ETV Bharat / state

ಕರ್ತವ್ಯದಲ್ಲಿದ್ದಾಗ ಆಟೋ ಡಿಕ್ಕಿಯಾಗಿ ಎಎಸ್ಐ ಮಿದುಳು ನಿಷ್ಕ್ರಿಯ: ಅಂಗಾಂಗ ದಾನಕ್ಕೆ ಮುಂದಾದ ಕುಟುಂಬ - ಈಟಿವಿ ಭಾರತ ಕನ್ನಡ

ಆಟೋ ಡಿಕ್ಕಿಯಾಗಿ ಚಿಕಿತ್ಸೆ ಪಡೆಯುತ್ತಿದ್ದ ಟ್ರಾಫಿಕ್​ ಎಎಸ್​ಐ ಮಿದುಳು ನಿಷ್ಕ್ರಿಯಗೊಂಡಿದ್ದು, ಅಂಗಾಂಗ ದಾನಕ್ಕೆ ಕುಟುಂಬಸ್ಥರು ನಿರ್ಧರಿಸಿದ್ದಾರೆ.

bengaluru-traffic-asi-dead-family-decided-for-organ-donation
ಅಪಘಾತದಲ್ಲಿ ಗಾಯಗೊಂಡಿದ್ದ ಟ್ರಾಫಿಕ್‌ ಎಎಸ್ಐ ಮಿದುಳು ನಿಷ್ಕ್ರಿಯ : ಅಂಗಾಂಗದಾನಕ್ಕೆ ಮುಂದಾದ ಕುಟುಂಬ
author img

By

Published : Feb 28, 2023, 6:49 PM IST

ಬೆಂಗಳೂರು : ಕರ್ತವ್ಯ ನಿರ್ವಹಿಸುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿ ತಲೆಗೆ ಗಂಭೀರ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಟ್ರಾಫಿಕ್ ಎಎಸ್ಐ ನಾಗರಾಜ್ ಅವರ ಮಿದುಳು ನಿಷ್ಕ್ರಿಯಗೊಂಡಿದೆ. ಈ ಹಿನ್ನೆಲೆಯಲ್ಲಿ ಮೃತರ ಕುಟುಂಬಸ್ಥರು ಅಂಗಾಂಗ ದಾನಕ್ಕೆ ನಿರ್ಧರಿಸಿದ್ದಾರೆ.

ಹೈಗ್ರೌಂಡ್ಸ್ ಸಂಚಾರ ಪೊಲೀಸ್ ಠಾಣೆಯಲ್ಲಿ ಎಎಸ್ಐ ಆಗಿರುವ ನಾಗರಾಜ್ ಭಾನುವಾರ ಮಧ್ಯಾಹ್ನ ಸಂಜೆ 4 ಗಂಟೆ ವೇಳೆಗೆ ಚಾಲುಕ್ಯ ಸರ್ಕಲ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅರಮನೆ ರಸ್ತೆಯ ಸಿಐಡಿ ಕಡೆಯಿಂದ ಚಾಲುಕ್ಯ ವೃತ್ತಕ್ಕೆ ವೇಗವಾಗಿ ಬರುತ್ತಿದ್ದ ಆಟೋ ಏಕಾಏಕಿ ಇವರಿಗೆ ಡಿಕ್ಕಿಯಾಗಿದೆ. ತಲೆಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ರವಾನಿಸಲಾಗಿತ್ತು. ಇದೀಗ ಮಿದುಳು ಅವರ ನಿಷ್ಕ್ರಿಯಗೊಂಡಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.

ಅಪಘಾತದ ಬಳಿಕ ಚಾಲಕ ಶಿವಕುಮಾರ್ ಆಟೋಸಹಿತ ಪರಾರಿಯಾಗಲು ಯತ್ನಿಸಿದ್ದ. ಆದರೆ, ಸ್ಥಳಕ್ಕೆ ಬಂದ ಪೊಲೀಸರು ಸಾರ್ವಜನಿಕರ ಸಹಾಯದಿಂದ ಆರೋಪಿಯನ್ನು ಹಿಂಬಾಲಿಸಿ ವಿಂಡ್ಸರ್ ಮ್ಯಾನರ್ ಹೋಟೆಲ್ ಬಳಿ ಬಂಧಿಸಿದ್ದರು. ಅಪಘಾತಕ್ಕೆ ಚಾಲಕನ ಅತೀ ವೇಗದ ಚಾಲನೆ ಮತ್ತು ನಿರ್ಲಕ್ಷ್ಯವೇ ಕಾರಣ ಎಂದು ತಿಳಿದುಬಂದಿದೆ. ಅಂಗಾಂಗ ದಾನ ಮಾಡುವ ಬಗ್ಗೆ ಕುಟುಂಬಸ್ಥರೊಂದಿಗೆ ವೈದ್ಯರು ಸಮಾಲೋಚನೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.

ಇದನ್ನೂ ಓದಿ: ಪ್ರತ್ಯೇಕ ಎರಡು ಅಪಘಾತ : ಓರ್ವ ಸಾವು, ಟ್ರಾಫಿಕ್‌ ಎಎಸ್ಐಗೆ ಗಂಭೀರ ಗಾಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.