ETV Bharat / state

ಕೆಆರ್ ಸರ್ಕಲ್ ಅಂಡರ್‌ ಪಾಸ್ ದುರಂತದಿಂದ ಪಾಠ ಕಲಿಯಬೇಕಿದೆ: ಲೋಕಾಯುಕ್ತ ಐಜಿಪಿ

ಕೆ.ಆರ್.ಸರ್ಕಲ್ ಅಂಡರ್‌ ಪಾಸ್‌ನಲ್ಲಿ ಕಾರು ಮುಳುಗಿ ಯುವತಿ ಸಾವು ಪ್ರಕರಣ ಸಂಬಂಧ ಇಂದು ಘಟನಾ ಸ್ಥಳಕ್ಕೆ ಲೋಕಾಯುಕ್ತ ಪೊಲೀಸರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

Lokayukta IG
ಲೋಕಾಯುಕ್ತ ಐಜಿ ಸುಬ್ರಹ್ಮಣ್ಯೇಶ್ವರ್ ರಾವ್
author img

By

Published : Jun 7, 2023, 11:47 AM IST

Updated : Jun 7, 2023, 2:03 PM IST

ಕೆಆರ್ ಸರ್ಕಲ್ ಅಂಡರ್‌ ಪಾಸ್ ದುರಂತ: ಸ್ಥಳಕ್ಕೆ ಲೋಕಾಯುಕ್ತ ಐಜಿ ಸುಬ್ರಹ್ಮಣ್ಯೇಶ್ವರ್ ರಾವ್ ಭೇಟಿ

ಬೆಂಗಳೂರು: ಕೆ.ಆರ್.ಸರ್ಕಲ್ ಅಂಡರ್‌ ಪಾಸ್‌ನಲ್ಲಿ ಕಾರು ಮುಳುಗಿ ಯುವತಿ ಸಾವು ಅವಘಡಕ್ಕೆ ಸಂಬಂಧಿಸಿದಂತೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದ ಲೋಕಾಯುಕ್ತ ತಂಡ ಇಂದು ದುರಂತ ನಡೆದ ಸ್ಥಳಕ್ಕೆ ಇಂದು ಭೇಟಿ ನೀಡಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಲೋಕಾಯುಕ್ತ ಐಜಿಪಿ ಸುಬ್ರಹ್ಮಣ್ಯೇಶ್ವರ್ ರಾವ್, ಬಿಬಿಎಂಪಿ ಅಧಿಕಾರಿಗಳಿಂದ ಮಾಹಿತಿ ಕಲೆ ಹಾಕಿದ್ದಾರೆ. ಘಟನೆಗೆ ಕಾರಣವೇನು? ಏನೆಲ್ಲಾ ಸಮಸ್ಯೆ ಇತ್ತು ಎಂಬ ಬಗ್ಗೆ ಮಾಹಿತಿ ಪಡೆದಿದ್ದಾರೆ. ಘಟನಾ ಸ್ಥಳದಲ್ಲಿ ಟ್ಯಾಂಕರ್ ತರಿಸಿ ನೀರು ಹರಿಸುವ ಮೂಲಕ ನೀರು ರಾಜಕಾಲುವೆಗೆ ಸರಾಗವಾಗಿ ಹರಿದು ಹೋಗುತ್ತದೆಯೇ ಎಂದು ಪರಿಶೀಲನೆ ನಡೆಸಲಾಗಿದೆ‌.

ಪರಿಶೀಲನೆ ಬಳಿಕ ಮಾತನಾಡಿದ ಐಜಿಪಿ‌ ಸುಬ್ರಹ್ಮಣ್ಯೇಶ್ವರ್ ರಾವ್, "ಮಾನ್ಯ ಲೋಕಾಯುಕ್ತರ ನಿರ್ದೇಶನದನ್ವಯ ಲೋಕಾಯುಕ್ತ ಪೊಲೀಸ್ ಘಟಕದಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ತನಿಖೆಯ ಭಾಗವಾಗಿ ಲೋಕಾಯುಕ್ತ ಎಂಜಿನಿಯರಿಂಗ್ ಡಿವಿಷನ್ ಅಧಿಕಾರಿಗಳು ಹಾಗೂ ಬಿಬಿಎಂಪಿ ಅಧಿಕಾರಿಗಳು ಇಂದು ಸ್ಥಳಕ್ಕೆ ಭೇಟಿ ನೀಡಿದ್ದೇವೆ. ಮೇಲ್ನೋಟಕ್ಕೆ ಇಲ್ಲಿರುವ ಒಳಚರಂಡಿ ವ್ಯವಸ್ಥೆಯಲ್ಲಿ ನೀರಿನ ಹರಿವು‌ ಅಧಿಕವಾದ ಕಾರಣದಿಂದ ಅವಘಡ ಸಂಭವಿಸಿರುವುದು ಕಂಡು ಬಂದಿದೆ.

ಈ ಸಂದರ್ಭದಲ್ಲಿ ಇಲ್ಲಿರುವ ಸಮಸ್ಯೆಗಳನ್ನ ಪತ್ತೆಹಚ್ಚಿ, ನಗರದಲ್ಲಿರುವ ಬೇರೆ ಅಂಡರ್ ಪಾಸ್ ನಲ್ಲಿರುವ ಸಮಸ್ಯೆಗಳಿಗೂ ಸಹ ಜಂಟಿಯಾಗಿ ಪರಿಹಾರ ಕಂಡುಕೊಳ್ಳಬೇಕಿದೆ. ಜತೆಗೆ ಅವಘಡಕ್ಕೆ ಯಾರದ್ದಾದರೂ ನಿರ್ಲಕ್ಷ್ಯ ಕಾರಣವಾಗಿದ್ದರೆ ಅವರ ವಿರುದ್ಧ ಲೋಕಾಯುಕ್ತರಿಗೆ ವರದಿ ಸಲ್ಲಿಸುತ್ತೇವೆ" ಎಂದರು.

ಮೇ 21ರಲ್ಲಿ‌ ನಗರದಲ್ಲಿ ಸುರಿದ ಭಾರಿ‌ ಮಳೆಗೆ ಕೆ.ಆರ್.ಸರ್ಕಲ್ ಅಂಡರ್ ಪಾಸ್​ನಲ್ಲಿ ಕಾರು ಮುಳುಗಿದ ಪರಿಣಾಮ ಇನ್ಫೋಸಿಸ್ ಉದ್ಯೋಗಿ ಭಾನುರೇಖಾ ಸಾವನ್ನಪ್ಪಿದ್ದರು. ಘಟನೆಯನ್ನ ಗಂಭೀರವಾಗಿ ಪರಿಗಣಿಸಿ ಪ್ರಕರಣ ದಾಖಲಿಸಿಕೊಂಡು ಪ್ರತಿಕ್ರಿಯೆ ನೀಡುವಂತೆ ಬಿಬಿಎಂಪಿ ಅಧಿಕಾರಿಗಳಿಗೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ನೋಟಿಸ್ ಜಾರಿ ಮಾಡಿದ್ದರು.

ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದ ಲೋಕಾಯುಕ್ತ: ಕೆಆರ್ ಸರ್ಕಲ್‌ ಅಂಡರ್‌ ಪಾಸ್‌ನಲ್ಲಿ ಮಳೆ ನೀರು ತುಂಬಿಕೊಂಡು ಕ್ಯಾಬ್ ಮುಳುಗಿ ಯುವತಿ ಸಾವನ್ನಪ್ಪಿದ ಪ್ರಕರಣ ಸಂಬಂಧ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿತ್ತು. ಅವಘಡಕ್ಕೆ ಕಾರಣವಾದ ಅಂಶಗಳ ಬಗ್ಗೆ ಸಮಗ್ರ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸಂಸ್ಥೆಯ ಪೊಲೀಸ್ ವಿಭಾಗಕ್ಕೆ ಲೋಕಾಯುಕ್ತರು ನಿರ್ದೇಶನ ನೀಡಿದ್ದರು.

ಅವಘಡದ ಕುರಿತು ಮಾಧ್ಯಮಗಳಲ್ಲಿ ಪ್ರಕಟವಾದ ವರದಿಗಳನ್ನ ಆಧರಿಸಿ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್ ಪಾಟೀಲ್, ಕರ್ನಾಟಕ ಲೋಕಾಯುಕ್ತ ಕಾಯ್ದೆ ಅಡಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದರು. ಮೇ 21ರಂದು ನಗರದಲ್ಲಿ ಸುರಿದ ಭಾರಿ ಮಳೆಗೆ ಕೆಆರ್ ಸರ್ಕಲ್ ಅಂಡರ್‌ ಪಾಸ್‌ನಲ್ಲಿ ಕ್ಯಾಬ್ ಮುಳುಗಿದ ಪರಿಣಾಮ ಇನ್ಫೋಸಿಸ್ ಉದ್ಯೋಗಿ ಭಾನುರೇಖಾ ಸಾವನ್ನಪ್ಪಿದ್ದರು.

ಇದನ್ನೂ ಓದಿ: ಕೆಆರ್ ಸರ್ಕಲ್ ಅಂಡರ್‌ ಪಾಸ್‌ನಲ್ಲಿ ಯುವತಿ ಸಾವು: ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡ ಲೋಕಾಯುಕ್ತ

ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಪ್ರಕರಣ ದಾಖಲಿಸಿಕೊಂಡು ಜೂ.5ರೊಳಗೆ ಪ್ರತಿಕ್ರಿಯೆ ನೀಡುವಂತೆ ಬಿಬಿಎಂಪಿ ಅಧಿಕಾರಿಗಳಿಗೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್ ಪಾಟೀಲ್ ನೋಟಿಸ್ ಜಾರಿ ಮಾಡಿದ್ದರು. ಬಿಬಿಎಂಪಿ ಮುಖ್ಯ ಆಯುಕ್ತರು, ಉತ್ತರ ವಲಯ ಆಯುಕ್ತರು, ಶಿವಾಜಿನಗರ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್, ಸಂಪಂಗಿ ರಾಮನಗರ ವಾರ್ಡ್‌ನ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್, ಸಹಾಯಕ ಇಂಜಿನಿಯರ್, ಬಿಬಿಎಂಪಿ ಮಳೆ ನೀರು ಕಾಲುವೆ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್, ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ಮತ್ತು ಸಹಾಯಕ ಇಂಜಿನಿಯರ್ ಅವರನ್ನು ಪ್ರಕರಣದಲ್ಲಿ ಪ್ರತಿವಾದಿಗಳು ಎಂದು ಹೆಸರಿಸಲಾಗಿದೆ.

ಕರ್ತವ್ಯಲೋಪ?: ಕಾಲುವೆಗಳಲ್ಲಿ ನೀರು ಸರಾಗವಾಗಿ ಹರಿಯುವಂತೆ ಮಾಡುವುದು ಬಿಬಿಎಂಪಿಯ ಜವಾಬ್ದಾರಿ. ಈ ಪ್ರಕರಣದಲ್ಲಿ ಮಳೆ ನೀರು ಕಾಲುವೆ ವಿಭಾಗದ ಅಧಿಕಾರಿಗಳು ಕರ್ತವ್ಯಲೋಪ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ ಎಂದು ಲೋಕಾಯುಕ್ತರು ತಮ್ಮ ಆದೇಶದಲ್ಲಿ ಉಲ್ಲೇಖಿಸಿದ್ದಾರೆ. ಘಟನೆಗೆ ಕಾರಣವಾದ ಅಂಶಗಳ ಕುರಿತು ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಲೋಕಾಯುಕ್ತ ಐಜಿಪಿಗೆ ನಿರ್ದೇಶನ ನೀಡಲಾಗಿದ್ದು. ಜೂ.15ಕ್ಕೆ ವಿಚಾರಣೆ ನಿಗದಿಯಾಗಿದೆ.

ಘಟನೆಯ ಹಿನ್ನೆಲೆ: ಬೆಂಗಳೂರಿನ ಕೆಆರ್‌ ಸರ್ಕಲ್‌ ಅಂಡರ್‌ ಪಾಸ್‌ನಲ್ಲಿ ಮಳೆ ನೀರಲ್ಲಿ ಕಾರು ಸಿಲುಕಿ ಭಾನುರೇಖಾ ರೆಡ್ಡಿ (23) ಎಂಬ ಸಾಫ್ಟ್‌ವೇರ್ ಎಂಜಿನಿಯರ್‌ ಸಾವನ್ನಪ್ಪಿದ್ದರು. ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯ ತೆಲಪ್ರೋಲು ಮೂಲದವರಾದ ಇವರು ತಮ್ಮ ಕುಟುಂಬ ಸದಸ್ಯರೊಂದಿಗೆ ಮೇ 21ರಂದು ಹೈದರಾಬಾದ್‌ನಿಂದ ಬೆಂಗಳೂರಿಗೆ ಬಂದಿದ್ದರು.

ಕೆ.ಆರ್.ಸರ್ಕಲ್ ತಲುಪುವಷ್ಟರಲ್ಲಿ ಮಳೆ ಜೋರಾಗಿತ್ತು. ಮುಂದೆ ಸಾಗುತ್ತಿದ್ದಾಗ ಅಂಡರ್ ಪಾಸ್​ಗೆ ನೀರು ತುಂಬಿಕೊಂಡಿತ್ತು. ನೀರು ಹೊರಹೋಗಲು ದಾರಿ ಇಲ್ಲದೇ ಕಾರು ಹೊರಡುವ ವೇಳೆಗೆ ಅಂಡರ್​ ಪಾಸ್​ನಲ್ಲಿ ನೀರು ತುಂಬಿಕೊಂಡಿದೆ. ಆರು ಮಂದಿ ಸಿಕ್ಕಿಬಿದ್ದಿರುವುದನ್ನು ಕಂಡು ಪೊಲೀಸರು ಮತ್ತು ಬೆಸ್ಕಾಂ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ದೌಡಾಯಿಸಿ ಅವರನ್ನು ಹೊರಗೆಳೆದು ಆಸ್ಪತ್ರೆಗೆ ಸಾಗಿಸಿದ್ದರು. ಆದರೆ ಅಷ್ಟರಲ್ಲಿ ಭಾನುರೇಖಾ ಮೃತಪಟ್ಟಿದ್ದರು.

ಇದನ್ನೂ ಓದಿ: ಬೆಂಗಳೂರು ಮಳೆಗೆ ಮತ್ತೊಂದು ಬಲಿ: ಭಾನುರೇಖಾ ಕುಟುಂಬಸ್ಥರಿಂದ ಬಿಬಿಎಂಪಿ ವಿರುದ್ಧ FIR ದಾಖಲು

Last Updated : Jun 7, 2023, 2:03 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.