ಬೆಂಗಳೂರು: ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ವತಿಯಿಂದ ಗಣರಾಜ್ಯೋತ್ಸ ಆಚರಿಸಲಾಯಿತು.
ಬಿಎಂಟಿಸಿ ಅಧ್ಯಕ್ಷ ನಂದೀಶ ರೆಡ್ಡಿ ಧ್ವಜಾರೋಹಣ ನೆರವೇರಿಸಿದರು. ನಂತರ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಸಿ. ಶಿಖಾ, ಭದ್ರತಾ ಮತ್ತು ಜಾಗೃತಿ ನಿರ್ದೇಶಕರು ಅನುಪಮ್ ಅಗರವಾಲ್ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.
ಇದೇ ವೇಳೆ ಪ್ರಯಾಣಿಕರಿಗೆ ಉತ್ತಮ ಸೇವೆ ಸಲ್ಲಿಸಿರುವಂತಹ 4 ಸಿಬ್ಬಂದಿಗೆ 500 ರೂಪಾಯಿ ನಗದು ಬಹುಮಾನದೊಂದಿಗೆ "ಉತ್ತಮ ಸೇವಾ" ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.