ETV Bharat / state

ಬೆಂಗಳೂರಲ್ಲಿ ಇಂದಿನಿಂದ ತಡರಾತ್ರಿ 1 ಗಂಟೆವರೆಗೂ ಹೋಟೆಲ್ ಓಪನ್: ಕಮಿಷನರ್ ಪ್ರತಾಪ್ ರೆಡ್ಡಿ ಆದೇಶ

author img

By

Published : Oct 15, 2022, 4:49 PM IST

ಬೆಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ತಿಂಡಿ-ತಿನಿಸು ಒದಗಿಸುವ ಸ್ಥಳಗಳ ವ್ಯಾಪಾರದ ಅವಧಿಯನ್ನು ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 1 ಗಂಟೆಯವರೆಗೆ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ ಎಂದು ಕಮಿಷನರ್‌ ಪ್ರತಾಪ್ ರೆಡ್ಡಿ ಆದೇಶದಲ್ಲಿ ತಿಳಿಸಿದ್ದಾರೆ.

Representative image
ಸಾಂದರ್ಭಿಕ ಚಿತ್ರ

ಬೆಂಗಳೂರು: ತಿಂಡಿ ತಿನಿಸು ಮಾರುವ ಅಂಗಡಿಗಳು ಹಾಗೂ ಹೋಟೆಲ್‌ಗಳ ವಹಿವಾಟು ಅವಧಿಯನ್ನು ರಾತ್ರಿ 1 ಗಂಟೆಯವರೆಗೂ ವಿಸ್ತರಿಸಲಾಗಿದೆ. ಈ ಸಂಬಂಧ ಪೊಲೀಸ್ ಕಮಿಷನರ್ ಪ್ರತಾಪ್ ರೆಡ್ಡಿ ಆದೇಶ ಹೊರಡಿಸಿದ್ದಾರೆ.

ಬೆಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ತಿಂಡಿ-ತಿನಿಸು ಒದಗಿಸುವ ಸ್ಥಳಗಳ ವ್ಯಾಪಾರದ ಅವಧಿಯನ್ನು ಬೆಳಗ್ಗೆ 6 ಗಂಟೆಯಿಂದ ರಾತ್ರಿ 1 ಗಂಟೆಯವರೆಗೆ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ ಎಂದು ಕಮಿಷನರ್‌ ಆದೇಶದಲ್ಲಿ ತಿಳಿಸಿದ್ದಾರೆ. ಎಲ್ಲ ವಿಭಾಗಗಳ ಡಿಸಿಪಿಗಳು ತಮ್ಮ ಅಧೀನದ ಪೊಲೀಸರಿಗೆ ಆದೇಶದ ಬಗ್ಗೆ ತಿಳಿಸಬೇಕು. ಆದೇಶದನ್ವಯ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಬೇಕು ಎಂದು ಹೇಳಿದ್ದಾರೆ.

ಹೊಸ ಜ್ಞಾಪನಾ ಆದೇಶ: ಸರ್ಕಾರದ ಆದೇಶದಂತೆ ರಾತ್ರಿ 1 ಗಂಟೆಯವರೆಗೂ ವ್ಯಾಪಾರ-ವಹಿವಾಟು ನಡೆಸಲು ಅವಕಾಶವಿದೆ. ಅಷ್ಟಾದರೂ ಪೊಲೀಸರು ರಾತ್ರಿ 11 ಗಂಟೆಗೆ ಹೋಟೆಲ್ ಗಳನ್ನು ಬಂದ್ ಮಾಡಿಸುತ್ತಿದ್ದಾರೆ ಎಂಬುದಾಗಿ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷರು ದೂರು ನೀಡಿದ್ದರು. ಇದನ್ನು ಪರಿಶೀಲಿಸಿ ಹೊಸ ಜ್ಞಾಪನಾ ಆದೇಶ ಹೊರಡಿಸಲಾಗಿದೆ ಎಂದು ಕಮಿಷನರ್ ಆದೇಶದಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: 24/7 ಹೋಟೆಲ್ ಓಪನ್ ಮಾಡಲು ಅನುಮತಿ ಕೊಡ್ತಾರಾ ಪೊಲೀಸರು?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.