ETV Bharat / state

ಬೆಂಗಳೂರು ಕೊರೊನಾ ನಿಯಂತ್ರಣಕ್ಕೆ ಸಚಿವರು, ಅಧಿಕಾರಿಗಳಿಗೆ ಟಾರ್ಗೆಟ್ ಫಿಕ್ಸ್ ಮಾಡಿದ ಸಿಎಂ..! - coronavirus safety measures

ಬೆಂಗಳೂರಿನಲ್ಲಿ ತೀವ್ರಗತಿಯಲ್ಲಿ ಹೆಚ್ಚುತ್ತಿರುವ ಕೋವಿಡ್-19 ಸೋಂಕನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಇಂದು ವಲಯವಾರು ಸಭೆಯನ್ನು‌ ನಡೆಸಲಾಯಿತು. ಅತಿ ಹೆಚ್ಚು ಸಂಖ್ಯೆಯಲ್ಲಿ ಸೋಂಕು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಜಾರಿಗೆ ತಂದ ಲಾಕ್‍ಡೌನ್ ಇವತ್ತಿಗೆ ಮುಕ್ತಾಯವಾಗಿದೆ. ಈ ಹಿನ್ನೆಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಹಾಗೂ ಜನರಿಗೆ ಸಕಾಲದಲ್ಲಿ ಚಿಕಿತ್ಸಾ ಸೌಲಭ್ಯಗಳನ್ನು ದೊರಕಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಹೆಚ್ಚು ಗಮನ ಹರಿಸುವಂತೆ ಸೂಚಿಸಲಾಗಿದೆ.

coronavirus safety ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸರಣಿ ಸಭೆ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸರಣಿ ಸಭೆ
author img

By

Published : Jul 22, 2020, 7:15 PM IST

ಬೆಂಗಳೂರು: ಕೊರೊನಾ ನಿಯಂತ್ರಣಕ್ಕಾಗಿ ಬೆಂಗಳೂರು ವಲಯವಾರು ಉಸ್ತುವಾರಿಗಳು ಹಾಗೂ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಟಾರ್ಗೆಟ್ ಫಿಕ್ಸ್ ಮಾಡಿದ್ದಾರೆ. ಅವರವರ ವಲಯಗಳಲ್ಲಿ‌ ಕೋವಿಡ್ ಸೋಂಕಿತರ ಸಂಖ್ಯೆ ಕಡಿಮೆಯಾಗಬೇಕು. ಪ್ರತಿ ವಾರ ಮಾಹಿತಿ ನೀಡಬೇಕು. ಟಾರ್ಗೆಟ್ ರೀಚ್ ಆಗದೆ ಇದ್ದರೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಕೋವಿಡ್-19 ನಿಯಂತ್ರಿಸುವ ನಿಟ್ಟಿನಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ನಗರ, ದಾಸರಹಳ್ಳಿ, ಬೊಮ್ಮನಹಳ್ಳಿ ಹಾಗೂ ಮಹದೇವಪುರ ವಲಯಗಳ ಕೋವಿಡ್-19 ಉಸ್ತುವಾರಿ ಸಚಿವರುಗಳು ಹಾಗೂ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸರಣಿ ಸಭೆ ನಡೆಸಿದರು.

ಬೆಂಗಳೂರು ಕೊರೊನಾ ನಿಯಂತ್ರಣಕ್ಕೆ ಟಾರ್ಗೆಟ್ ಫಿಕ್ಸ್

ಸಭೆಯಲ್ಲಿ ಬೆಂಗಳೂರಿನಲ್ಲಿ ತೀವ್ರಗತಿಯಲ್ಲಿ ಹೆಚ್ಚುತ್ತಿರುವ ಕೋವಿಡ್-19 ಸೋಂಕನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿಂದು ವಲಯವಾರು ಸಭೆಯನ್ನು‌ ನಡೆಸಲಾಯಿತು. ಅತಿ ಹೆಚ್ಚು ಸಂಖ್ಯೆಯಲ್ಲಿ ಸೋಂಕು ವರದಿಯಾಗುತ್ತಿರುವ ಹಿನ್ನೆಲೆ ಜಾರಿಗೆ ತಂದ ಲಾಕ್‍ಡೌನ್ ಇವತ್ತಿಗೆ ಮುಕ್ತಾಯವಾಗಿದೆ. ಈ ಹಿನ್ನೆಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಹಾಗೂ ಜನರಿಗೆ ಸಕಾಲದಲ್ಲಿ ಚಿಕಿತ್ಸಾ ಸೌಲಭ್ಯಗಳನ್ನು ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಹೆಚ್ಚು ಗಮನ ಹರಿಸುವಂತೆ ಸೂಚಿಸಿದ್ದಾರೆ.

ಹೆಚ್ಚಿನ ಸಂಖ್ಯೆಯ ಪರೀಕ್ಷೆಗಳನ್ನು ನಡೆಸುವುದು, ಸೋಂಕಿತರ ಸಂಪರ್ಕ ಹೊಂದಿದವರನ್ನು ಪತ್ತೆ ಹಚ್ಚುವುದು ಮತ್ತು ಕಂಟೇನ್ಮೆಂಟ್ ಝೋನ್‍ಗಳಲ್ಲಿ ನಿಯಮಗಳ ಕಟ್ಟುನಿಟ್ಟಿನ ಪಾಲನೆ ಮಾಡಬೇಕೆಂದು‌ ನಿರ್ದೇಶನ ‌ನೀಡಲಾಗಿದೆ. ಕೋವಿಡ್ ಸೋಂಕಿನ ಪರೀಕ್ಷೆಯ ಫಲಿತಾಂಶ ತ್ವರಿತವಾಗಿ ಒದಗಿಸುವ ನಿಟ್ಟಿನಲ್ಲಿ ಆದ್ಯತೆ ನೀಡಬೇಕು. ಸೋಂಕಿನ ಲಕ್ಷಣ ಇರುವವರ ಮತ್ತು ಸೋಂಕಿನ ಲಕ್ಷಣ ಇಲ್ಲದವರ ಪರೀಕ್ಷೆಯನ್ನು ವರ್ಗೀಕರಿಸಿ, ಚಿಕಿತ್ಸೆ ಅಗತ್ಯವಿರುವವರಿಗೆ ಬೇಗನೆ ಫಲಿತಾಂಶ ದೊರೆಯುವಂತೆ ಮಾಡುವುದು‌‌ ಮೊದಲ‌ ಕರ್ತವ್ಯ ಈ ನಿಟ್ಟಿನಲ್ಲಿ‌ ಕೆಲಸ ಮಾಡುವಂತೆ ತಿಳಿಸಲಾಗಿದೆ.

ರೋಗಲಕ್ಷಣ ಇಲ್ಲದ, ಯಾವುದೇ ಇತರ ಕಾಯಿಲೆಗಳಿಲ್ಲದ ವ್ಯಕ್ತಿಗಳನ್ನು ಆಸ್ಪತ್ರೆಗೆ ದಾಖಲಿಸಿ, ಅನಗತ್ಯ ದಟ್ಟಣೆ ಉಂಟು ಮಾಡಬೇಡಿ. ಆಸ್ಪತ್ರೆಗಳಲ್ಲಿ ಲಭ್ಯವಿರುವ ಹಾಸಿಗೆಗಳು, ಚಿಕಿತ್ಸೆಯ ಅಗತ್ಯವಿರುವವರಿಗೆ ಕೂಡಲೇ ಸಿಗುವಂತಹ ವ್ಯವಸ್ಥೆ ರೂಪಿಸಬೇಕು. ಪರೀಕ್ಷೆಯಲ್ಲಿ ಒಬ್ಬ ವ್ಯಕ್ತಿಗೆ ಸೋಂಕು ದೃಢಪಟ್ಟಲ್ಲಿ ಕೂಡಲೇ ಅವರನ್ನು ಆಸ್ಪತ್ರೆಗೆ ಅಥವಾ ಕೋವಿಡ್ ಕೇರ್ ಸೆಂಟರ್​ಗೆ ವರ್ಗಾಯಿಸಲು ಕ್ರಮ ವಹಿಸಿ. ಆ ಮೂಲಕ ಸೋಂಕು ಇನ್ನಷ್ಟು ಹರಡುವ ಸಾಧ್ಯತೆಗಳನ್ನು ತಪ್ಪಿಸಿ. ಅಲ್ಲದೆ ಜನರಲ್ಲಿ ಆತಂಕ ಉಂಟಾಗದಂತೆ ಎಚ್ಚರ ವಹಿಸಬೇಕು ಎಂದು ಸಿಎಂ ಹೇಳಿದ್ದಾರೆ.

ಗಂಭೀರ ಪರಿಸ್ಥಿತಿಯಲ್ಲಿರುವ ಕೋವಿಡ್ ಸೋಂಕಿತರಿಗೆ ತರಬೇತಿ ಹೊಂದಿದ ವೈದ್ಯರಿಂದ ಚಿಕಿತ್ಸೆ ದೊರೆಯುವುದನ್ನು ಖಾತರಿಪಡಿಸಿ, ಆ ಮೂಲಕ ಸಾವಿನ ಸಂಖ್ಯೆ ಕಡಿಮೆಗೊಳಿಸಿ. ರೋಗಲಕ್ಷಣ ಇರುವವರಿಗೆ ಕೂಡಲೇ ಚಿಕಿತ್ಸೆ ನೀಡುವುದು ಹಾಗೂ ಸೋಂಕಿತರ ಪ್ರಾಣ ಉಳಿಸುವುದು ಆದ್ಯ‌ ಕರ್ತವ್ಯವಾಗಬೇಕಿದೆ. ಜೊತೆಗೆ ಸಂಪರ್ಕಿತರನ್ನು ಪತ್ತೆ ಹಚ್ಚುವ ಕಾರ್ಯ ಪರಿಣಾಮಕಾರಿಯಾಗಿಸಿ, ಸೋಂಕು ಹೆಚ್ಚಿನ ಪ್ರಮಾಣದಲ್ಲಿ ಹರಡದಂತೆ ಎಚ್ಚರ ವಹಿಸಬೇಕು. ಸಂಪರ್ಕಿತರು ಕ್ವಾರಂಟೈನ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದನ್ನು ಖಾತರಿ ಪಡಿಸಿಕೊಳ್ಳಬೇಕು. ಪ್ರತಿನಿತ್ಯ ಅವರ ಮನೆಗೆ‌ ಭೇಟಿ‌ ನೀಡಿ ಅವರ ಸ್ಥಿತಿ-ಗತಿಗಳನ್ನು ವಿಚಾರಿಸಬೇಕು ಎಂದು ನಿರ್ದೇಶಿಸಲಾಗಿದೆ.

ಕೋವಿಡ್ ಆಸ್ಪತ್ರೆಗಳ ನಿರ್ವಹಣೆ, ಆಹಾರ ಪೂರೈಕೆ, ಸ್ವಚ್ಛತೆ, ಚಿಕಿತ್ಸೆ ಮೊದಲಾದ ವಿಷಯಗಳ ಕುರಿತು ಹೆಚ್ಚಿನ ಗಮನ ಕೊಡಬೇಕು. ಯಾವುದೇ ದೂರುಗಳಿಗೆ ಆಸ್ಪದ ಕೊಡಬಾರದು. ದೂರುಗಳು ಬಂದರೆ ಅದಕ್ಕೆ ತಕ್ಷಣ ಸ್ಪಂದಿಸಬೇಕು. ಕೋವಿಡ್ ಸೋಂಕಿತರು ಯಾವುದೇ ಆಸ್ಪತ್ರೆಗೆ ಬಂದರು ಸಹ ಮೊದಲು ಅವರನ್ನು‌ ಅಡ್ಮಿಟ್‌ ಮಾಡಿಕೊಂಡು ಪ್ರಾಥಮಿಕ‌ ಚಿಕಿತ್ಸೆ ಕೊಡಿಸಬೇಕು ಅಂತ ಸೂಚಿಸಲಾಗಿದೆ. ನಂತರ ಸೋಂಕಿತರ ಸ್ಥಿತಿಗತಿ ನೋಡಿಕೊಂಡು ಇತರೆ ಆಸ್ಪತ್ರೆಗೆ ಸೇರಿಸುವಂತಹ‌ ಕಾರ್ಯ ‌ಮಾಡಬೇಕು. ರಾಜ್ಯ ಸರ್ಕಾರ ಎಲ್ಲ ಅಗತ್ಯ ಕ್ರಮಗಳನ್ನೂ ಕೈಗೊಂಡಿದೆ. ಲೋಪದೋಷಗಳು ಗಮನಕ್ಕೆ ಬಂದ ಕೂಡಲೇ ಅವುಗಳನ್ನು ಸರಿಪಡಿಸುವ ಕೆಲಸವನ್ನು ವಲಯಗಳಿಗೆ ಸಂಬಂಧಪಟ್ಟ ಸಚಿವರು ಹಾಗೂ ಅಧಿಕಾರಿಗಳು ಮಾಡಬೇಕೆಂದು ಸಿಎಂ ಯಡಿಯೂರಪ್ಪ ತಾಕೀತು ಮಾಡಿದ್ದಾರೆ.

ಹಾಸಿಗೆ ಹಂಚಿಕೆಗೆ ಪಾರದರ್ಶಕ ಕೇಂದ್ರೀಕೃತ ವ್ಯವಸ್ಥೆ:

ಈಗಾಗಲೇ ಹಾಸಿಗೆ ಹಂಚಿಕೆಗೆ ಪಾರದರ್ಶಕ ಕೇಂದ್ರೀಕೃತ ವ್ಯವಸ್ಥೆ ಮಾಡಲಾಗಿದೆ. ಸಹಾಯವಾಣಿಗಳನ್ನು ಸಹ ಸ್ಥಾಪಿಸಲಾಗಿದೆ. ಸಹಾಯವಾಣಿಗೆ ಕರೆ ಬಂದ ತಕ್ಷಣ ಸ್ಪಂದಿಸುವ ಕೆಲಸ ಮಾಡಬೇಕಿದೆ. ಸೋಂಕಿತರು ಯಾವ ವಿಷಯಕ್ಕೆ ಯಾವ ಸಹಾಯವಾಣಿಗೆ ಕರೆ ‌ಮಾಡಬೇಕು ಅನ್ನೋದನ್ನ‌ ಜಾಹೀರಾತು ನೀಡಬೇಕು‌. ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟ ಕೂಡಲೇ ಆ್ಯಂಬುಲೆನ್ಸ್ ಬರುವುದು ವಿಳಂಬವಾದಲ್ಲಿ ಅಥವಾ ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸಲು ವಿನಾಕಾರಣ ನಿರಾಕರಿಸಿದಲ್ಲಿ ಅಧಿಕಾರಿಗಳು ನಿಯಮಾನುಸಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಲಾಗಿದೆ.

ನಿಮ್ಮ ವಲಯಗಳಲ್ಲಿ ಕೋವಿಡ್ ನಿಯಂತ್ರಣಕ್ಕೆ ಆದ್ಯತೆ ನೀಡಿ. ಕೋವಿಡ್ ಆಸ್ಪತ್ರೆಗಳಿಗೆ ಭೇಟಿ ನೀಡಿ, ಅಲ್ಲಿನ ವ್ಯವಸ್ಥೆಗಳು ಸರಿಯಿವೆಯೇ ಎಂದು ಪರಿಶೀಲಿಸಿ. ನಿಮ್ಮ ವಲಯಗಳಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ಪ್ರತಿ ನಿತ್ಯ ಸಚಿವರಿಗೆ‌ ಮಾಹಿತಿ ನೀಡಬೇಕು. ಹೆಚ್ಚು ಹೆಚ್ಚು ಟೆಸ್ಟ್​​ಗಳನ್ನು ಮಾಡಿಸಿ. 24 ಗಂಟೆಯ ಒಳಗೆ ವರದಿ‌ ಬರುವಂತೆ ಕ್ರಮ ಕೈಗೊಳ್ಳಿ. ವಾರ್ಡ್ ಗಳಲ್ಲಿ ಕೋವಿಡ್ - 19 ಬಗ್ಗೆ‌ ಮಾಹಿತಿ ನೀಡುವ ಜಾಹೀರಾತು ಫಲಕಗಳನ್ನು ಹಾಕಿ (ಹೈಕೋರ್ಟ್ ಅನುಮತಿ ನೀಡಿದೆ). ಕುಂಟು‌ ನೆಪ ಹೇಳಿ ಕೆಲಸಕ್ಕೆ ಹಾಜರಾಗದ ಅಧಿಕಾರಿಗಳ ವಿರುದ್ಧ‌ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.