ಬೆಂಗಳೂರು: ನಗರದಲ್ಲಿಂದು 3733 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 191438 ಕ್ಕೆ ಏರಿಕೆಯಾಗಿದೆ.
ಇಂದು ಮಹಾಮಾರಿಗೆ 33 ಮಂದಿ ಮೃತಪಟ್ಟಿದ್ದು, ಈವರೆಗೆ 2625 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಇನ್ನು ಗುಣಮುಖರಾಗಿ 4180 ಮಂದಿ ಬಿಡುಗಡೆಯಾಗಿದ್ದು, ಈವರೆಗೆ ಒಟ್ಟು 147378 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಹಾಗೂ ಸಧ್ಯ 41434 ಸಕ್ರಿಯ ಪ್ರಕರಣಗಳಿವೆ. ಒಟ್ಟು 255 ಮಂದಿ ಐಸಿಯು ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನಗರದಲ್ಲಿ ಕೊರೊನಾ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಆಯುಕ್ತರಾದ ಮಂಜುನಾಥ್ ಪ್ರಸಾದ್, ಹೆಚ್ಚೆಚ್ಚು ಕೋವಿಡ್ ಸೋಂಕು ಪರೀಕ್ಷೆ ನಡೆಸುತ್ತಿರುವುದರಿಂದ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ಇದರಿಂದ ಸಾವಿನ ಸಂಖ್ಯೆ ನಿಯಂತ್ರಿಸಬಹುದು. ಹಾಗೆಯೇ ಆಸ್ಪತ್ರೆಗಳಿಗೆ ಭೇಟಿ ಮಾಡಿ ಕೊರೊನಾ ಸಾವಿನ ಆಡಿಟ್ ಮಾಡಲಾಗುತ್ತಿದೆ. ಸಧ್ಯದಲ್ಲೇ ಈ ವರದಿ ಕೈಸೇರಲಿದೆ. ಆಸ್ಪತ್ರೆಯ ಆಕ್ಸಿಜನ್ ಕೊರತೆ, ಐಸಿಯು ಬೆಡ್ ಕೊರತೆ ಬಗ್ಗೆಯೂ ಪರಿಶೀಲಿಸಲಾಗುತ್ತಿದೆ ಎಂದಿದ್ದಾರೆ.