ಬೆಂಗಳೂರು: ಕೊರೊನಾ ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ನಿನ್ನೆ ರಾತ್ರಿ 8 ಗಂಟೆಯಿಂದ ನಗರದಲ್ಲಿ ಲಾಕ್ಡೌನ್ ಜಾರಿಯಾಗಿದೆ. ಈ ಹಿನ್ನೆಲೆಯಲ್ಲಿ ತುಮಕೂರು ರಸ್ತೆಯನ್ನು ಪೊಲೀಸರು ಬ್ಯಾರಿಕೇಡ್ ಹಾಕಿ ಬಂದ್ ಮಾಡಿದ್ದಾರೆ.
ನಗರದೊಳಗೆ ಪ್ರವೇಶ ಮಾಡಲಾಗದೆ ವಾಹನ ಸವಾರರು ಪರದಾಡುತ್ತಿದ್ದ ದೃಶ್ಯ ಕಂಡು ಬಂತು. 8 ಗಂಟೆಯಿಂದ ಲಾಕ್ಡೌನ್ ಎಂದು ತಿಳಿದಿದ್ದರೂ ಸಹ ಬೇಜವಾಬ್ದಾರಿ ತೋರಿದ ಜನರಿಗೆ ಪೊಲೀಸರು ಕ್ಲಾಸ್ ತೆಗೆದುಕೊಂಡಿದ್ದಾರೆ.