ ಕರಡು ಮತದಾರರ ಪಟ್ಟಿಯನ್ನು ಚುನಾವಣಾ ಆಯೋಗ ಪ್ರಕಟಿಸಿದೆ.

Election commission
ಚುನಾವಣಾ ಆಯೋಗ
author img

By ETV Bharat Karnataka Team

Published : Nov 24, 2023, 10:09 AM IST

ಬೆಂಗಳೂರು: ವಿಧಾನ ಪರಿಷತ್ ಬೆಂಗಳೂರು ಪದವೀಧರರ ಕ್ಷೇತ್ರ ಮತ್ತು ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಕರಡು ಮತದಾರರ ಪಟ್ಟಿಯನ್ನು ಚುನಾವಣಾ ವಿಭಾಗದ ವಿಶೇಷ ಆಯುಕ್ತ ಆರ್. ರಾಮಚಂದ್ರನ್ ಗುರುವಾರ ಪ್ರಕಟಿಸಿದರು.

ಈ ಕುರಿತು ಪಾಲಿಕೆ ಕೇಂದ್ರ ಕಚೇರಿಯಲ್ಲಿ ಮಾತನಾಡಿದ ಅವರು, ಬಿಬಿಎಂಪಿ ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳ ಪೈಕಿ ಪದವೀಧರರ ಕ್ಷೇತ್ರದ ಚುನಾವಣೆಗೆ ಒಟ್ಟು 39,858 ಮತದಾರರು ನೋಂದಣಿ ಮಾಡಿಕೊಂಡಿದ್ದಾರೆ. ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆಗೆ 6,343 ಮತದಾರರು ನೋಂದಣಿ ಮಾಡಿಕೊಂಡಿಕೊಂಡಿದ್ದಾರೆ ಎಂದು ಮಾಹಿತಿ ನೀಡಿದರು.

ಆಯೋಗದ ವೇಳಾಪಟ್ಟಿಯಂತೆ ಕರಡು ಮತದಾರರ ಪಟ್ಟಿಯಲ್ಲಿ ಹಕ್ಕು ಮತ್ತು ಆಕ್ಷೇಪಣೆಗಳಿದ್ದಲ್ಲಿ ಡಿಸೆಂಬರ್ 9ರೊಳಗೆ ಸಂಬಂಧಪಟ್ಟ ಮತದಾನ ನೋಂದಣಿ ಅಧಿಕಾರಿಗಳ ಬಳಿ ಸಲ್ಲಿಸಬಹುದು. ಡಿಸೆಂಬರ್ 25ರಂದು ಆಕ್ಷೇಪಣೆಗಳನ್ನು ಪರಿಶೀಲಿಸಿ ಸೂಕ್ತ ನಿರ್ಣಯಗಳನ್ನು ಕೈಗೊಳ್ಳಲಾಗುವುದು. ಡಿಸೆಂಬರ್ 30ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುವುದು ಎಂದು ಹೇಳಿದರು.

ಲೋಕಸಭಾ ಚುನಾವಣೆ, ಜನವರಿ 5ರಂದು ಅಂತಿಮ ಮತದಾರರ ಪಟ್ಟಿ: ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಈಗಾಗಲೇ ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿದ್ದು, ಮೃತಪಟ್ಟವರನ್ನು ಮತದಾರರ ಪಟ್ಟಿಯಿಂದ ತೆಗೆಯುವ ಪ್ರಕ್ರಿಯೆ ಕೂಡಾ ನಡೆಯುತ್ತಿದೆ. ಜನವರಿ 5ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದರು.

ಅಂಚೆ ಮೂಲಕ ಮತದಾರರ ಗುರುತಿನ ಚೀಟಿ ಹಂಚಿಕೆ: ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಗುರುತಿನ ಚೀಟಿಗಳನ್ನು ಅಂಚೆ ಮೂಲಕ ವಿತರಿಸಲಾಗುತ್ತಿದೆ. ಅದರಂತೆ ಬೆಂಗಳೂರು ಕೇಂದ್ರದಲ್ಲಿ 44 ಸಾವಿರ, ಬೆಂಗಳೂರು ಉತ್ತರದಲ್ಲಿ 52 ಸಾವಿರ, ಬೆಂಗಳೂರು ದಕ್ಷಿಣದಲ್ಲಿ 42,250 ಹಾಗೂ ಬೆಂಗಳೂರು ನಗರದಲ್ಲಿ 97 ಸಾವಿರ ಮತದಾರರ ಗುರುತಿನ ಚೀಟಿಗಳನ್ನು ವಿತರಿಸುವ ಪ್ರಕ್ರಿಯೆ ನಡೆಯುತ್ತಿದೆ. ಮುಂದಿನ 15 ದಿನಗಳಲ್ಲಿ ಎಲ್ಲರಿಗೂ ಮತದಾರರ ಗುರುತಿನ ಚೀಟಿ ತಲುಪಲಿದೆ ಎಂದು ತಿಳಿಸಿದರು.

ಯುವ ಮತದಾರರಲ್ಲಿ ಮನವಿ: ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ 28 ವಿಧಾನಸಭಾ ಕ್ಷೇತ್ರಗಳಲ್ಲಿಯೂ 18 ವರ್ಷ ತುಂಬಿದ ಯುವ ಮತದಾರರು ಸ್ವಯಂಪ್ರೇರಿತವಾಗಿ ಮುಂದೆ ಬಂದು ಮತದಾರರ ಪಟ್ಟಿಯಲ್ಲಿ ನೋಂದಣಿಯಾಗಬೇಕು. ಇತರರನ್ನೂ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗುವಂತೆ ಪ್ರೇರಣೆ ನೀಡಬೇಕು. ಈ ಮೂಲಕ ಪ್ರಜಾಪ್ರಭುತ್ವದಲ್ಲಿ ಯುವ ಮತದಾರರ ಶಕ್ತಿಯನ್ನು ತೋರಿಸಬೇಕು ಎಂದು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಚುನಾವಣಾ ವಿಭಾಗದ ಸಹಾಯಕ ಆಯುಕ್ತ ಅಜಯ್, ಬೆಂಗಳೂರು ಕೇಂದ್ರ, ದಕ್ಷಿಣ, ಉತ್ತರ, ನಗರದ ಅಪರ ಜಿಲ್ಲಾ ಚುನಾವಣಾಧಿಕಾರಿಗಳು, ಇತರ ಅಧಿಕಾರಿಗಳು ಇದ್ದರು.

ಮತದಾರರ ಪಟ್ಟಿ ಪರಿಶೀಲನೆ ಕುರಿತು ಸಭೆ; ನೋಂದಣಿ ಪ್ರಮಾಣ ಹೆಚ್ಚಿಸಲು ಸೂಚನೆ: ಬೆಂಗಳೂರಿನ ಕೇಂದ್ರ ವ್ಯಾಪ್ತಿಯಲ್ಲಿ ಬರುವ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯ ಪರಿಶೀಲನೆ ಕುರಿತು ಸಭೆ ನಡೆಸಿದ ವೀಕ್ಷಕರಾದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಉಮಾ ಮಹದೇವನ್ ನೋಂದಣಿ ಪ್ರಮಾಣ ತ್ವರಿತಗೊಳಿಸಿ ಮತದಾರರ ಸಂಖ್ಯೆ ಹೆಚ್ಚಿಸಲು ಸೂಚನೆ ನೀಡಿದರು. ಪಾಲಿಕೆ ಕೇಂದ್ರ ಕಚೇರಿಯಲ್ಲಿ ಬೆಂಗಳೂರು ಕೇಂದ್ರ ವ್ಯಾಪ್ತಿಯಲ್ಲಿನ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯ ಪರಿಶೀಲನೆ ಕುರಿತು ರಾಜಕೀಯ ಪಕ್ಷದ ಪ್ರತಿನಿಧಿಗಳ ಜೊತೆ ನಡೆದ ಉಮಾ ಮಹದೇವನ್ ಮಾತನಾಡಿ, ಬೆಂಗಳೂರು ಕೇಂದ್ರ ವ್ಯಾಪ್ತಿಯಲ್ಲಿ ಬರುವ 7 ವಿಧಾನಸಭಾ ಕ್ಷೇತ್ರಗಳಾದ ಆರ್‌ಆರ್ ನಗರ, ಶಿವಾಜಿನಗರ, ಶಾಂತಿನಗರ, ಚಾಮರಾಜಪೇಟೆ, ಚಿಕ್ಕಪೇಟೆ, ಗಾಂಧಿನಗರ, ರಾಜಾಜಿನಗರಗಳಲ್ಲಿ ಮತದಾರರ ಪ್ರಮಾಣ ಹೆಚ್ಚಳ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಮತ್ತು ಬೆಂಗಳೂರು ಕೇಂದ್ರ ವ್ಯಾಪ್ತಿಯ ಮತದಾರರ ಪಟ್ಟಿಯಲ್ಲಿ ಮಹಿಳೆಯರು ಹೆಚ್ಚು ಸೇರ್ಪಡೆ ಕುರಿತು ಕ್ರಮ ಕೈಗೊಳ್ಳಲು ಸೂಚನೆ ನೀಡಿದರು.

ಇದನ್ನೂ ಓದಿ: ಯಜಮಾನ‌ ಇಲ್ಲದಿದ್ದರೆ ಅನ್ನಭಾಗ್ಯ, ಗೃಹಲಕ್ಷ್ಮಿ ಹಣ ಮನೆಯ 2ನೇ ಹಿರಿಯ ವ್ಯಕ್ತಿಯ ಖಾತೆಗೆ ವರ್ಗಾವಣೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.