ಬೆಂಗಳೂರು: ಕೋವಿಡ್ ಪ್ರಕರಣಗಳನ್ನು ನಿಭಾಯಿಸಲು ಬೆಂಗಳೂರಿನ ಆಸ್ಪತ್ರೆಗಳು ಸಜ್ಜಾಗಿವೆ. ವಿದೇಶಗಳಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳಿಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದೆ.
ಬೆಂಗಳೂರಿನ ವಿಕ್ಟೋರಿಯಾ, ಬೌರಿಂಗ್ ಆಸ್ಪತ್ರೆ ಸೇರಿದಂತೆ ಹಲವು ಆಸ್ಪತ್ರೆಗಳಲ್ಲಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಪ್ರಸ್ತುತ ರಾಜ್ಯದಲ್ಲಿ ಪ್ರಕರಣಗಳ ಸಂಖ್ಯೆ ಕಡಿಮೆ ಇರುವುದರಿಂದ ಭಯಪಡುವ ಅಗತ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಆದರೂ, ಮಾಸ್ಕ್ ಧರಿಸುವುದು ಮತ್ತು ಸ್ಯಾನಿಟೈಸರ್ ಬಳಸುವಂತಹ ಕೋವಿಡ್ ಶಿಷ್ಟಾಚಾರಗಳನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು ಎಂದು ಸಲಹೆ ನೀಡಿದ್ದಾರೆ.
ಆಸ್ಪತ್ರೆಯಲ್ಲಿ ಕೋವಿಡ್ ರೋಗಿಗಳಿಗೆ ನಾಲ್ಕು ವೆಂಟಿಲೇಟರ್ ಹಾಸಿಗೆಗಳಿವೆ. ಅಗತ್ಯಬಿದ್ದರೆ ಸಂಖ್ಯೆಯನ್ನು ಹೆಚ್ಚಿಸುತ್ತೇವೆ. ಎಲ್ಲಾ ಸೌಲಭ್ಯಗಳಿವೆ ಎಂದು ವಿಕ್ಟೋರಿಯಾ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.
ಪ್ರಸ್ತುತ ಯಾವುದೇ ಕೋವಿಡ್ -19 ಮೀಸಲು ವಾರ್ಡ್‌ಗಳು ಇಲ್ಲ. ಆರೋಗ್ಯ ಇಲಾಖೆಯ ಮಾರ್ಗಸೂಚಿಗಳಿಗಾಗಿ ಕಾಯುತ್ತಿದ್ದೇವೆ. ಕೋವಿಡೇತರ ರೋಗಿಗಳಿಗೂ ಅದೇ ರೀತಿಯಲ್ಲಿ ಚಿಕಿತ್ಸೆ ನೀಡಬೇಕಾಗಿರುವುದರಿಂದ ಇದ್ದಕ್ಕಿದ್ದಂತೆ ಹಾಸಿಗೆಗಳನ್ನು ಕೋವಿಡ್ ವಾರ್ಡ್ಗೆ ಸ್ಥಳಾಂತರಿಸಲು ಸಾಧ್ಯವಿಲ್ಲ ಎಂದು ಕೆ ಸಿ ಜನರಲ್ ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ.
ಇದನ್ನೂಓದಿ: ಏನಿದು ಬಿಎಫ್ 7 ಕೋವಿಡ್ ವೆರಿಯಂಟ್? ತೀವ್ರತೆ ಎಷ್ಟು? ಇಲ್ಲಿದೆ ಮಾಹಿತಿ..!