ETV Bharat / state

ಸೂಕ್ತ ಸ್ಥಾನಮಾನದ ಭರವಸೆ: ರಾಜೀನಾಮೆ ಹಿಂಪಡೆದ ಐಪಿಎಸ್ ಅಧಿಕಾರಿ ರವೀಂದ್ರನಾಥ್

author img

By

Published : Nov 7, 2020, 11:10 AM IST

ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ, ಮುಂದಿನ ದಿನಗಳಲ್ಲಿ ಸೂಕ್ತ ಸ್ಥಾನಮಾನ ನೀಡುವ ಭರವಸೆ ನೀಡಿದ ಹಿನ್ನೆಲೆಯಲ್ಲಿ ಎಡಿಜಿಪಿ ರವೀಂದ್ರನಾಥ್ ರಾಜೀನಾಮೆ ಹಿಂಪಡೆದಿದ್ದಾರೆ

PS officer Ravindranath has withdrawn his resignation letter
ರಾಜೀನಾಮೆ ಹಿಂಪಡೆದ ಐಪಿಎಸ್ ಅಧಿಕಾರಿ ರವೀಂದ್ರನಾಥ್

ಬೆಂಗಳೂರು: ಬಡ್ತಿ ವಿಚಾರದಲ್ಲಿ ಅಸಮಾಧಾನಗೊಂಡು ರಾಜೀನಾಮೆ ಸಲ್ಲಿಸಿದ್ದ ಎಡಿಜಿಪಿ ರವೀಂದ್ರನಾಥ್ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ ಹಿನ್ನೆಲೆಯಲ್ಲಿ ರಾಜೀನಾಮೆ ಹಿಂಪಡೆದಿದ್ದಾರೆ.

ಐಪಿಎಸ್ ಅಧಿಕಾರಿ ರವೀಂದ್ರನಾಥ್ ಶುಕ್ರವಾರ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರನ್ನು ಭೇಟಿಯಾಗಿ ತಮ್ಮ ಅಳಲು ತೋಡಿಕೊಂಡಿದ್ದರು. ಮುಂದಿನ ದಿನಗಳಲ್ಲಿ ಸೂಕ್ತ ಸ್ಥಾನಮಾನ ನೀಡುವ ಭರವಸೆ ನೀಡಿದ ಹಿನ್ನೆಲೆಯಲ್ಲಿ ರಾಜೀನಾಮೆ ಹಿಂಪಡೆದಿದ್ದಾರೆ

ತಮ್ಮಗಿಂತ ಕಿರಿಯ ಅಧಿಕಾರಿ ಸುನೀಲ್‌ ಕುಮಾರ್​ಗೆ ಡಿಜಿಪಿಯಾಗಿ ಬಡ್ತಿ ನೀಡಿದ್ದರಿಂದ ಅರಣ್ಯ ಇಲಾಖೆಯ ಎಡಿಜಿಪಿಯಾಗಿದ್ದ ರವೀಂದ್ರನಾಥ್ ಅಸಮಾಧಾನ ವ್ಯಕ್ತಪಡಿಸಿ ಕರ್ತವ್ಯಕ್ಕೆ‌ ರಾಜೀನಾಮೆ ನೀಡಿದ್ದರು. ತಮಗಿಂತ ಕಿರಿಯ ಸ್ಥಾನದಲ್ಲಿರುವವರಿಗೆ ಬಡ್ತಿ ನೀಡಿ ತಾರತಮ್ಯ ಎಸಗಲಾಗುತ್ತಿದೆ ಎಂದು ಆರೋಪಿಸಿ‌ ಡಿಜಿ, ಐಜಿಪಿ ಪ್ರವೀಣ್ ಸೂದ್​ಗೆ ರಾಜೀನಾಮೆ ಪತ್ರ ರವಾನಿಸಿದ್ದರು. ಪ್ರವೀಣ್ ಸೂದ್ ಅವರು ರಾಜ್ಯ ಮುಖ್ಯಕಾರ್ಯದರ್ಶಿ ವಿಜಯ್ ಭಾಸ್ಕರ್ ಅವರಿಗೆ ರಾಜೀನಾಮೆ ಪತ್ರ ವರ್ಗಾಯಿಸಿದ್ದರು. ಇದೀಗ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೀಡಿದ ಭರವಸೆಯಿಂದ ಎಲ್ಲವೂ ತಿಳಿಯಾಗಿದೆ.

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.