ETV Bharat / state

ಮಾಜಿ ಕಾರ್ಪೊರೇಟರ್ ಸಂಬಂಧಿ ಮನೆಯಲ್ಲಿ ಐಟಿ ದಾಳಿ.. 40 ಕೋಟಿಗೂ ಹೆಚ್ಚು ನಗದು ಪತ್ತೆ!

ಬೆಂಗಳೂರಿನಲ್ಲಿ ಹಲವು ಕಡೆ ನಡೆದ ಐಟಿ ದಾಳಿ ಸಂದರ್ಭದಲ್ಲಿ ಮಾಜಿ ಕಾರ್ಪೊರೇಟರ್​ವೊಬ್ಬರ ಸಂಬಂಧಿ ಮನೆಯಲ್ಲಿ ಕಂತೆ ಕಂತೆ ಹಣ ಪತ್ತೆಯಾಗಿದೆ.

IT search in former corporator house  42 crore cash found  IT Raid in Bengaluru  ಮಾಜಿ ಕಾರ್ಪೊರೇಟರ್ ಮನೆಯಲ್ಲಿ ಐಟಿ ಶೋಧ  ತಡರಾತ್ರಿ ಕಂತೆ ಕಂತೆ ಹಣ ಪತ್ತೆ  ಮನೆಗಳ ಮೇಲೆ ದಾಳಿ ನಡೆಸಿದ್ದ ಆದಾಯ ತೆರಿಗೆ ಇಲಾಖೆ  ಸಹೋದರ ಮನೆಯಲ್ಲಿ ಕಂತೆ ಕಂತೆ ಹಣ ಪತ್ತೆ  ಚುನಾವಣೆಗಳಿಗೆ ಫಂಡಿಂಗ್ ಅನುಮಾನದಡಿ ಗುತ್ತಿಗೆದಾರ  ಮಾಜಿ ಹಾಗೂ ಹಾಲಿ ಕಾರ್ಪೊರೇಟರ್​ ಆದಾಯ ತೆರಿಗೆ ಅಧಿಕಾರಿಗಳು ಪರಿಶೀಲನೆ  ಮಾಜಿ ಶಾಸಕ ಸಂಬಂಧಿಯೊಬ್ಬರ ಮನೆ
ಮಾಜಿ ಕಾರ್ಪೊರೇಟರ್ ಮನೆಯಲ್ಲಿ ಐಟಿ ಶೋಧ
author img

By ETV Bharat Karnataka Team

Published : Oct 13, 2023, 9:01 AM IST

Updated : Oct 13, 2023, 4:14 PM IST

ಬೆಂಗಳೂರು : ನಗರದಲ್ಲಿ ಗುತ್ತಿಗೆದಾರರು, ಜ್ಯುವೆಲ್ಲರಿ ಶಾಪ್​ ಮಾಲೀಕರು ಹಾಗೂ ಮಾಜಿ ಕಾರ್ಪೊರೇಟರ್​ಗಳ ಮನೆಗಳ ಮೇಲೆ ತಡರಾತ್ರಿ ಆದಾಯ ತೆರಿಗೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ದಾಳಿ ವೇಳೆ, ಮಾಜಿ ಕಾರ್ಪೊರೇಟರ್ ಅವರ ಸಂಬಂಧಿಯ ಫ್ಲ್ಯಾಟ್​ನಲ್ಲಿ 42 ಕೋಟಿ ರೂಪಾಯಿ ನಗದು ಪತ್ತೆಯಾಗಿದೆ ಎಂದು ಐಟಿ ಮೂಲಗಳು ತಿಳಿಸಿವೆ. ಆರ್​ಟಿ ನಗರದ ಆತ್ಮಾನಂದ ಕಾಲೋನಿಯಲ್ಲಿರುವ ಫ್ಲ್ಯಾಟ್​ನಲ್ಲಿ ಈ ದಾಳಿ ನಡೆದಿದೆ. ಫ್ಲ್ಯಾಟ್​ನಲ್ಲಿನ ಮಂಚದ ಕೆಳಗಡೆ ಬಾಕ್ಸ್​ನಲ್ಲಿ ಹಣ ಕಂಡುಬಂದಿದೆ ಎಂದು ಆದಾಯ ತೆರಿಗೆ ಮೂಲಗಳು ತಿಳಿಸಿವೆ.

ಮಾಜಿ ಶಾಸಕರೊಬ್ಬರ ಸಂಬಂಧಿ ಎಂದು ಹೇಳಲಾಗುತ್ತಿರುವ ಮಾಜಿ ಮಹಿಳಾ ಕಾರ್ಪೊರೇಟರ್ ಅವರ ಸಂಬಂಧಿಕರ ಮನೆಯಲ್ಲಿ ಆದಾಯ ತೆರಿಗೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ತೀವ್ರಗೊಂಡ ವಿಚಾರಣೆ: ಫ್ಲ್ಯಾಟ್​ನಲ್ಲಿ ದೊರೆತ 42 ಕೋಟಿ ರೂ ಕುರಿತು ಆದಾಯ ತೆರಿಗೆ ಅಧಿಕಾರಿಗಳು ಮಾಜಿ ಕಾರ್ಪೊರೇಟರ್ ಸಂಬಂಧಿಯನ್ನು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಮತ್ತೊಂದೆಡೆ ಮಾಜಿ ಕಾರ್ಪೊರೇಟರ್​ಗೆ ಸಂಬಂಧಿಸಿದ ವ್ಯವಹಾರ, ಬ್ಯಾಂಕ್ ಖಾತೆಗಳ ಮಾಹಿತಿಯನ್ನ ಸಂಗ್ರಹಿಸಲಾಗುತ್ತಿದೆ. ಮಾಜಿ ಕಾರ್ಪೋರೇಟರ್ ಅವರ ಸಂಬಂಧಿಯು ಗುತ್ತಿಗೆದಾರರಾಗಿದ್ದು, ಅವರಿಗೆ ಸಂಬಂಧಿಸಿದ ಕಚೇರಿ ಹಾಗೂ ಮನೆಗಳ ಮೇಲೆ ದಾಳಿ ನಡೆಸಲಾಗಿದೆ. ಐದಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ ನಡೆಸಲಾಗುತ್ತಿದೆ. ಈ ಸಂದರ್ಭದಲ್ಲಿ 42 ಕೋಟಿ ರೂಪಾಯಿ ಹಣವನ್ನ ಐಟಿ ಅಧಿಕಾರಿಗಳ ತಂಡ ಜಪ್ತಿ ಮಾಡಿದೆ.

ಚುನಾವಣೆಗೆ ವ್ಯಯಿಸಲು ಹಣ ಸಂಗ್ರಹಿಸಲಾಗಿತ್ತು ಎಂಬ ಮಾಹಿತಿ ಮೇರೆಗೆ ನಿನ್ನೆಯಿಂದ ಪೊಲೀಸ್ ಸಿಬ್ಬಂದಿ ಭದ್ರತೆಯಲ್ಲಿ ಆದಾಯ ತೆರಿಗೆ ಅಧಿಕಾರಿಗಳು ಬೆಂಗಳೂರಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.

ನಿನ್ನೆ ಉದ್ಯಮಿಗಳು, ಜ್ಯುವೆಲರಿ ಶಾಪ್ ಮಾಲೀಕರ ಮನೆ ಮತ್ತು ಕಚೇರಿಗಳಲ್ಲಿ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದರು. ಸರ್ಜಾಪುರ ಬಳಿಯ ಮುಳ್ಳೂರು, ಆರ್.ಎಂ.ವಿ ಎಕ್ಸ್ಟೆನ್ಷನ್, ಬಿಇಎಲ್ ಸರ್ಕಲ್, ಮಲ್ಲೇಶ್ವರಂ, ಡಾಲರ್ಸ್ ಕಾಲೋನಿ, ಸದಾಶಿವನಗರ, ಮತ್ತಿಕೇರಿ ಸೇರಿದಂತೆ ಹತ್ತಕ್ಕೂ ಹೆಚ್ಚು ಕಡೆಗಳಲ್ಲಿ ನಿನ್ನೆ ಪರಿಶೀಲನೆ ನಡೆಸಿದ್ದರು.

ಆದಾಯ ತೆರಿಗೆ ವಂಚನೆ ಆರೋಪ ಕಂಡು ಬಂದ ಹಿನ್ನೆಲೆ ಚಿನ್ನ ಗಿರವಿ ಮತ್ತು ಖರೀದಿ ಮಾಡುವ ಕಂಪನಿಗಳ ಮೇಲೆ ದಾಳಿ ನಡೆಸಲಾಗಿತ್ತು. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಕಳೆದ ವಾರ ಕೂಡ ತೆರಿಗೆ ವಂಚನೆ ಆರೋಪದ ಮೇಲೆ ಜ್ಯುವೆಲರಿ ಉದ್ಯಮಿಗಳ ಮೇಲೆ ಐಟಿ ದಾಳಿ ಮಾಡಿ ಪರಿಶೀಲನೆ ನಡೆಸಿತ್ತು. ಕಳೆದ ಬಾರಿ ಸಿಕ್ಕ ದಾಖಲಾತಿಗಳ ಆಧರಿಸಿ ನಿನ್ನೆ ದಾಳಿ ಮಾಡಲಾಗಿತ್ತು

ಓದಿ: ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಐಟಿ ದಾಳಿ, ಅಧಿಕಾರಿಗಳು ಬಿಜೆಪಿ ಏಜೆಂಟ್​ರಂತೆ ವರ್ತಿಸುತ್ತಿದ್ದಾರೆ: ಶಿವಲೀಲಾ ಆರೋಪ

Last Updated : Oct 13, 2023, 4:14 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.