ETV Bharat / state

ಬೆಳ್ಳಂಬೆಳಗ್ಗೆ ರಾಜಧಾನಿಯಲ್ಲಿ ಗುಂಡಿನ ಸದ್ದು: ಕೊಲೆ ಆರೋಪಿಗಳ ಕಾಲಿಗೆ ಗುಂಡೇಟು - ಕೊಲೆ ಆರೋಪಿಗಳ ಮೇಲೆ ಪೊಲೀಸರಿಂದ ಗುಂಡಿನ ದಾಳಿ

ಕೊಲೆ ಪ್ರಕರಣ ಸಂಬಂಧ ಆರೋಪಿಗಳ ಬಂಧಿಸಲು ತೆರಳಿದ್ದ ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ದುಷ್ಕರ್ಮಿಗಳ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ.

murder accused
ಸೈಯದ್ ಮೋಹಿನ್ ಹಾಗೂ, ಅದ್ನಾನ್ ಖಾನ್ ಗುಂಡೇಟು ತಿಂದವರು
author img

By

Published : Mar 9, 2022, 9:38 AM IST

ಬೆಂಗಳೂರು: ಹುಡುಗಿ ವಿಚಾರಕ್ಕಾಗಿ ಇಬ್ಬರ ನಡುವೆ ನಿನ್ನೆ(ಮಂಗಳವಾರ) ತಡರಾತ್ರಿ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಹಂತಕರನ್ನು ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದ ಇಬ್ಬರು ಆರೋಪಿಗಳ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ.

murder accused
ಬಂಧಿತ ಆರೋಪಿಗಳು

ಪ್ರಕರಣ ಸಂಬಂಧ ಒಟ್ಟು ಐವರನ್ನು ಪುಲಕೇಶಿನಗರ ಪೊಲೀಸರು ಬಂಧಿಸಿದ್ದಾರೆ. ಸೈಯದ್ ಮೋಯಿನ್ ಹಾಗೂ, ಅದ್ನಾನ್ ಖಾನ್ ಗುಂಡೇಟು ತಿಂದವರು. ಇನ್ನುಳಿದ ಆರೋಪಿಗಳಾದ ಅರ್ಬಾಜ್, ಮಜರ್, ಸೈಯದ್ ಸಾಕಿಬ್​​​​ನನ್ನು ಬಂಧಿಸಿ ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ.

ಪ್ರಕರಣದ ವಿವರ: ಕೆ.ಜಿ.ಹಳ್ಳಿ ನಿವಾಸಿ ಮೊಹಮ್ಮದ್ ಉಸ್ಮಾನ್ ಹಾಗೂ ಮೋಯಿನ್ ನಡುವೆ ಹುಡುಗಿ ವಿಚಾರಕ್ಕಾಗಿ ಗಲಾಟೆಯಾಗಿದೆ. ಈ ವೇಳೆ‌ ಮೊಹೀನ್ ಶಿವಾಜಿನಗರದಿಂದ ಹುಡುಗರನ್ನು ಕರೆಯಿಸಿಕೊಂಡು ಹತ್ಯೆ ಮಾಡಿಸಿ ಪರಾರಿಯಾಗಿದ್ದಾರೆ ಎನ್ನಲಾಗ್ತಿದೆ.

ಮಾಹಿತಿ ಪಡೆದು ಸ್ಥಳ‌‌ ಪರಿಶೀಲಿಸಿದ್ದ ಪಿಎಸ್ಐ ರೂಮಾನ್ ಮತ್ತು ಪಿಎ ಆನಂದ್ ನೇತೃತ್ವದ ತಂಡ ಹಂತಕರ ಪತ್ತೆಗೆ ಶೋಧ ಕಾರ್ಯಕ್ಕಿಳಿದಿತ್ತು. ಇಂದು (ಬುಧವಾರ) ಬೆಳಗಿವ ಜಾವ ಹಂತಕರ ಸುಳಿವು ಪಡೆದು ಮೋಹಿನ್ ಹಾಗೂ ಅದ್ನಾನ್ ಖಾನ್ ಬಂಧಿಸಲು ಹೋದ‌ ವೇಳೆ ಆರೋಪಿಗಳು ಪೊಲೀಸರ ಮೇಲೆ ಹಲ್ಲೆ ಮಾಡಿದ್ದಾರೆ‌.‌ ಶರಣಾಗುವಂತೆ ಗಾಳಿಯಲ್ಲಿ ಗುಂಡು ಹಾರಿಸಿದರೂ, ಬಗ್ಗದ ಆರೋಪಿಗಳ ಕಾಲಿಗೆ ಫೈರಿಂಗ್ ಮಾಡಿ ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ: ಮಹಿಳೆ ಬಂಧನ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.