ಬೆಂಗಳೂರು: ಕೊರೊನಾ ವಾರಿಯರ್ಸ್ ಆಗಿ ಕೆಲಸ ಮಾಡುತ್ತಿರುವ ಪೊಲೀಸರಿಗೆ ಸೋಂಕು ಹೆಚ್ಚಾಗಿ ಕಾಣುತ್ತಿದ್ದು, ಇಂದು ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ಗೆ ಕೋವಿಡ್-19 ದೃಢಪಟ್ಟಿದೆ.
ರಾಜರಾಜೇಶ್ವರಿ ನಗರ ಠಾಣೆಯಲ್ಲಿ ಹೆಡ್ ಕಾನ್ಸ್‌ಟೇಬಲ್ ಆಗಿ ಕಾರ್ಯನಿರ್ವಹಣೆ ಮಾಡುವ ವ್ಯಕ್ತಿ ಅನಾರೋಗ್ಯದಿಂದ ಬಳಲುತ್ತಿದ್ದ ಕಾರಣ ಸ್ಥಳೀಯ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದರು. ಈ ವೇಳೆ, ಅವರ ಗಂಟಲು ದ್ರವ ಪರೀಕ್ಷೆಗೆ ಕಳುಹಿಸಲಾಗಿದ್ದು,
ಕೊರೊನಾ ಪಾಸಿಟಿವ್ ಬಂದಿದೆ. ಹೀಗಾಗಿ ಅವರನ್ನು ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.
ಮುಂಜಾಗ್ರತಾ ಕ್ರಮವಾಗಿ ಆರ್. ಆರ್. ನಗರ ಠಾಣೆಯನ್ನು ಸೀಲ್ಡೌನ್ ಮಾಡಲಾಗಿದ್ದು, ಸಿಬ್ಬಂದಿ ಸಂಪರ್ಕದಲ್ಲಿದ್ದವರನ್ನು ಕ್ವಾರಂಟೈನ್ ಮಾಡಿ, 48 ಗಂಟೆಗಳ ಕಾಲ ಠಾಣೆಯನ್ನು ಮಾಡಲಾಗಿದೆ.
ಇನ್ನು ಕೊರೊನಾ ವೈರಸ್ಗೆ ತುತ್ತಾದ ಸಿಬ್ಬಂದಿಗೆ ಹೇಗೆ ಸೋಂಕು ತಗುಲಿದೆ ಎನ್ನುವುದೇ ನಿಗೂಢವಾಗಿದೆ. ಪೊಲೀಸ್ ಇಲಾಖೆಯಲ್ಲಿ ಅತಿ ಹೆಚ್ಚಾಗಿ ಮದ್ಯ ವಯಸ್ಸಿನವರಲ್ಲಿಯೇ ಸೋಂಕು ಕಂಡುಬರುತ್ತಿದ್ದು, ಭಯದಲ್ಲೇ ಕೆಲಸ ನಿರ್ವಹಿಸಬೇಕಾದ ಪರಿಸ್ಥಿತಿ ಎದುರಾಗಿದೆ.