ETV Bharat / state

ಮೆಟ್ರೋ ಪಿಲ್ಲರ್‌ ದುರಂತ: ಸ್ವಯಂಪ್ರೇರಿತ ಅರ್ಜಿ ದಾಖಲಿಸಿಕೊಂಡ ಹೈಕೋರ್ಟ್ - Nagarjuna Construction

ಜನವರಿ 11ರಂದು ಬೆಳಗ್ಗೆ ಮಕ್ಕಳನ್ನು ಶಾಲೆಗೆ ಬಿಡಲು ಸಾಫ್ಟ್​ವೇರ್​ ಎಂಜಿಯರ್ ಆದ ತೇಜಸ್ವಿನಿ ಮತ್ತು ಅವರ ಪತಿ ಲೋಹಿತ್ ಕುಮಾರ್ ತೆರಳುತ್ತಿದ್ದರು. ಈ ಸಂದರ್ಭದಲ್ಲಿ 12 ಮೀಟರ್ ಎತ್ತರದ ಕಬ್ಬಿಣದ ಚೌಕಟ್ಟು ಅವರ ಮೇಲೆ ಬಿದ್ದಿತ್ತು. ತೇಜಸ್ವಿನಿ ಮತ್ತು ಅವರ ಎರಡು ವರ್ಷದ ಪುತ್ರ ವಿಹಾನ್ ಮೃತಪಟ್ಟಿದ್ದರು. ಈ ಸಂಬಂಧ ಗುತ್ತಿಗೆದಾರ ಸಂಸ್ಥೆ ನಾಗಾರ್ಜುನ ಕನಸ್ಟ್ರಕ್ಷನ್ ಮತ್ತು ಬಿಎಂಆಆರ್‌ಸಿಎಲ್​ನ ಕೆಲವು ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

Bengaluru Metro Tragedy
ಬೆಂಗಳೂರಿನ ಮೆಟ್ರೋ ದುರಂತ
author img

By

Published : Jan 13, 2023, 12:19 PM IST

Updated : Jan 13, 2023, 3:28 PM IST

ಬೆಂಗಳೂರು : ನಗರದ ನಾಗವಾರದ ಬಳಿ ನಿರ್ಮಾಣ ಹಂತದ ಮೆಟ್ರೊ ಪಿಲ್ಲರ್‌ನ ಕಬ್ಬಿಣದ ಚೌಕಟ್ಟು ಕುಸಿದು ಬಿದ್ದು ಮಹಿಳೆ ಮತ್ತು ಗಂಡು ಮಗು ಸಾವನ್ನಪ್ಪಿದ ಪ್ರಕರಣವನ್ನು ಹೈಕೋರ್ಟ್ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದಾಖಲಿಸಿಕೊಂಡಿದೆ.

ಶುಕ್ರವಾರ ಕಲಾಪ ಪ್ರಾರಂಭವಾಗುತ್ತಿದ್ದಂತೆ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಅಶೋಕ್ ಎಸ್ ಕಿಣಗಿ ಅವರಿದ್ದ ನ್ಯಾಯಪೀಠ, ಪ್ರಮುಖ ದಿನ ಪತ್ರಿಕೆಗಳ ವರದಿಯನ್ನು ಉಲ್ಲೇಖಿಸಿದರು. ಅಲ್ಲದೇ, ಬೆಂಗಳೂರಿನಲ್ಲಿ ಜನವರಿ 11 ಮತ್ತು 13ರಂದು ಪ್ರತ್ಯೇಕವಾಗಿ ನಡೆದಿರುವ ಪ್ರಕರಣಗಳು ಸಂಜ್ಞೇಯ(ಕಾಗ್ನಿಜೆನ್ಸ್) ಪರಿಗಣಿಸುವಂತೆ ಮಾಡಿದ್ದು, ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಳ್ಳುತ್ತಿರುವುದಾಗಿ ತಿಳಿಸಿತು.

ಈ ಸಂದರ್ಭದಲ್ಲಿ ವಕೀಲ ಜಿ ಆರ್ ಮೋಹನ್ ಮಧ್ಯ ಪ್ರವೇಶಿಸಿ ಮೆಟ್ರೋ ಕಾಮಗಾರಿ ನಡೆಯುತ್ತಿರುವ ಬ್ರಿಗೇಡ್ ರಸ್ತೆಯಲ್ಲಿ ಗುಂಡಿ ಬಿದ್ದಿರುವ ಅಂಶವನ್ನು ಪ್ರಸ್ತಾಪಿಸಿದರು. ಆಗ ನ್ಯಾಯಪೀಠ, ಈ ಅಂಶವನ್ನು ಪ್ರಕರಣದಲ್ಲಿ ಸೇರಿಸಿ ವಿಚಾರಣೆ ನಡೆಸುವುದಾಗಿ ತಿಳಿಸಿತು. ನಗರದ ರಸ್ತೆಗಳ ಪರಿಸ್ಥಿತಿಯು ಕಳಕಳಿ ಮತ್ತು ಪ್ರಶ್ನೆ ಹುಟ್ಟುಹಾಕಿದ್ದು, ಇಂಥ ಕಾಮಗಾರಿ ನಡೆಸುವಾಗ ಯಾವ ರೀತಿಯ ಸುರಕ್ಷತಾ ಕ್ರಮಕೈಗೊಳ್ಳಲಾಗಿದೆ? ಸುರಕ್ಷತಾ ಕ್ರಮಗಳು ಟೆಂಡರ್ ದಾಖಲೆ ಅಥವಾ ಗುತ್ತಿಗೆಕಾರರಿನಲ್ಲಿ ಉಲ್ಲೇಖವಾಗಿದೆಯೇ? ಒಂದೊಮ್ಮೆ ಸುರಕ್ಷತಾ ಕ್ರಮಗಳು ಟೆಂಡರ್ ದಾಖಲೆಗಳಲ್ಲಿ ಉಲ್ಲೇಖವಾಗಿರದಿದ್ದರೆ, ಸರ್ಕಾರದ ಆದೇಶ ಅಥವಾ ಅಧಿಸೂಚನೆಯ ರೂಪದಲ್ಲಿ ಸುರಕ್ಷತಾ ಕ್ರಮಕೈಗೊಳ್ಳಲು ಸೂಚಿಸಲಾಗಿದೆಯೇ? ಎಂದು ಪ್ರಶ್ನಿಸಿತು.

ಒಂದೊಮ್ಮೆ ಸುರಕ್ಷತಾ ಕ್ರಮ ಉಲ್ಲೇಖಿಸಿದ್ದರೆ ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲಿ ಮೇಲಿಂದ ಮೇಲೆ ಅವುಗಳನ್ನು ಪರಿಶೀಲಿಸಲು ಯಾವ ವ್ಯವಸ್ಥೆ ಮಾಡಲಾಗಿದೆ?. ಸುರಕ್ಷತಾ ಕ್ರಮ ನಿರ್ವಹಿಸಲು ಹೊಣೆಗಾರಿಕೆ ನಿಗದಿ ಮಾಡಲಾಗಿದೆಯೇ? ಗುತ್ತಿಗೆ ನಡೆಸುತ್ತಿರುವ ಸಂಸ್ಥೆ ಅಥವಾ ಕಾಮಗಾರಿಯ ಮೇಲುಸ್ತುವಾರಿ ನಿಭಾಯಿಸುತ್ತಿರುವ ಅಧಿಕಾರಿಗಳ ಕುರಿತಾದ ವಿಚಾರಗಳನ್ನು ಗಂಭೀರವಾಗಿ ಪರಿಗಣಿಸಬೇಕಿದೆ. ಹೀಗಾಗಿ, ಮೇಲೆ ಉಲ್ಲೇಖಿಸಿದ ವಿಚಾರಗಳ ಕುರಿತು ಸಂಜ್ಞೇ ಪರಿಗಣಿಸಬೇಕಿದೆ ಎಂದು ತಿಳಿಸಿದ ನ್ಯಾಯಪೀಠ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಅವರಿಗೆ ಪ್ರಕರಣ ದಾಖಲಿಸಲು ಆದೇಶಿಸಿತು.

ಜತೆಗೆ, ರಾಜ್ಯ ಸರ್ಕಾರದ ಸಂಬಂಧಿತ ಇಲಾಖೆಗಳು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ), ಬೆಂಗಳೂರು ಮೆಟ್ರೊ ರೈಲು ಅಭಿವೃದ್ಧಿ ನಿಗಮ (ಬಿಎಂಆರ್ಸಿಎಲ್), ಸಂಬಂಧಿತ ಗುತ್ತಿಗೆದಾರರನ್ನು ಪ್ರಕರಣದಲ್ಲಿ ಪ್ರತಿವಾದಿಗಳನ್ನಾಗಿಸಲು ನ್ಯಾಯಾಲಯವು ಸೂಚನೆ ನೀಡಿತು.

ಪ್ರಕರಣದ ಹಿನ್ನೆಲೆ: ಜನವರಿ 11ರಂದು ಬೆಳಗ್ಗೆ ಮಕ್ಕಳನ್ನು ಶಾಲೆಗೆ ಬಿಡಲು ಸಾಫ್ಟ್​ವೇರ್​ ಇಂಜಿನಿಯರ್​ ಆದ ತೇಜಸ್ವಿನಿ ಮತ್ತು ಅವರ ಪತಿ ಲೋಹಿತ್ ಕುಮಾರ್ ತೆರಳುತ್ತಿದ್ದರು. ಈ ಸಂದರ್ಭದಲ್ಲಿ 12 ಮೀಟರ್ ಎತ್ತರದ ಕಬ್ಬಿಣದ ಚೌಕಟ್ಟು ಅವರ ಮೇಲೆ ಬಿದ್ದಿತ್ತು. ತೇಜಸ್ವಿನಿ ಮತ್ತು ಅವರ ಎರಡು ವರ್ಷದ ಪುತ್ರ ವಿಹಾನ್ ಮೃತಪಟ್ಟಿದ್ದರು. ಈ ಸಂಬಂಧ ಗುತ್ತಿಗೆದಾರ ಸಂಸ್ಥೆ ನಾಗಾರ್ಜುನ ಕನಸ್ಟ್ರಕ್ಷನ್ ಮತ್ತು ಬಿಎಂಆಆರ್‌ಸಿಎಲ್​ನ ಕೆಲವು ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಈ ಘಟನೆ ಮಾಸುವ ಮುನ್ನವೇ ಗುರುವಾರ ಬ್ರಿಗೇಡ್ ರಸ್ತೆಯಲ್ಲಿ ದೊಡ್ಡದಾದ ರಸ್ತೆ ಗುಂಡಿ ನಿರ್ಮಾಣಗೊಂಡಿದ್ದು, ಬೈಕ್ ಸವಾರರು ಗಾಯಗೊಂಡಿದ್ದರು. ಈ ಎರಡೂ ಅಂಶಗಳ ವರದಿಯನ್ನು ಆಧರಿಸಿ ನ್ಯಾಯಾಲಯ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.

ಇದನ್ನೂ ಓದಿ: ಮೆಟ್ರೋ ಪಿಲ್ಲರ್ ಕುಸಿತ ಪ್ರಕರಣ: ಪೊಲೀಸ್ ವಿಚಾರಣೆಗೆ ಹಾಜರಾದ ಬಿಎಂಆರ್​ಸಿಎಲ್ ಅಧಿಕಾರಿಗಳು

Last Updated : Jan 13, 2023, 3:28 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.