ETV Bharat / state

ಪೋಕ್ಸೋ ಪ್ರಕರಣ: ಅಪರಾಧಿಗೆ ಜೀವ ಇರುವವರೆಗೆ ಕಠಿಣ ಜೈಲು ಶಿಕ್ಷೆ ವಿಧಿಸಿದ ಬೆಂಗಳೂರು ಕೋರ್ಟ್ - ಬೆಂಗಳೂರು ಕೋರ್ಟ್

Lifetime imprisonment in POCSO case: ಪೋಕ್ಸೋ ಪ್ರಕರಣದಲ್ಲಿ ಅಪರಾಧಿಗೆ ಜೀವ ಇರುವವರೆಗೆ ಕಠಿಣ ಜೈಲು ಶಿಕ್ಷೆ ವಿಧಿಸಿ ಬೆಂಗಳೂರಿನ 3ನೇ ತ್ವರಿತ ಪೋಕ್ಸೋ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.

ಪೋಕ್ಸೋ ಪ್ರಕರಣ
ಪೋಕ್ಸೋ ಪ್ರಕರಣ
author img

By ETV Bharat Karnataka Team

Published : Jan 6, 2024, 8:35 PM IST

ಬೆಂಗಳೂರು: ಆರು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಕೊಲೆಗೈದಿದ್ದ ಅಪರಾಧಿಗೆ ಜೀವಿತಾವಧಿ ಜೈಲು ಶಿಕ್ಷೆ ವಿಧಿಸಿ (ಜೀವ ಇರುವವರೆಗೆ ಶಿಕ್ಷೆ) ಬೆಂಗಳೂರು ನಗರದ 3ನೇ ತ್ವರಿತ ಪೋಕ್ಸೋ ವಿಶೇಷ ನ್ಯಾಯಾಲಯ ಆದೇಶಿಸಿದೆ.

2017ರ ಏಪ್ರಿಲ್ 20ರಂದು ಬೆಂಗಳೂರಿನ ನಿವಾಸಿಯೊಬ್ಬ ಬಾಲಕಿಯನ್ನು ತನ್ನ ಮನೆಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದ. ಬಳಿಕ ಆಕೆಯ ಉಸಿರುಗಟ್ಟಿಸಿ ಕೊಲೆಗೈದು ಮೃತ ದೇಹವನ್ನು ರಟ್ಟಿನ ಬಾಕ್ಸ್‌ನಲ್ಲಿ ಬಚ್ಚಿಟ್ಟು ಪರಾರಿಯಾಗಿದ್ದ. ಮಗಳು ಕಾಣೆಯಾಗಿರುವುದಾಗಿ‌ ಬಾಲಕಿಯ ಪೋಷಕರು ಗಿರಿನಗರ ಠಾಣಾ ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಗಿರಿನಗರ ಠಾಣೆ ಪೊಲೀಸರು ನಾಲ್ಕು ದಿನಗಳ ಬಳಿಕ ಆರೋಪಿಯ ಮನೆಯಲ್ಲಿ ಬಾಲಕಿಯ ಮೃತ ದೇಹ ಪತ್ತೆಹಚ್ಚಿದ್ದರು. ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿ, ತನಿಖೆ ಪೂರ್ಣಗೊಳಿಸಿ, ಕೊಲೆ, ಲೈಂಗಿಕ ದೌರ್ಜನ್ಯ, ಅಪಹರಣದ ಆರೋಪದಡಿ‌ ಚಾರ್ಜ್​ ಶೀಟ್ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ಪೂರ್ಣಗೊಳಿಸಿರುವ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಇಶ್ರತ್‌ ಜಹಾನ್‌ ಅರ, ಅಪರಾಧಿಗೆ ಯಾವುದೇ ಕ್ಷಮಾಧಾನವಿಲ್ಲದೆ ಜೀವ ಇರುವವರೆಗೆ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದ್ದಾರೆ. ಜೊತೆಗೆ, ಸಂತ್ರಸ್ತೆಯ ಪೋಷಕರಿಗೆ ಎಂಟು ಲಕ್ಷ ರೂ. ಪರಿಹಾರ ನೀಡುವಂತೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ನಿರ್ದೇಶಿಸಲಾಗಿದೆ. ಪ್ರಾಸಿಕ್ಯೂಷನ್‌ ಪರವಾಗಿ ಸರ್ಕಾರಿ ಅಭಿಯೋಜಕಿ ಗೀತಾ ರಾಮಕೃಷ್ಣ ಗೊರವರ ವಾದಿಸಿದ್ದರು.

ಈ ಮೊದಲು ಪ್ರಕರಣದ ವಿಚಾರಣೆ ಪೂರ್ಣಗೊಳಿಸಿದ್ದ 54ನೇ ಸೆಷನ್ಸ್‌ ನ್ಯಾಯಾಲಯ, ಅಪರಾಧಿಗೆ ಮರಣದಂಡನೆ ಶಿಕ್ಷೆ ವಿಧಿಸಿ ಆದೇಶಿಸಿತ್ತು. ಈ ಆದೇಶ ಪ್ರಶ್ನಿಸಿ ಹೈಕೋರ್ಟ್‌ ಮೊರೆ ಹೋಗಿದ್ದ ಆರೋಪಿ, ಕೆಳ ಹಂತದ ನ್ಯಾಯಾಲಯದಲ್ಲಿ ತನ್ನ ಪರ ವಾದವನ್ನು ಕೋರ್ಟ್‌ ಆಲಿಸಿಲ್ಲ. ಈ ನಿಟ್ಟಿನಲ್ಲಿ ತನ್ನ ಪರವಾದ ವಾದಕ್ಕೂ ಅವಕಾಶ ಕಲ್ಪಿಸಬೇಕು ಎಂದು ಮನವಿ ಸಲ್ಲಿಸಿದ್ದ ಹಾಗೂ ಮರಣ ದಂಡನೆ ಶಿಕ್ಷೆ ರದ್ದು ಪಡಿಸುವಂತೆ ಕೋರಿದ್ದ. ಅರ್ಜಿ ಇತ್ಯರ್ಥಗೊಳಿಸಿದ್ದ ಹೈಕೋರ್ಟ್‌, ಆರೋಪಿಯ ವಾದ ಮಂಡನೆ ಹಾಗೂ ತಾನು ತಪ್ಪಿತಸ್ಥನಲ್ಲ‌ ಎಂದು ಸಾಬೀತುಪಡಿಸಲು ಅವಕಾಶ ನೀಡಿ, ಪುನರ್‌ ವಿಚಾರಣೆ ನಡೆಸುವಂತೆ ಅಧೀನ ನ್ಯಾಯಾಲಯಕ್ಕೆ ಸೂಚಿಸಿತ್ತು.

ಈ ನಿಟ್ಟಿನಲ್ಲಿ ಪೋಕ್ಸೋ ವಿಶೇಷ ನ್ಯಾಯಾಲಯ ಪುನರ್‌ ವಿಚಾರಣೆ ನಡೆಸಿತ್ತು. ಆರೋಪಿಯ ಪತ್ನಿ ಹಾಗೂ ಮಕ್ಕಳು ಕೂಡ ವಿಚಾರಣೆಗೆ ಹಾಜರಾಗಿ ಮರಣ ದಂಡನೆಯಿಂದ ವಿನಾಯಿತಿ ಕೋರಿದ್ದರು. ಆದರೆ ಅಂತಿಮವಾಗಿ ನ್ಯಾಯಾಲಯ ಆರೋಪಿಗೆ ಜೀವಿತಾವಧಿ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ.

ಇದನ್ನೂ ಓದಿ: ಮದುವೆ ಮಂಟಪಕ್ಕೆ ಎಂಟ್ರಿ ಕೊಟ್ಟ ಮಾಜಿ ಪ್ರೇಯಸಿ; ವರನ ಬಂಧನಕ್ಕೆ ಒತ್ತಾಯ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.