ETV Bharat / state

ಮಳೆ ಅವಾಂತರದಿಂದ ಎಚ್ಚೆತ್ತ ಬಿಬಿಎಂಪಿ: ನೋಟಿಸ್‌ ನೀಡದೆ ರಾಜಕಾಲುವೆ ಒತ್ತುವರಿದಾರರಿಗೆ ಶಾಕ್

ಬೆಂಗಳೂರಲ್ಲಿ ಪ್ರವಾಹ ಪರಿಸ್ಥಿತಿ ಉಂಟಾದ ಬೆನ್ನಲ್ಲೇ ಬಿಬಿಎಂಪಿ ಎಚ್ಚೆತ್ತುಕೊಂಡಿದೆ. ರಾಜಕಾಲುವೆ ಒತ್ತುವರಿದಾರರಿಗೆ ನೋಟಿಸ್ ನೀಡದೆ ತೆರವು ಕಾರ್ಯಾಚರಣೆಗೆ ಇಳಿದಿದೆ.

ನೋಟಿಸ್‌ ನೀಡದೆ ರಾಜಕಾಲುವೆ ಒತ್ತುವರಿದಾರರಿಗೆ ಶಾಕ್

author img

By

Published : Sep 11, 2022, 5:11 PM IST

ಬೆಂಗಳೂರು: ಧಾರಾಕಾರ ಮಳೆಗೆ ಬೆಂಗಳೂರಿನ ಕೆಲ ವಲಯಗಳಲ್ಲಿ ನೀರು ನಿಂತು ಅವಾಂತರ ಸೃಷ್ಟಿಯಾಗಿತ್ತು. ರಸ್ತೆಗಳು ಕೆರೆಗಳಂತಾಗಿ, ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತವಾಗಿತ್ತು. ಇದಕ್ಕೆ ರಾಜಕಾಲುವೆ ಒತ್ತುವರಿಯಾಗಿದ್ದೇ ಕಾರಣ ಎಂಬ ಮಾತುಗಳು ಕೇಳಿಬಂದಿದ್ದವು. ಇದೀಗ ಎಚ್ಚೆತ್ತ ಬಿಬಿಎಂಪಿ, ರಾಜಕಾಲುವೆ ಒತ್ತುವರಿ ಮಾಡಿಕೊಂಡು ನಿರ್ಮಿಸಲಾದ ಕಟ್ಟಡ ಮತ್ತು ಗೋಡೆಗಳನ್ನು ತೆರವು ಮಾಡುತ್ತಿದೆ.

ಒತ್ತುವರಿ ತೆರವು ಕಾರ್ಯಾಚರಣೆ
ಒತ್ತುವರಿ ತೆರವು ಕಾರ್ಯಾಚರಣೆ
ಒತ್ತುವರಿ ತೆರವು ಕಾರ್ಯಾಚರಣೆ
ಒತ್ತುವರಿ ತೆರವು ಕಾರ್ಯಾಚರಣೆ

ನೋಟಿಸ್‌ ನೀಡದೆ ರಾಜಕಾಲುವೆ ಒತ್ತುವರಿದಾರರಿಗೆ ಶಾಕ್: ಕಟ್ಟಡಗಳ ಮಾಲೀಕರಿಗೆ ಯಾವುದೇ ನೋಟಿಸ್ ನೀಡದೆ ಒತ್ತುವರಿಯಾದ 21,963 ಚದರ್​ ಅಡಿ ತೆರವು ಮಾಡಲಾಗಿದೆ ಎಂದು ಬಿಬಿಎಂಪಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಭಾರಿ ಮಳೆಯಿಂದಾಗಿ ಸಿಲಿಕಾನ್ ಸಿಟಿಯ ಐಟಿ ಕಾರಿಡಾರ್ ಪ್ರದೇಶವಿರುವ ಬೆಳ್ಳಂದೂರು, ಸರ್ಜಾಪುರ ಪ್ರದೇಶಗಳು ಪ್ರವಾಹಕ್ಕೆ ಸಿಲುಕಿದ್ದವು. ನೀರು ಹರಿದು ಹೋಗಲು ಸೂಕ್ತ ವ್ಯವಸ್ಥೆ ಇಲ್ಲದೆ ರಸ್ತೆಗಳು ಮತ್ತು ಬಡಾವಣೆಗಳಲ್ಲಿ 3 ರಿಂದ 6 ಅಡಿ ನೀರು ತುಂಬಿಕೊಂಡಿತ್ತು. ಹೀಗಾಗಿ ಬಿಬಿಎಂಪಿ ಅಧಿಕಾರಿಗಳು ಕಳೆದ 10 ದಿನಗಳಿಂದ ಒತ್ತುವರಿದಾರರಿಗೆ ಯಾವುದೇ ನೋಟಿಸ್ ನೀಡದೆ ತೆರವು ಮಾಡುತ್ತಿದ್ದಾರೆ ಎಂದು ಪಾಲಿಕೆ ತಿಳಿಸಿದೆ.

ಒತ್ತುವರಿ ತೆರವು ಕಾರ್ಯಾಚರಣೆ
ಒತ್ತುವರಿ ತೆರವು ಕಾರ್ಯಾಚರಣೆ
ಒತ್ತುವರಿ ತೆರವು ಕಾರ್ಯಾಚರಣೆ
ಒತ್ತುವರಿ ತೆರವು ಕಾರ್ಯಾಚರಣೆ

ನಗರದ ಹೊರ ವಲಯಗಳಲ್ಲಿ ರಾಜಕಾಲುವೆ, ಕೆರೆಗಳು ಮತ್ತು ಅವುಗಳ ಬಫರ್ ವಲಯ ಒತ್ತುವರಿ ಮಾಡಲಾಗಿದೆ. ಕಳೆದ 10 ದಿನಗಳಲ್ಲಿ 34 ಪ್ರಕರಣಗಳಲ್ಲಿ 21,963 ಚದರ್​ ಅಡಿ ಒತ್ತುವರಿಯನ್ನು ತೆರವುಗೊಳಿಸಲಾಗಿದೆ. ವಸತಿ ಮನೆಗಳು, ತಾತ್ಕಾಲಿಕ ಶೆಡ್‌ಗಳು, ಕಾಂಪೌಂಡ್ ಹಾಗೂ ಖಾಲಿ ಸ್ಥಳ ಇದರಲ್ಲಿ ಸೇರಿವೆ ಎಂದು ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ.

ಒತ್ತುವರಿ ತೆರವು ಕಾರ್ಯಾಚರಣೆ
ಒತ್ತುವರಿ ತೆರವು ಕಾರ್ಯಾಚರಣೆ

(ಇದನ್ನೂ ಓದಿ: ಬೆಂಗಳೂರಿನಲ್ಲಿ ರಣಚಂಡಿ ಮಳೆ: ವ್ಯಕ್ತಿಯ ರಕ್ಷಣೆ ಮಾಡಿದ ಭದ್ರತಾ ಸಿಬ್ಬಂದಿ)

ETV Bharat Logo

Copyright © 2024 Ushodaya Enterprises Pvt. Ltd., All Rights Reserved.