ETV Bharat / state

ಡಿ.ಜೆ.ಹಳ್ಳಿ ಗಲಭೆ ಪ್ರಕರಣ: ಸಂಪತ್ ರಾಜ್ ಬಂಧಿಸಿ ವಿಚಾರಣೆ ನಡೆಸುತ್ತಿರುವ ಸಿಸಿಬಿ

ಕೆ.ಜಿ. ಹಳ್ಳಿ ಹಾಗೂ ಡಿ.ಜೆ.ಹಳ್ಳಿ ಗಲಭೆ ಪ್ರಕರಣದ ಪ್ರಮುಖ ಆರೋಪಿ ಮಾಜಿ ಮೇಯರ್​ ಸಂಪತ್ ರಾಜ್​ ಅವರನ್ನು ಬಂಧಿಸಿರುವ ಸಿಸಿಬಿ ಪೊಲೀಸರು ವಿಚಾರಣೆ ನಡೆಸುತ್ತಿದ್ದು, ವಿಚಾರಣೆ ಮುಗಿದ ಬಳಿಕ ನ್ಯಾಯಾಲಯಕ್ಕೆ ಹಾಜರು ಪಡಿಸಲಿದ್ದಾರೆ.

dj halli riots case accuse
ಸಂಪತ್ ರಾಜ್
author img

By

Published : Nov 17, 2020, 12:01 PM IST

Updated : Nov 17, 2020, 12:25 PM IST

ಬೆಂಗಳೂರು: ಕೆ.ಜಿ. ಹಳ್ಳಿ ಹಾಗೂ ಡಿ.ಜೆ.ಹಳ್ಳಿ ಗಲಭೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಮಾಜಿ ಮೇಯರ್ ಸಂಪತ್ ರಾಜ್​ ಅವರನ್ನು ಬಂಧಿಸಿ ಸಿಸಿಬಿ ಅಧಿಕಾರಿಗಳು​ ಪ್ರಾಥಮಿಕ ವಿಚಾರಣೆ ನಡೆಸುತ್ತಿದ್ದಾರೆ‌‌.

ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಯಲ್ಲಿ ಡಿಸಿಪಿ ರವಿಕುಮಾರ್ ನೇತೃತ್ವದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ. ಆಸ್ಪತ್ರೆಯಿಂದ ಸಂಪತ್​​ರಾಜ್​ ಎಸ್ಕೇಪ್ ಆಗಿದ್ದೇಕೆ? ಅಲ್ಲಿಂದ ಪರಾರಿಯಾಗಲು ಸಹಾಯ ಮಾಡಿದವರು ಯಾರು.? ಇಷ್ಟು ದಿನ ಯಾವ್ಯಾವ ಸ್ಥಳಗಳಲ್ಲಿ ಅಡಗಿದ್ರಿ? ಎಸ್ಕೇಪ್ ಆದ ದಿನದಿಂದ ಇಂದಿನವರೆಗೂ ಸಹಾಯ ಮಾಡಿದವರು ಯಾರು..? ಬಂಧಿತ‌ ಆರೋಪಿಯಾಗಿರುವ ರಿಯಾಜುದ್ದೀನ್ ನಾಗರಹೊಳೆ ರೆಸಾರ್ಟ್​​ಗೆ ಕರೆದೊಯ್ದಿದ್ದು ಹೇಗೆ? ಎಂಬುದರ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ.

ವಿಚಾರಣೆ ನಂತರ ಇಂದು ಮಧ್ಯಾಹ್ನ ವೈದ್ಯಕೀಯ ತಪಾಸಣೆಗಾಗಿ ಕೆ.ಸಿ.ಜನರಲ್‌ ಆಸ್ಪತ್ರೆಗೆ ಕರೆದೊಯ್ಯಲಿದ್ದಾರೆ. ತದ ನಂತರ ನ್ಯಾಯಾಲಯಕ್ಕೆ ಹಾಜರುಪಡಿಸಿ, ಕಸ್ಟಡಿಗೆ ಪಡೆಯಲು ಸಿಸಿಬಿ ಸಿದ್ಧತೆ ಮಾಡಿಕೊಂಡಿದೆ.

Last Updated : Nov 17, 2020, 12:25 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.