ETV Bharat / state

ಬೆಂಗಳೂರಿನಲ್ಲಿ ಸೆರೆಯಾದ ಶಂಕಿತ ಉಗ್ರರ ಹಿಂದಿರುವ ಮಾಸ್ಟರ್‌ಮೈಂಡ್ ಯಾರು ಗೊತ್ತಾ?

ಐವರು ಶಂಕಿತ ಉಗ್ರರನ್ನು ಬಂಧಿಸಿರುವ ಕುರಿತು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್​ ಪತ್ರಿಕಾಗೋಷ್ಠಿಯಲ್ಲಿ ಇಂದು ಮಾಹಿತಿ ನೀಡಿದರು.

Bengaluru suspected terrorist arrest case
ಬೆಂಗಳೂರು ವಿಧ್ವಂಸಕ ಕೃತ್ಯಕ್ಕೆ ಸಂಚು ಪ್ರಕರಣ
author img

By

Published : Jul 19, 2023, 2:31 PM IST

Updated : Jul 19, 2023, 5:24 PM IST

ಬೆಂಗಳೂರು ಪ್ರಕರಣದ ಬಗ್ಗೆ ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಮಾಹಿತಿ

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ವಿಧ್ವಂಸಕ ಕೃತ್ಯವೆಸಗಲು ಸಂಚು ರೂಪಿಸುತ್ತಿದ್ದ ಗಂಭೀರ ಆರೋಪದಡಿ ಐವರು ಶಂಕಿತ ಉಗ್ರರನ್ನು ನಗರ ಪೊಲೀಸರು ಇಂದು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಸ್ ನಿಲ್ದಾಣ ಸೇರಿದಂತೆ ನಗರದ ಜನಸಂದಣಿ ಪ್ರದೇಶಗಳಲ್ಲಿ ಬಾಂಬ್ ಸ್ಫೋಟಿಸಲು ಹೊಂಚು ಹಾಕುತ್ತಿದ್ದ ಆರೋಪದಡಿ ಸುಹೇಲ್, ಉಮರ್, ಜಾಹಿದ್, ಮುದಾಸಿರ್ ಹಾಗೂ ಫೈಜರ್ ಎಂಬವರನ್ನು ಬಂಧಿಸಲಾಗಿದೆ. ಇವರಿಂದ 7 ಕಂಟ್ರಿಮೇಡ್ ಪಿಸ್ತೂಲ್​ಗಳು, 45 ಜೀವಂತ ಗುಂಡುಗಳು, ವಾಕಿಟಾಕಿ ಸೆಟ್ಸ್, ಒಂದು ಡ್ರ್ಯಾಗರ್ ಹಾಗೂ 12 ಮೊಬೈಲ್ ಫೋನ್​ಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ.

ಪ್ರಕರಣದಲ್ಲಿ ಶಾಮೀಲಾಗಿರುವ 2008ರ ಬೆಂಗಳೂರು ಸರಣಿ ಬಾಂಬ್ ಸ್ಫೋಟದ ಶಂಕಿತ ಉಗ್ರ ಟಿ. ನಜೀರ್ ಸದ್ಯ ಆತ ನ್ಯಾಯಾಂಗ ಬಂಧನಲ್ಲಿದ್ದಾನೆ. ಎರಡನೇ ಆರೋಪಿ ಜುನೈದ್ ಸದ್ಯ ತಲೆಮರೆಸಿಕೊಂಡಿದ್ದಾನೆ‌. ಹೆಚ್ಚಿನ ವಿಚಾರಣೆಗಾಗಿ ಬಂಧಿತ ಐವರನ್ನು ವಿಚಾರಣೆಗೊಳಪಡಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್​ ಮಾಹಿತಿ ನೀಡಿದ್ದಾರೆ.

ಯಾರು ಈ ಶಂಕಿತ ಉಗ್ರರು?: ಬಂಧಿತ ಶಂಕಿತ ಉಗ್ರರೆಲ್ಲರೂ ಹೆಬ್ಬಾಳ, ಆರ್.ಟಿ.ನಗರ ನಿವಾಸಿಗಳಾಗಿದ್ದಾರೆ. 2017ರಲ್ಲಿ ನೂರ್ ಅಹಮ್ಮದ್ ಎಂಬುವವರ ಕೊಲೆ ಪ್ರಕರಣದಲ್ಲಿ ಎರಡನೇ ಅರೋಪಿ ಜುನೈದ್ ಅಹಮದ್ (ಸದ್ಯ ವಿದೇಶದಲ್ಲಿ ತಲೆಮರೆಸಿಕೊಂಡಿರುವ) ಹಾಗೂ ಬಂಧಿತ ಆರೋಪಿಗಳನ್ನು ಆರ್.ಟಿ. ನಗರ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದರು. ಕಾರಾಗೃಹದಲ್ಲಿದ್ದಾಗ 2008ರ ಬೆಂಗಳೂರು ಸರಣಿ ಬಾಂಬ್ ಸ್ಫೋಟದ‌ ಆರೋಪಿ ಟಿ. ನಜೀರ್​ನ ಪರಿಚಯವಾಗಿದೆ. ಈತ ನಿಷೇಧಿತ ಲಷ್ಕರ್ ಎ ತೊಯ್ಬಾ (ಎಲ್​ಇಟಿ) ಉಗ್ರ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ. ಈ ವಿಧ್ವಂಸಕ ಕೃತ್ಯಗಳ ಸಂಚಿಗೆ ಮಾಸ್ಟರ್‌ಮೈಂಡ್ ಅವನೇ ಆಗಿದ್ದರಿಂದ ಕಾಲಕ್ರಮೇಣ ಬಂಧಿತ ಆರೋಪಿಗಳಿಗೆ ಬ್ರೈನ್ ವಾಶ್ ಮಾಡಿದ್ದ. 18 ತಿಂಗಳ ಕಾಲ ಜೈಲಿನಲ್ಲಿರುವಾಗ ಮಾನಸಿಕವಾಗಿ ವಿಧ್ವಂಸಕ ಕೃತ್ಯಗಳನ್ನು ನಡೆಸಲು ಪ್ರೇರಣೆ ನೀಡಿದ್ದ. 2019ರಲ್ಲಿ ಜಾಮೀನು ಪಡೆದು ಹೊರಬಂದ ಆರೋಪಿಗಳು, ನಗರದಲ್ಲಿ ಸಣ್ಣಪುಟ್ಟ ಕೆಲಸ ಮಾಡಿಕೊಂಡಿದ್ದರು.

2021ರಲ್ಲಿ ಜುನೈದ್ ರಕ್ತಚಂದನ ಸಾಗಾಟ ಪ್ರಕರಣದಲ್ಲಿ ಮತ್ತೆ ಜೈಲಿಗೆ ಹೋಗಿಬಂದು ತಲೆಮರೆಸಿಕೊಂಡಿದ್ದ. ಜೈಲಿನಲ್ಲಿದ್ದ ಶಂಕಿತ ಉಗ್ರ ನಜೀರ್ ಸೂಚನೆಯಂತೆ ವಿದೇಶದಲ್ಲಿ ಜುನೈದ್ ಆರೋಪಿಗಳಿಗೆ ಬಾಂಬ್ ಸ್ಫೋಟದ ಬಗ್ಗೆ ಹಲವು ಸಭೆಗಳನ್ನು ನಡೆಸಿದ್ದ. ಕೆಲವು ತಿಂಗಳ ಬಳಿಕ ಜುನೈದ್ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ. ನಜೀರ್ ಸೂಚನೆ ಮೇರೆಗೆ ಜುನೈದ್ ಸಹ ಸಂಚು ರೂಪಿಸಿ ಬೇಕಾದ ಸ್ಫೋಟಕ ಸಾಧನಗಳನ್ನು ಖರೀದಿಸಲು ಸಹ ಆರೋಪಿಗಳಿಗೆ ಫಂಡಿಂಗ್ ಮಾಡುತ್ತಿದ್ದ. ಇದೆಲ್ಲ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದ ಮಾಹಿತಿ. ಈ ಬಗ್ಗೆ ಹೆಬ್ಬಾಳ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದ್ದು ಸದ್ಯಕ್ಕೆ ಪ್ರಾಥಮಿಕ ವರದಿ ಆಧರಿಸಿ ಅವರನ್ನು ಬಂಧಿಸಿ 15 ದಿನ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ ಎಂದು ದಯಾನಂದ್​ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಸೆರೆ ಸಿಕ್ಕ ಐವರು ಶಂಕಿತ ಉಗ್ರರಿಗೆ 15 ದಿನ ಪೊಲೀಸ್‌ ಕಸ್ಟಡಿ: ಪೊಲೀಸ್‌ ಆಯುಕ್ತರಿಂದ ಪ್ರಕರಣದ ವಿವರ

ಆರೋಪಿಗಳು ಸಿಕ್ಕಿದ್ದು ಹೇಗೆ?: ಶಂಕಿತರು ಪೊಲೀಸರಿಗೆ ಸಿಕ್ಕಿಬಿದ್ದ ವಿಚಾರವೇ ರೋಚಕವಾಗಿದೆ. ಪ್ರಕರಣದ ಎ2 ಆರೋಪಿ ಜುನೈದ್ ದುಬೈನಲ್ಲಿದ್ದು, ಉಗ್ರ ಕೃತ್ಯಗಳಿಗೆ ಫಂಡಿಂಗ್ ಮಾಡಿಸುತ್ತಿದ್ದ. ಅಲ್ಲಿನ ಶ್ರೀಮಂತರ ಮೂಲಕ ಫಂಡಿಂಗ್ ಮಾಡಿಸುತ್ತಿದ್ದ. ದುಬೈ ಹವಾಲಾ ಹಣ ವರ್ಗಾವಣೆ ಕುರಿತಂತೆ ಇಂಟೆಲಿಜೆನ್ಸ್ ಬ್ಯೂರೋ (ಐಬಿ)ಗೆ ನಜೀರ್​ ಗ್ರೂಪ್​ಗೆ ಹಣ ಬಂದ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಅವನ ಆ್ಯಕ್ಟಿವಿಟಿ ಗಮನಿಸಿದಾಗ ಟೀಂ ಬಿಲ್ಡ್ ಆಗಿರುವ ಕುರಿತು ನಗರ ಪೊಲೀಸ್ ಆಯುಕ್ತರಿಗೆ ಮಾಹಿತಿ ಸಿಕ್ಕಿದೆ. ಆಯುಕ್ತ ದಯಾನಂದ್ ಅವರ ಸೂಚನೆ ಮೇರೆಗೆ ಆರೋಪಿಗಳ ಚಲನವಲನ ಗಮನಿಸಿ ತಂಡವನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಸದ್ಯ ಆರೋಪಿಗಳ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ-2019ರಡಿ ಪ್ರಕರಣ ದಾಖಲಿಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Last Updated : Jul 19, 2023, 5:24 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.