ಬೆಂಗಳೂರು: ನಗರದಲ್ಲಿ ಇಂದು ಕೂಡ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಹಾಗೂ ಮರಣ ಪ್ರಮಾಣದಲ್ಲಿ ಇಳಿಕೆ ಕಂಡಿದ್ದು, ಹೊಸದಾಗಿ 1,568 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. 12 ಮಂದಿ ಮೃತಪಟ್ಟಿದ್ದಾರೆ.
ನಗರದ ಒಟ್ಟು ಸೋಂಕಿತರ ಸಂಖ್ಯೆ 3,46,702 ಆಗಿದೆ. ಇಂದು 831 ಮಂದಿ ಗುಣಮುಖರಾಗಿದ್ದು, ಈವರೆಗೆ 3,25,322 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಸದ್ಯ, 17,441 ಸಕ್ರಿಯ ಪ್ರಕರಣಗಳಿವೆ.
ಇಂದು 12 ಮಂದಿ ಮೃತಪಟ್ಟಿದ್ದು, ಇದುವರೆಗೆ 3,938 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ 473 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.