- ಬೆಳಗಾವಿಯಲ್ಲಿ ಭಾರತ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಲೆ ಏರಿಕೆ ಸೇರಿದಂತೆ ಕೇಂದ್ರ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ವಿವಿಧ ಸಂಘಟನೆ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದರು. ಬಂದ್ ಇದ್ದರೂ ಕೂಡ ಬಸ್, ಆಟೋ ಸಂಚಾರ ಎಂದಿನಂತೆ ಇದ್ದರೆ, ಅಂಗಡಿ ಮುಗ್ಗಟ್ಟು ತೆರೆದಿದ್ದು, ಶಾಲಾ-ಕಾಲೇಜು ಆರಂಭಗೊಂಡಿದ್ದವು.
- ಹಾಸನದಲ್ಲಿಯೂ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು. ಕೇಂದ್ರ ಸರ್ಕಾರದ ವಿರುದ್ಧ ವಿವಿಧ ಸಂಘಟನೆಗಳಿಂದ ಆಕ್ರೋಶ ವ್ಯಕ್ತವಾಯಿತು. ಸಿಎಎ, ಎನ್‌ಆರ್‌ಪಿ, ಎನ್‌ಆರ್‌ಸಿ ಮತ್ತು ಆರ್ಥಿಕ ನೀತಿ ವಿರುದ್ಧ ಪ್ರತಿಭಟನೆ ನಡೆಸಲಾಯಿತು. ಎಂದಿನಂತೆ ಸರ್ಕಾರಿ ಬಸ್, ಆಟೋ, ಟೆಂಪೊ ಸಂಚಾರವಿದ್ದರೆ, ಅಂಗಡಿ ಮುಂಗಟ್ಟು, ಚಲನಚಿತ್ರ ಮಂದಿರಗಳು, ಪೆಟ್ರೋಲ್ ಬಂಕ್ ತೆರೆದಿದ್ದವು.
- ಅಥಣಿಯಲ್ಲಿ ವಿವಿಧ ಸಂಘಟನೆಗಳ ವತಿಯಿಂದ ಪ್ರತಿಭಟನೆ ನಡೆಸಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು. ಕಾರ್ಮಿಕ ಸಂಘಟನೆಗಳು, ಅಂಗನವಾಡಿ ಕಾರ್ಯಕರ್ತೆಯರು, ಗುತ್ತಿಗೆ ಪೌರ ಕಾರ್ಮಿಕರು ಸೇರಿ ವಿವಿಧ ಸಂಘಟನೆಯವರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.
ಭಾರತ ಬಂದ್‌ಗೆ ರಾಜ್ಯದಲ್ಲಿ ಮಿಶ್ರ ಪ್ರತಿಕ್ರಿಯೆ: ಹಲವೆಡೆ ಪ್ರತಿಭಟನಾಕಾರರ ಬಂಧನ - ಹಾವೇರಿ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ
15:44 January 08
ಬೆಳಗಾವಿಯಲ್ಲಿ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ
15:06 January 08
ಚಿಕ್ಕಮಗಳೂರಲ್ಲಿ ಮೂರು ಸಾವಿರಕ್ಕೂ ಅಧಿಕ ಜನರಿಂದ ಬೃಹತ್ ಪ್ರತಿಭಟನಾ ಮೆರವಣಿಗೆ
- ಭಟ್ಕಳ ತಾಲೂಕಿನ ಸಿಐಟಿಯು ಕಾರ್ಯಕರ್ತರು, ತಾಲೂಕು ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕರು, ಅಕ್ಷರ ದಾಸೋಹ ನೌಕರರ ಸಂಘಗಳು ವಿವಿಧ ಬೇಡಿಕೆಗಳಿಗಾಗಿ ಒತ್ತಾಯಿಸಿ ಸೆಂಟರ್ ಆಪ್ ಇಂಡಿಯನ್ ಟ್ರೇಡ್ ಯೂನಿಯನ್ ಭಟ್ಕಳ ಸಮಿತಿ ವತಿಯಿಂದ ಮುಸ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ.
- ಕೇಂದ್ರ ಸರ್ಕಾರದ ಕಾರ್ಮಿಕ ನೀತಿ ಹಾಗೂ ಸಿಎಎ ವಿರುದ್ಧ ಭಾರತ ಬಂದ್‌ಗೆ ಕರೆ ನೀಡಿದ್ದ ಹಿನ್ನೆಲೆ ಬಾಗಲಕೋಟೆ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೇವಲ ಪ್ರತಿಭಟನೆ ಮಾತ್ರ ಜರುಗಿದ್ದು, ಯಾವುದೇ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿರಲಿಲ್ಲ. ಅಲ್ಲದೆ, ಸಾರಿಗೆ ಮತ್ತು ಆರೋಗ್ಯ ಸೇವೆಗಳು ಎಂದಿನಂತೆ ಮುಂದುವರೆದಿವೆ.
- ಚಿಕ್ಕಮಗಳೂರಿನಲ್ಲಿ ಹಲವಾರು ಸಂಘಟನೆಗಳು ಬಂದ್‌ಗೆ ಬೆಂಬಲ ನೀಡಿದ್ದು, ಮೂರು ಸಾವಿರಕ್ಕೂ ಅಧಿಕ ಕಾರ್ಯಕರ್ತರು ನಗದಲ್ಲಿ ಬೃಹತ್ ಪ್ರತಿಭಟನೆ ಮಾಡಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನಗರದ ಕೆಇಬಿ ವೃತ್ತದಿಂದ ಆರಂಭವಾದ ಈ ಪ್ರತಿಭಟನೆ, ಎಂ ಜಿ ರಸ್ತೆಯ ಮೂಲಕ ಸಾಗಿ ಆಜಾದ್ ಪಾರ್ಕ್ ವೃತ್ತದಲ್ಲಿ ಕೊನೆಯಾಯಿತು.
- ಹಾವೇರಿ ನಗರದ ಹುಕ್ಕೇರಿಮಠದಿಂದ ಪ್ರತಭಟನಾ ಮೆರವಣಿಗೆ ನಡೆಸಲಾಯಿತು. ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದ ಸಂಘಟನೆಗಳ ಸದಸ್ಯರು, ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿ ವಿರುದ್ಧ ಘೋಷಣೆ ಕೂಗಿದರು. ನಂತರ ಹೊಸಮನಿ ಸಿದ್ದಪ್ಪ ವೃತ್ತಕ್ಕೆ ಆಗಮಿಸಿದ ಸಂಘಟನೆಗಳ ಸದಸ್ಯರು, ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
14:14 January 08
-
ಶಿವಮೊಗ್ಗದಲ್ಲಿ ಬಂದ್‌ಗೆ ಸಂಪೂರ್ಣ ಬೆಂಬಲ ಕೊಡಲು ಜನ ಮುಂದಾಗಿಲ್ಲ. ಸರ್ಕಾರಿ ಹಾಗೂ ಖಾಸಗಿ ಬಸ್ಗಳು ತಮ್ಮ ಸೇವೆಯನ್ನು ಎಂದಿನಂತೆ ಮುಂದುವರೆಸಿದ್ದವು. ಅಂಗಡಿ ಮುಗ್ಗಟ್ಟುಗಳು,ಮಾರುಕಟ್ಟೆ ಎಲ್ಲವು ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ.
-
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಇಂದು ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಭಾರತ ಬಂದ್‌ಗೆ ಗದಗ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮುಂಜಾನೆಯಿಂದ ಸಾರಿಗೆ ಬಸ್, ಖಾಸಗಿ ವಾಹನಗಳು ಸಂಚಾರ ಆರಂಭ ಮಾಡಿದ್ವು. ಮಾರುಕಟ್ಟೆಯಲ್ಲಿ ದಿನನಿತ್ಯ ವ್ಯಾಪಾರ ವಹಿವಾಟು ನಡೆಯಿತು. ಶಾಲಾ ಕಾಲೇಜು ಸೇರಿದಂತೆ ಅಂಗಡಿ ಮುಂಗಟ್ಟುಗಳು ಸಹ ಎಂದಿನಂತೆ ಆರಂಭವಾಗಿವೆ. ಇನ್ನೊಂದೆಡೆ ವಿವಿಧ ಸಂಘ ಸಂಸ್ಥೆಗಳು ಪ್ರತಿಭಟನಾ ಮೆರವಣಿಗೆ ನಡೆಸಿವೆ.
13:51 January 08
ಹೊಸಪೇಟೆಯಲ್ಲಿ ಭಾರತ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ
- ಹೊಸಪೇಟೆ: ದೇಶದಲ್ಲಿ ಮೋದಿ ಸರ್ಕಾರದ ಆಡಳಿತವನ್ನು ನೋಡಿ ಜನರು ಬೇಸರಗೊಂಡಿದ್ದಾರೆ. ದಿನದಿಂದ ದಿನಕ್ಕೆ ವಸ್ತುಗಳ ಬೆಲೆ ಮಾರುಕಟ್ಟೆಯಲ್ಲಿ ಏರಿಕೆಯಾಗುತ್ತಿದೆ. ವಸ್ತುಗಳ ಬೆಲೆಯ ಏರಿಕೆಯಂತೆ ಕೂಲಿ ಕಾರ್ಮಿಕರ ದುಡಿಮೆಯನ್ನು ಸರ್ಕಾರ ಯಾಕೆ ಏರಿಸುತ್ತಿಲ್ಲ. ಸಂವಿಧಾನ ವಿರೋಧ ನೀತಿಯನ್ನು ಅನುಸರಿಸುತ್ತಿದೆ ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
13:51 January 08
-
ಮಂಗಳೂರಲ್ಲಿ ಬಂದ್ ಬೆಂಬಲಿಸಿ ವಿವಿಧ ಕಾರ್ಮಿಕ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಇಂಟಕ್, ಎಐಟಿಯುಸಿ, ಸಿಐಟಿಯು, ಬ್ಯಾಂಕ್ ಯೂನಿಯನ್, ಅಂಚೆ ಇಲಾಖೆ, ಬಿಎಸ್ಎನ್ಎಲ್, ಸರ್ಕಾರಿ ನೌಕರರು ಸೇರಿದಂತೆ ಹಲವಾರು ಕಾರ್ಮಿಕ ಸಂಘಟನೆಗಳು ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದವು.
13:33 January 08
ಪೊಲೀಸರ ವಿರುದ್ಧ ಕಾರ್ಮಿಕ ಸಂಘಟನೆಗಳ ಆಕ್ರೋಶ
ಚಿಕ್ಕಬಳ್ಳಾಪುರದಲ್ಲಿ ಪ್ರತಿಭಟನಾಕಾರರ ಬಂಧನ:
- ಚಿಕ್ಕಬಳ್ಳಾಪುರ ನಗರದ ಅಂಬೇಡ್ಕರ್ ಸರ್ಕಲ್ನಲ್ಲಿ ಬೆಳಿಗ್ಗೆಯಿಂದ ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸುತ್ತಿದ್ದ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.
- ಬಳ್ಳಾರಿಯಲ್ಲಿ ಭಾರತ ಬಂದ್ ಹಿನ್ನೆಲೆಯಲ್ಲಿ ಕಾರ್ಮಿಕ ಸಂಘಟನೆಗಳು ಪ್ರತಿಭಟನೆ ಆರಂಭಮಾಡಿವೆ. ನಗರದ ಮೋತಿ ವೃತ್ತದಲ್ಲಿಂದು ವಿವಿಧ ಕಾರ್ಮಿಕ ಸಂಘಟನೆಗಳಸ ಮುಖಂಡರು ಹಾಗೂ ಕಾರ್ಯಕರ್ತರು ಜಮಾಯಿಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಾರೆ.
- ಚಿಕ್ಕೋಡಿಯಲ್ಲಿ ಭಾರತ ಬಂದ್ ಹಿನ್ನೆಲೆ ಕಾರ್ಮಿಕರಿಗೆ ರ್ಯಾಲಿ ಮಾಡಲು ಪೊಲೀಸರು ನಿರಾಕರಣೆ ಮಾಡಿದ್ದಕ್ಕೆ ಪೊಲೀಸರ ವಿರುದ್ಧ ಕಾರ್ಮಿಕ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವು.
ಶಿರಸಿ :
- ಶಿರಸಿಯಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು. ಅಖಿಲ ಭಾರತ ಸಾರ್ವತ್ರಿಕ ಮುಷ್ಕರಕ್ಕೆ ಶಿರಸಿಯ ವಿವಿಧ ಕಾರ್ಮಿಕ ಸಂಘಟನೆಗಳು ಬೆಂಬಲ ಸೂಚಿಸಿ, ಹಳೆ ಬಸ್ ನಿಲ್ದಾಣ ವೃತ್ತದ ಬಳಿ ಪ್ರತಿಭಟನೆ ನಡೆಸಿದರು. ಬಸ್ ನಿಲ್ದಾಣದಿಂದ ನಗರದ ಪ್ರಮುಖ ಬೀದಿಗಳಲ್ಲಿ 300 ಕ್ಕೂ ಅಧಿಕ ಕಾರ್ಯಕರ್ತರು ಮೆರವಣಿಗೆ ನಡೆಸಿ ಸಹಾಯಕ ಆಯುಕ್ತರಿಗೆ ತಮ್ಮ ಮನವಿ ಸಲ್ಲಿಸಿದರು.
13:21 January 08
ಚಾಮರಾಜನಗರದಲ್ಲಿ ಕಾರ್ಮಿಕರ ಪ್ರತಿಭಟನೆ
- ಚಾಮರಾಜನಗರ: ಕನಿಷ್ಠ ವೇತನ ಮತ್ತು ಸಾಮಾಜಿಕ ಭದ್ರತೆ ಹಾಗೂ ಇನ್ನಿತರ ಬೇಡಿಕೆಗಳಿಗೆ ಆಗ್ರಹಿಸಿ ಅಂಗನವಾಡಿ ನೌಕರರ ಸಂಘ, ಸಿಐಟಿಯು, ಜೆಸಿಟಿಯು, ಆಶಾ ಕಾರ್ಯಕರ್ತೆಯರ ಸಂಘ ಒಗ್ಗೂಡಿ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಚಾಮರಾಜೇಶ್ಚರ ದೇಗುಲ ಮುಂಭಾಗದಿಂದ ಸಾವಿರಾರು ಮಂದಿ ಮೆರವಣಿಗೆ ಮೂಲಕ ತಾಲೂಕು ಕಚೇರಿವರೆಗೆ ತೆರಳಿ ಕೇಂದ್ರ ಸರ್ಕಾರ ಮತ್ತು ಪ್ರಧಾನಿ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದರು.
13:21 January 08
ರಾಣೆಬೆನ್ನೂರಲ್ಲಿ ಬಂದ್ಗಿಲ್ಲ ಬೆಂಬಲ
- ರಾಣೆಬೆನ್ನೂರು: ನಗರದಲ್ಲಿ ಭಾರತ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಎಲ್ಲಾ ಅಂಗಡಿ ಮುಗ್ಗಟ್ಟುಗಳ ಬಾಗಿಲು ತೆರೆದಿವೆ. ಸರ್ಕಾರಿ ಬಸ್ಸುಗಳು ಹಾಗೂ ಆಟೋಗಳು ಎಂದಿನಂತೆ ರಸ್ತೆಗಿಳಿದು ಸಾರ್ವಜನಿಕರಿಗೆ ಸೇವೆ ನೀಡುತ್ತಿವೆ.
12:41 January 08
ಎನ್ಐಟಿಯುಸಿ ಕಾರ್ಯಕರ್ತರ ಧರಣಿ ಸತ್ಯಾಗ್ರಹ
- ಕಲಬುರಗಿಯಲ್ಲಿ ಎನ್ಐಟಿಯುಸಿ ಕಾರ್ಯಕರ್ತರು ಧರಣಿ ಸತ್ಯಾಗ್ರಹ ನಡೆಸುತ್ತಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿದ ಅವರು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಕಾರ್ಮಿಕ ಹಾಗೂ ಜನ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ. ಕಾರ್ಮಿಕರನ್ನು ಕಡೆಗಣಿಸುತ್ತಿದೆ ಎಂದು ಆರೋಪ ಮಾಡಿದರು.
12:40 January 08
ಬೀದರ್ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕೆಂಡ ಕಾರಿದ ಪ್ರತಿಭಟನಾಕಾರರು
ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಕರೆ ನೀಡಿದ್ದ ಭಾರತ ಬಂದ್ ಹಿನ್ನೆಲೆಯಲ್ಲಿ ಗಡಿ ಜಿಲ್ಲೆ ಬೀದರ್ನಲ್ಲಿ ವಿವಿಧ ಕಾರ್ಮಿಕ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ, ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದರು.
12:37 January 08
- ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ದೇಶದಾದ್ಯಂತ ಕಾರ್ಮಿಕ ಸಂಘಟನೆಗಳು ಕರೆಕೊಟ್ಟ ಹಿನ್ನೆಲೆಯಲ್ಲಿ ಕಾರವಾರ ನಗರದಲ್ಲಿ ಸಿಐಟಿಯು ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿದರು. ಸಿಐಟಿಯು ನೇತೃತ್ವದಲ್ಲಿ ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಕಾರ್ಮಿಕ ಸಂಘಟನೆಗಳು ನಗರದ ಮಾಲಾದೇವಿ ಮೈದಾನದಿಂದ ಹೊರಟ ಮೆರವಣಿಗೆಯು ಪ್ರಮುಖ ರಸ್ತೆಗಳಲ್ಲಿ ಸಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.
- ದಾವಣಗೆರೆ: ಬೆಲೆ ಏರಿಕೆ ನಿಯಂತ್ರಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಗರದಲ್ಲಿ ಕಾರ್ಮಿಕ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರ್ ಜಯವೃತ್ತದಲ್ಲಿ ಜಮಾವಣೆಗೊಂಡು ಪ್ರತಿಭಟನೆ ನಡೆಸಿದ ಕಾರ್ಮಿಕರು, ರೈತರು, ಕೇಂದ್ರ ಸರ್ಕಾರದ ಕಾರ್ಮಿಕ ಹಾಗೂ ರೈತ ವಿರೋಧಿ ನೀತಿಗೆ ಆಕ್ರೋಶ ವ್ಯಕ್ತಪಡಿಸಿದರು.
12:35 January 08
ಕಾಂಗ್ರೆಸ್ ಧರಣಿ
- ಬೆಂಗಳೂರು: ಕೇಂದ್ರ ಸರ್ಕಾರದ ಕಾರ್ಮಿಕ ನೀತಿ ವಿರೋಧಿಸಿ ಕಾಂಗ್ರೆಸ್ ನಾಯಕರು ಧರಣಿ ನಡೆಸಿದ್ದಾರೆ. ಇಂದು ದೇಶಾದ್ಯಂತ ಪ್ರತಿಭಟನೆ ನಡೆಯುತ್ತಿರುವ ಹಿನ್ನೆಲೆ ಕಾಂಗ್ರೆಸ್ ನಾಯಕರು ಕೂಡ ಕಾಂಗ್ರೆಸ್ ಭವನದಲ್ಲಿ ಪ್ರತಿಭಟನೆ ನಡೆಸಿದರು. ರಾಜ್ಯದಲ್ಲೂ ಹಲವು ಕಾರ್ಮಿಕ ಸಂಘಟನೆಗಳ ಧರಣಿ ನಡೆಸುತ್ತಿದ್ದು, ಕೆಪಿಸಿಸಿ ಕಾರ್ಮಿಕ ಘಟಕದಿಂದಲೂ ಪ್ರತಿಭಟನೆ ನಡೆಸಲಾಯಿತು.
12:25 January 08
- ಧಾರವಾಡ:ಭಾರತ ಬಂದ್ ಹಿನ್ನೆಲೆ ಪ್ರತಿಭಟನಾ ಮೆರವಣಿಗೆ ಮಾಡಲು ಹೊರಟ ಪ್ರತಿಭಟನಾಕಾರರನ್ನು ಜಿಲ್ಲಾಧಿಕಾರಿ ಕಚೇರಿವರೆಗೆ ಬಸ್ ಮೂಲಕ ತಂದು ಬೀಡಲಾಯಿತು. ಹಲವು ಸಂಘಟನೆಗಳ ನೂರಾರು ಕಾರ್ಯಕರ್ತರನ್ನು ಜಿಲ್ಲಾಧಿಕಾರಿ ಕಚೇರಿಗೆ ಪೊಲೀಸರು ಕರೆದೊಯ್ದರು. ಮೆರವಣಿಗೆ ನಡೆಸಲು ಅನುಮತಿ ಇಲ್ಲ, ಪ್ರತಿಭಟನೆಗಷ್ಟೇ ಅವಕಾಶ ಕಲ್ಪಿಸಲಾಗಿದೆ ಎಂದು ಪೊಲೀಸರು ಮೆರವಣಿಗೆ ಮಾಡಲು ಅವಕಾಶ ನೀಡಲಿಲ್ಲ.
- ಇಂದು ನಡೆಸಬೇಕಿದ್ದ ಸಬ್ಇನ್ಸ್ಫೆಕ್ಟರ್ ದೈಹಿಕ ಪರೀಕ್ಷೆಯನ್ನ ಭಾರತ ಬಂದ್ ಹಿನ್ನೆಲೆ ಇದೇ ತಿಂಗಳ 27ಕ್ಕೆ ಮುಂದೂಡಿಕೆ ಮಾಡಲಾಗಿದೆ. ರಾಜ್ಯಾದ್ಯಂತ ಪೊಲೀಸ್ ಸಬ್ಇನ್ಸ್ಫೆಕ್ಟರ್
ಪರೀಕ್ಷೆಗೆ ಇಂದು ದೈಹಿಕ ಪರೀಕ್ಷೆಗೆ ನಡೆಸಲು ಇಲಾಖೆ ನಿರ್ಧಾರ ಮಾಡಲಾಗಿತ್ತು. ಪ್ರತಿಭಟನೆ ಇದ್ದ ಕಾರಣ ದಿನಾಂಕವನ್ನು ಮುಂದೂಡಲಾಗಿದೆ.
11:51 January 08
ಮೈಸೂರಲ್ಲಿ ಹಲವು ಸಂಘಟನೆಗಳಿಂದ ಪ್ರತಿಭಟನಾ ಮೆರವಣಿಗೆ
ಮೈಸೂರು: ಬೆಲೆ ಏರಿಕೆ ನಿಯಂತ್ರಣ, ಅಸಂಘಟಿತ ವಲಯದ ಕಾರ್ಮಿಕರಿಗೆ ಸಾಮಾಜಿಕ ಭದ್ರತೆಗಾಗಿ ,ಕನಿಷ್ಠ ವೇತನ ಜಾರಿಗೊಳಿಸುವಂತೆ, ಸಾರ್ವಜನಿಕ ಉದ್ಯಮಗಳನ್ನು ಖಾಸಗಿಕರಣಗೊಳಿಸದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕೇಂದ್ರ ಸರ್ಕಾರದ ವಿರುದ್ಧ ವಿವಿಧ ಕಾರ್ಮಿಕ ಸಂಘಟನೆಗಳು ಪ್ರತಿಭಟನಾ ಮೆರವಣಿಗೆ ನಡೆಸಿದವು. ಜೆ.ಕೆ.ಮೈದಾನದಿಂದ ಹೊರಟ ಪ್ರತಿಭಟನಾ ಮೆರವಣಿಗೆಯು, ಇರ್ವಿನ್ ರೋಡ್, ಅಶೋಕ ರಸ್ತೆ ಮೂಲಕ ಪುರಭವನ ಮೈದಾನದಲ್ಲಿ ಜಮಾವಣೆಗೊಂಡು ಪ್ರಧಾನಿ ನರೇಂದ್ರ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಕೆಂಪು ಬಾವುಟ ರೈತನದೋ, ರಕ್ತ ಬಾವುಟ ಕೂಲಿಯದೋ... ಮುಷ್ಕರದ ವೇಳೆ ಗಮನ ಸೆಳೆದ ಸಾಂಗ್!
ದಾವಣಗೆರೆಯಲ್ಲಿ, ಕೆಂಪು ಬಾವುಟವೂ ರೈತನದೋ, ರಕ್ತ ಬಾವುಟವೂ ಕೂಲಿಯದೋ', "ದೇಶ ದಿವಾಳಿ ಮಾಡ್ಯಾರೋ, ದೇಶ ಒತ್ತೆ ಇಟ್ಯಾರೋ... ಎಂಬ ಹಾಡು ಪ್ರತಿಭಟನೆ ವೇಳೆ ಕೇಳಿಬಂದಿತು. ಕಾರ್ಮಿಕರ ಮುಖಂಡ ಮಂಜುನಾಥ್ ಸಂಗಡಿಗರು, ಕೇಂದ್ರ ಸರ್ಕಾರದ ಕಾರ್ಮಿಕ ನೀತಿ ವಿರೋಧಿ ಧೋರಣೆಗೆ ಈ ರೀತಿ ಆಕ್ರೋಶ ವ್ಯಕ್ತಪಡಿಸಿದರು.
11:28 January 08
11:23 January 08
ಚಿಕ್ಕಬಳ್ಳಾಪುರದ ವಿವಿಧೆಡೆ ಪ್ರತಿಭಟನೆ
ಚಿಕ್ಕಬಳ್ಳಾಪುರ ನಗರದಲ್ಲಿ ಕಾರ್ಮಿಕ ಸಂಘಗಳು ರಸ್ತೆಗಿಳಿದು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಪ್ರತಿಭಟನೆ ಮಾಡುತ್ತಿದ್ದರೆ, ಬಾಗೇಪಲ್ಲಿ ತಾಲೂಕಿನಲ್ಲಿ ಪ್ರತಿಭಟನಾಕಾರರು ಬಸ್‌ಗಳನ್ನು ತಡೆದು ಬಂದ್‌ಗೆ ಬೆಂಬಲ ಸೂಚಿಸುವಂತೆ ಮನವಿ ಮಾಡಿಕೊಳ್ಳುತ್ತಿದ್ದಾರೆ. ಗುಡಿಬಂಡೆ, ಚಿಂತಾಮಣಿ ನಗರದಲ್ಲೂ ಕಾರ್ಮಿಕ ಸಂಘ ಸೇರಿದಂತೆ ರೈತ ಸಂಘ, ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಹೊರಟು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.
11:21 January 08
ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಮುಷ್ಕರ
ಇಂದು ನಡೆಯುತ್ತಿರುವ ಭಾರತ ಬಂದ್ ಹಿನ್ನಲೆ, ನಗರದ ಪೀಣ್ಯ ಕೈಗಾರಿಕಾ ಪ್ರದೇಶದ ಕಾರ್ಮಿಕರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಪೀಣ್ಯ 2ನೆ ಹಂತದಲ್ಲಿ ಈ ಪ್ರತಿಭಟನೆ ನಡೆಯುತ್ತಿದ್ದು, 170 ಪೊಲೀಸರನ್ನು ನಿಯೋಜಿಸಲಾಗಿದೆ. ಪೀಣ್ಯ 2ನೆ ಹಂತದಿಂದ ಜಾಲಹಳ್ಳಿ ಕ್ರಾಸ್ ವರೆಗೂ ಈ ಪ್ರತಿಭಟನಾ ಮೆರವಣಿಗೆ ಮಾಡುತ್ತಿದ್ದು, ನಂತರ ಪ್ರತಿಭಟನಾಕಾರರು ಫ್ರಿಡಂ ಪಾರ್ಕ್ನಲ್ಲಿ ಹೋಗಿ ಜಮಾವಣೆ ಗೊಳ್ಳಲಿದ್ದಾರೆ.
10:58 January 08
ಚಿತ್ರದುರ್ಗದಲ್ಲಿ ಪ್ರತಿಭಟನೆ: 20 ಪ್ರತಿಭಟನಾಕಾರರ ಬಂಧನ
ಯಾದಗಿರಿ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೆಲವೆಡೆ ಪ್ರತಿಭಟನೆ ಕಂಡುಬಂದರೆ ಹಲವೆಡೆ ಬಂದ್‌ಗೆ ಯಾವುದೇ ಬೆಂಬಲ ವ್ಯಕ್ತವಾಗಿಲ್ಲ.
ಗದಗದಲ್ಲೂ ಕೂಡ ಬಂದ್‌ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆದರೆ, ಇದರ ಎಫೆಕ್ಟ್ ಕೆಲವೊಂದು ಕಡೆ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ತಟ್ಟಿದೆ. ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಬಸ್ ನಿಲ್ದಾಣದಲ್ಲಿ ಬಸ್ ಇಲ್ಲದೆ ಕಾಲೇಜು ವಿದ್ಯಾರ್ಥಿಗಳು ಪರದಾಡಿದ್ದಾರೆ. ಎಂ.ಎಸ್ಸಿ ಪದವಿಧರ ವಿದ್ಯಾರ್ಥಿಗಳು ಇಂದು ಖಾಸಗಿ ಕಾಲೇಜೊಂದರಲ್ಲಿ ಎಂ.ಎಸ್ಸಿ.ಪರೀಕ್ಷೆ ಬರೆಯಲು ತೆರಳಬೇಕಾಗಿತ್ತು. ಆದರೆ, ಪ್ರತಿಭಟನಾಕಾರರು ಬಸ್ ಸಂಚಾರಕ್ಕೆ ಅಡ್ಡಿಪಡಿಸಿದ್ದರಿಂದ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಒಳಗಾಗುವಂತೆ ಆಯಿತು.
ಗಡಿ ಜಿಲ್ಲೆ ಬೀದರ್ನಲ್ಲೂ ಯಾವುದೇ ರೀತಿಯ ಬೆಂಬಲ ವ್ಯಕ್ತವಾಗಿಲ್ಲ. ಸಾರಿಗೆ ಸಂಚಾರ, ಜನ ಜೀವನ, ವ್ಯಾಪಾರ ವಹಿವಾಟು ಎಂದಿನಂತಿದೆ. ಅಂತರಾಜ್ಯ ಸಾರಿಗೆಯಲ್ಲಿ ಸ್ವಲ್ಪ ವ್ಯತ್ಯಯ ಕಂಡು ಬಂದಿದ್ದು ಹೈದರಾಬಾದ್ ಹಾಗೂ ಮಹಾರಾಷ್ಟ್ರದ ಸೊಲ್ಲಾಪುರ ಮಾರ್ಗದಲ್ಲಿ ಸಾರಿಗೆ ಸಂಸ್ಥೆ ಬಸ್ಗಳ ಓಡಾಟ ನಿಲ್ಲಿಸಲಾಗಿದೆ.
ಧಾರವಾಡದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮುಷ್ಕರಕ್ಕೆ ಧಾರವಾಡದ ಟಾಟಾ ಮಾರ್ಕೋಫೋಲೋ ಕಂಪನಿಯ ಕಾರ್ಮಿಕರು ಬೆಂಬಲ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.
ಚಿತ್ರದುರ್ಗದಲ್ಲಿ ಪ್ರತಿಭಟನೆ ಬಿಸಿ ಹೆಚ್ಚಿದೆ. ನಗರದ ಗಾಂಧಿವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಕಾರರು ಕೇಂದ್ರದ ವಿರುದ್ಧ ಆಕ್ರೋಶ ಹೊರಹಾಕಿದರು. ಪೊಲೀಸ್ ಠಾಣೆ ಎದುರು ಪ್ರತಿಭಟನೆಗೆ ಯತ್ನಿಸಿದ ಪ್ರತಿಭಟನಾಕಾರರ ಜೊತೆ ಪೊಲೀಸರು ವಾಗ್ವಾದ ನಡೆಸಿದ್ದಾರೆ. ಈ ವೇಳೆ 20 ಕ್ಕೂ ಹೆಚ್ಚು ಜನರನ್ನು ಪೊಲೀಸರು ಬಂಧಿಸಿದ್ದಾರೆ.
10:12 January 08
ಟೌನ್ ಹಾಲ್ ಮುಂಭಾಗ ಪ್ರತಿಭಟನೆಗೆ ನಡೆಸಲು ಅನುಮತಿ ನೀಡದ ಪೊಲೀಸರು
ಬೆಂಗಳೂರು: ಟೌನ್ ಹಾಲ್ ಮುಂಭಾಗ ಪ್ರತಿಭಟನೆಗೆ ನಡೆಸಲು ಕಾರ್ಮಿಕ ಸಂಘಟನೆಗಳು ನಿರ್ಧರಿಸಿದ್ದು, ಪ್ರತಿಭಟನೆಗೆ ಅವಕಾಶ ಕೊಡದಿರಲು ಪೊಲೀಸ್ ಇಲಾಖೆ ಈಗಾಗಲೇ ಟೌನ್ಹಾಲ್ನಲ್ಲಿ ಬಿಗಿ ಭದ್ರತೆ ವಹಿಸಿದೆ.
ಸಾಂಸ್ಕೃತಿಕ ನಗರಿಯಲ್ಲಿ ನೀರಸ ಪ್ರತಿಕ್ರಿಯೆ:
ಕೇಂದ್ರ ಸರ್ಕಾರದ ವಿರುದ್ಧ ಹಲವು ಸಂಘಟನೆಗಳು ಕರೆ ನೀಡಿದ್ದ ಭಾರತ ಬಂದ್‌ಗೆ ಮೈಸೂರಿನಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜನ ಸಂಚಾರ ಸಾಮಾನ್ಯವಾಗಿದ್ದು, ಶಾಲಾ ಕಾಲೇಜುಗಳು, ಸರ್ಕಾರಿ ಬಸ್ಗಳು, ಹೋಟೆಲ್‌ಗಳು ತೆರದಿದ್ದು ಬಂದ್ ಬಿಸಿ ಹಿನ್ನೆಲೆಯಲ್ಲಿ ಜನ ಸಂಚಾರ ಸ್ವಲ್ಪ ಕಡಿಮೆ ಇದೆ.
ನಗರದ ಪ್ರಮುಖ ಸ್ಥಳಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಜೆ.ಕೆ ಮೈದಾನದಿಂದ ಪುರಭವನದವರಗೆ ಮಾತ್ರ ಪ್ರತಿಭಟನಾ ಮೆರವಣಿಗೆ ನಡೆಸಲು ಅನುಮತಿ ನೀಡಲಾಗಿದೆ.
ಅಥಣಿಯಲ್ಲಿ ಬೆಂಬಲ ಇಲ್ಲ:
ಬಂದ್ನಿಂದಾಗಿ ಅಥಣಿಯಲ್ಲಿ ಯಾವುದೇ ರೀತಿಯ ಪರಿಣಾಮ ಬಿರಿಲ್ಲ. ಅಥಣಿ ಪಟ್ಟಣದಲ್ಲಿ ಜನಸಾಮಾನ್ಯರು ದಿನನಿತ್ಯದ ಕೆಲಸದಲ್ಲಿ ನಿರತರಾಗಿದ್ದಾರೆ. ಶಾಲೆ ಕಾಲೇಜುಗಳು ಪ್ರಾರಂಭವಾಗಿವೆ.
09:40 January 08
ಕೆಎಸ್‌ಆರ್‌ಟಿಸಿ ಬಸ್‌ಗೆ ಕಲ್ಲು ತೂರಿದ ಕಿಡಿಗೇಡಿಗಳು:

ಕೊಡಗು: ಮಡಿಕೇರಿಯಿಂದ ಮೈಸೂರು ಕಡೆಗೆ ಹೊರಟಿದ್ದ ರಾಜ್ಯ ರಸ್ತೆ ಸಾರಿಗೆ ಬಸ್ ಮೇಲೆ ಕೆಲ ಕಿಡಿಗೇಡಿಗಳು ಕಲ್ಲು ತೂರಿರುವ ಘಟನೆ ನಗರದ ಹೊರವಲಯದ ಚೈನ್ ಗೇಟ್ ಬಳಿ ನಡೆದಿದೆ. ಅಖಿಲ ಭಾರತ ಕಾರ್ಮಿಕ ಸಂಘಟನೆಗಳು ಕರೆ ಕೊಟ್ಟಿದ್ದ ಭಾರತ ಬಂದ್ ಹಿನ್ನೆಲೆಯಲ್ಲಿ ಮಡಿಕೇರಿ ನಗರದಲ್ಲಿ ಬೆಳಗ್ಗೆ ಯಥಾಸ್ಥಿತಿ ಮುಂದುವರೆದಿತ್ತು.
ಮುಂಜಾನೆಯಿಂದ ರಸ್ತೆ ಸಾರಿಗೆ ಪ್ರಾರಂಭವಾಗಿತ್ತು. ವ್ಯಾಪಾರಸ್ಥರು ಅಂಗಡಿ, ಮುಂಗಟ್ಟುಗಳನ್ನು ತೆರೆದು ವ್ಯಾಪಾರ ವಹಿವಾಟು ಹಾಗೂ ಸಾರ್ವಜನಿಕರು ದಿನನಿತ್ಯದ ಕೆಲಸಗಳಿಗೆ ತೆರಳುತ್ತಿದ್ದರು. ಇದೇ ವೇಳೆ ಮಡಿಕೇರಿಯಿಂದ -ಮೈಸೂರು ಕಡೆಗೆ ಹೊರಟಿದ್ದ ರಾಜ್ಯ ರಸ್ತೆ ಸಾರಿಗೆ ಬಸ್‌ಗೆ ಕೆಲವು ಕಿಡಿಗೇಡಿಗಳು ಕಲ್ಲು ತೂರಿದ್ದಾರೆ.
ಬೆಣ್ಣೆನಗರಿಗೆ ತಟ್ಟದ ಬಂದ್ ಬಿಸಿ:
ದಾವಣಗೆರೆ: ಕೇಂದ್ರ ಕಾರ್ಮಿಕದ ನೀತಿ ವಿರೋಧ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್ ಬಿಸಿ ಬೆಣ್ಣೆನಗರಿಗೆ ತಟ್ಟಿಲ್ಲ. ಕೆಎಸ್‌ಆರ್‌ಟಿಸಿ, ಖಾಸಗಿ ಬಸ್ಗಳು, ಆಟೋಗಳ ಸಂಚಾರ, ಜನಜೀವನ ಎಂದಿನಂತಿದೆ. ಹಾಲು, ಔಷಧ, ಅಗತ್ಯ ವಸ್ತುಗಳು, ಆಸ್ಪತ್ರೆ, ಹೊಟೇಲ್ಗಳು, ಚಿತ್ರಮಂದಿರ, ಬ್ಯಾಂಕ್ಗಳು ಯಥಾಸ್ಥಿತಿಯಲ್ಲಿ ಕಾರ್ಯನಿರ್ವಹಿಸಲಿವೆ.
ರಾಯಚೂರು ಜಿಲ್ಲೆಯಲ್ಲಿ ಬೆಂಬಲ ಬಂದ್‌ಗೆ ಬೆಂಬಲ ವ್ಯಕ್ತವಾಗಿಲ್ಲ.. ಗರದಲ್ಲಿ ಎಂದಿನಂತೆ ಜನ-ಜೀವನ, ವಾಹನ ಸಂಚಾರ ಸಾಗಿದ್ದು, ಅಂಗಡಿ-ಮುಗಟ್ಟುಗಳು ತೆರದಿವೆ. ಗ್ರಾಮೀಣ ಭಾಗದಿಂದ ತರಕಾರಿ ಮಾರುಕಟ್ಟೆಯಲ್ಲಿ ವ್ಯಾಪಾರ-ವಹಿವಾಟು, ಬಸ್ ಸಂಚಾರ ಎಂದಿನಂತೆ ಸಾಗುತ್ತಿರುವ ದೃಶ್ಯ ಕಂಡು ಬರುತ್ತಿದೆ. ಬಂದ್ ಬಿಸಿ ಇಲ್ಲದಿರುವ ಕಾರಣ ಶಾಲಾ-ಕಾಲೇಜುಗಳಿಗೆ ರಜೆ ನೀಡಿಲ್ಲ.
08:45 January 08
ಕೋಲಾರದಲ್ಲಿ ಪ್ರತಿಭಟನಾಕಾರರ ಬಂಧನ
ಮಂಡ್ಯದಲ್ಲಿ ಮಿಶ್ರ ಪ್ರತಿಕ್ರಿಯೆ :
ಸಿಎಎ, ಎನ್‌ಆರ್‌ಸಿ ವಿರುದ್ಧ ಕರೆ ನೀಡಿರುವ ಭಾರತ ಬಂದ್‌ಗೆ ಜಿಲ್ಲೆಯಲ್ಲಿ ನೀರಸ ಪ್ರಕ್ರಿಯೆ ವ್ಯಕ್ತವಾಗಿದೆ. ಎಂದಿನಂತೆ ಮುಂಜಾನೆಯ ಕೆಲಸದಲ್ಲಿ ಜನತೆ ನಿರತರಾಗಿದ್ದಾರೆ. ಅಂಗಡಿಗಳು, ಹೋಟೆಲ್‌ಗಳು ಎಂದಿನಂತೆ ಕಾರ್ಯ ನಿರ್ವಹಿಸುತ್ತಿವೆ. ಕೂಲಿ ಕಾರ್ಮಿಕರು ಕೆಲಸಗಳಲ್ಲಿ ತಲ್ಲೀನರಾಗಿದ್ದಾರೆ.
ಪೊಲೀಸ್ ಇಲಾಖೆ ಅಧಿಕಾರಿಗಳು ಜಿಲ್ಲಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಿದ್ದಾರೆ. ದಾಂಧಲೆ ನಡೆಸುವವರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ ನೀಡಲಾಗಿದೆ. ಬೆಳಗ್ಗೆ 11 ಗಂಟೆ ವೇಳೆಗೆ ಕಾರ್ಮಿಕ ಸಂಘಗಳ ಮುಖಂಡರು ಪ್ರತಿಭಟನೆ ಮಾಡುವ ಸಾಧ್ಯತೆ ಇದೆ.
ಕೋಲಾರದಲ್ಲಿ ಪ್ರತಿಭಟನಾಕಾರರ ಬಂಧನ :
ಇಂದು ಮುಂಜಾನೆ 5 ಗಂಟೆಗೆ ಬೀದಿಗಿಳಿದಿದ್ದ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರನ್ನ ಪೊಲೀಸರು ಬಂಧಿಸಿದ್ದಾರೆ. ಕೋಲಾರ ನಗರದ ಟೋಲ್ ಗೇಟ್ ಬಳಿ ಇರುವ ಬಸ್ ಡಿಪೋ ಮುಂದೆ ಪ್ರತಿಭಟನಾಕಾರರನ್ನ ಬಂಧಿಸಲಾಗಿದೆ. ಡಿಪೋ ಮುಂದೆ ಬಸ್ಗಳನ್ನ ಹೊರ ಬಿಡದೆ ರಸ್ತೆ ತಡೆ ನಡೆಸಿ ಪ್ರತಿಭಟನೆಗೆ ಮುಂದಾದ ಹಿನ್ನೆಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ.
ಉತ್ತರಕನ್ನಡದಲ್ಲಿ ನಿರಸ ಪ್ರತಿಕ್ರಿಯೆ
ಕಾರ್ಮಿಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ದೇಶಾದ್ಯಂತ ಕರೆಕೊಟ್ಟಿರುವ ಸಾರ್ವತ್ರಿಕ ಮುಷ್ಕರಕ್ಕೆ ಉತ್ತರಕನ್ನಡ ಜಿಲ್ಲೆಯಲ್ಲಿ ನಿರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜಿಲ್ಲಾ ಕೇಂದ್ರ ಕಾರವಾರದಲ್ಲಿ ಎಂದಿನಂತೆ ಬಸ್ ಸಂಚಾರ ಪ್ರಾರಂಭಗೊಂಡಿದ್ದು, ಅಂಗಡಿ ಮುಂಗಟ್ಟುಗಳನ್ನು ವ್ಯಾಪಾರಸ್ಥರು ತೆರೆಯುತ್ತಿದ್ದಾರೆ. ಅಲ್ಲದೆ ಆಟೋ, ಟೆಂಪೋಗಳು ಕೂಡ ಎಂದಿನಂತೆ ಸಂಚಾರ ಮಾಡುತ್ತಿದ್ದು, ಜನಜೀವನ ಸಹಜ ಸ್ಥಿತಿಯಲ್ಲಿ ಮುಂದುವರಿದಿದೆ.
08:34 January 08
ಸಾರಿಗೆ ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರು
ಚಿಕ್ಕಮಗಳೂರಿನಲ್ಲಿ ಮುಷ್ಕರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಸಾರಿಗೆ ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾಗಿದ್ದಾರೆ.
08:33 January 08
ವಿಜಯಪುರದಲ್ಲಿಲ್ಲ ಮುಷ್ಕರ
ವಿಜಯಪುರ: ಬಂದ್‌ಗೆ ವಿಜಯಪುರ ಜಿಲ್ಲೆಯಲ್ಲಿ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗಿದೆ. ನಗರದಲ್ಲಿ ಎಂದಿನಂತೆ ಅಟೋ ಸಂಚಾರ ಹಾಗೂ ಇತರೆ ವಾಹನಗಳ ಸಂಚಾರ ಸಾಮಾನ್ಯವಾಗಿತ್ತು.
ಆಸ್ಪತ್ರೆ, ಪೆಟ್ರೋಲ್ಬಂಕ್ಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ. ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಸಹ ಆರಂಭವಾಗಿದೆ.
08:24 January 08
ಧಾರವಾಡದಲ್ಲಿ ನೀರಸ ಪ್ರತಿಕ್ರಿಯೆ
ಕೇಂದ್ರ ಸರ್ಕಾರದ ವಿರುದ್ಧ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಭಾರತ ಬಂದ್ ಹಿನ್ನೆಲೆ ಧಾರವಾಡದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಎಂದಿನಂತೆ ವಾಹನ ಸಂಚಾರ ಪ್ರಾರಂಭವಾಗಿದ್ದು, ಅಂಗಡಿ ಮುಂಗಟ್ಟುಗಳು ತೆರೆದಿವೆ. ಇದರಿಂದ ವಿದ್ಯಾಕಾಶಿ ಧಾರವಾಡಕ್ಕೆ ಬಂದ್ ಬಿಸಿ ತಟ್ಟಿಲ್ಲ. ಬಂದ್ ಹಿನ್ನೆಲೆ ಜಿಲ್ಲಾಡಳಿತ ಶಾಲಾ ಕಾಲೇಜುಗಳಿಗೆ ರಜೆ ನೀಡಿಲ್ಲ. ಮುನ್ನೆಚ್ಚರಿಕಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.
08:03 January 08
ಚಾಮರಾಜನಗರದಲ್ಲಿ ನೀರಸ ಪ್ರತಿಕ್ರಿಯೆ: 10 ಗಂಟೆ ಬಳಿಕ ಹಲವು ಸಂಘಟನೆ ಪ್ರತಿಭಟನೆ
ಕಾರ್ಮಿಕ ಒಕ್ಕೂಟಗಳು ವಿವಿಧ ಬೇಡಿಕೆ ಈಡೇರಿಕೆಗಾಗಿ ಕರೆ ನೀಡಿರುವ ಭಾರತ ಬಂದ್‌ಗೆ ಗಡಿಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಎಂದಿನಂತೆ ಬಸ್ ಸಂಚಾರ ಆರಂಭವಾಗಿದ್ದು ಶಾಲಾ-ಕಾಲೇಜುಗಳಿಗೆ ವಿದ್ಯಾರ್ಥಿಗಳು ಹೊರಡಲು ಅಣಿಯಾಗುತ್ತಿದ್ದಾರೆ. ಹೋಟೆಲ್‌ಗಳು,ಅಂಗಡಿಗಳು ಕೂಡ ಎಂದಿನಂತೆ ಆರಂಭ ಆಗಿದ್ದು ಜನಜೀವನ ಎಂದಿನಂತಿದೆ.
ಬಂದ್‌ಗೆ ಎಸ್ಡಿಪಿಐ ಹೊರತುಪಡಿಸಿ ಯಾವುದೇ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿಲ್ಲ. ಬೆಳಗ್ಗೆ 10 ರ ಬಳಿಕ ಅಂಗನವಾಡಿ ಕಾರ್ಯಕರ್ತೆಯರು, ಬಿಸಿಯೂಟ ನೌಕರರು, ಗ್ರಾಮ ಪಂಚಾಯತ್ ಡಿ.ಗ್ರೂಪ್ ನೌಕರರಿಂದ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ನೀಡಲಿದ್ದಾರೆ.
07:54 January 08
07:52 January 08
ಶಿವಮೊಗ್ಗಲ್ಲಿ ಸದ್ಯದ ಮಟ್ಟಿಗೆ ನೀರಸ
ಭಾರತ್ ಬಂದ್‌ಗೆ ಶಿವಮೊಗ್ಗ ಜಿಲ್ಲೆಯಲ್ಲಿ ಸದ್ಯದ ಮಟ್ಟಿಗೆ ನಿರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಗರದ ಕೆಎಸ್‌ಆರ್‌ಟಿಸಿ ಬಸ್ ಖಾಸಗಿ ಬಸ್ ಸೇರಿದಂತೆ ವಾಹನ ಸಂಚಾರ ಎಂದಿನಂತೆ ಪ್ರಾರಂಭವಾಗಿದೆ. ಅಂಗಡಿ ಮುಂಗಟ್ಟುಗಳು ಎಂದಿನಂತೆ ನಡೆಯುತ್ತಿದೆ.
07:49 January 08
ಭಾರತ ಬಂದ್ ಗೆ ಚಿಕ್ಕೋಡಿಯಲ್ಲಿ ಮಿಶ್ರ ಪ್ರತಿಕ್ರಿಯೆ
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈಗಾಗಲೇ ಅಂಗಡಿ ಮುಂಗಟ್ಟುಗಳು ಪ್ರಾರಂಭವಾಗಿದ್ದು ತಮ್ಮ ದಿನಂಪ್ರತಿ ವ್ಯಾಪಾರ ವಹಿವಾಟು ಪ್ರಾರಂಭಿಸಿದ್ದಾರೆ. ಈಗಾಗಲೇ ಕೆಎಸ್‌ಆರ್‌ಟಿಸಿ ಬಸ್ಗಳು ರಾತ್ರಿ ವಸತಿಗೆ ಹೋಗಿರುವಂತ ಬಸ್ಗಳು ಮರಳಿ ಡಿಪೋ ಕಡೆ ಆಗಮಿಸುತ್ತಿದ್ದು, ಬೆಳಿಗ್ಗೆ 7 ಗಂಟೆಯಿಂದ ಬಸ್ ಸಂಚಾರ ಸ್ಥಗಿತಗೊಳ್ಳಲಿದೆ. ಶಿಕ್ಷಣ ಇಲಾಖೆ ಭಾರತ್ ಬಂದ್‌ಗೆ ಬೆಂಬಲ ಸೂಚಿಸಿಲ್ಲ. ಆದರೆ, ಬೇರೆ ಬೇರೆ ಗ್ರಾಮಗಳಿಂದ ಬರುವಂತಹ ವಿದ್ಯಾರ್ಥಿಗಳಿಗೆ ಬಸ್ಗಳು ಸಂಚರಿಸದೆ ಇರುವುದರಿಂದ ತೊಂದರೆಯಾಗಲಿದೆ.
ಚಿಕ್ಕೋಡಿ ಪಟ್ಟಣದಲ್ಲಿ ಮುಂಜಾನೆ 11 ಗಂಟೆಗೆ ಬಂದ್‌ಗೆ ಬೆಂಬಲ ಸೂಚಿಸಲಿರುವ ಕಾರ್ಮಿಕರು, ಹಳೆ ನೌಕರರ ಭವನದಿಂದ ಕೆ ಸಿ ರೋಡ್ ಮುಖಾಂತರ ಕೋರೆ ನಗರಕ್ಕೆ ಬಂದು ಬಸವೇಶ್ವರ ಸರ್ಕಲ್ನಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಲಿದ್ದಾರೆ.
07:35 January 08
ಕೋಲಾರದಲ್ಲಿ ಬಂದ್‌ಗೆ ಮಿಶ್ರಪ್ರತಿಕ್ರಿಯೆ: ಇಲ್ಲಿದೆ ಪ್ರತ್ಯಕ್ಷ ವರದಿ
07:10 January 08
ರಾಜ್ಯಾದ್ಯಂತ ಪ್ರತಿಭಟನೆಗೆ ಮಿಶ್ರ ಪ್ರತಿಕ್ರಿಯೆ
ಕಾರ್ಮಿಕ ಸಂಘಟನೆಗಳು ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಭಾರತ್ ಬಂದ್‌ಗೆ ಕರೆನೀಡಿದ್ದು, ರಾಜ್ಯದಲ್ಲಿ ಬಂದ್‌ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.
ಹಾವೇರಿ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಎಂದಿನಂತೆ ಸರ್ಕಾರಿ ಮತ್ತು ಖಾಸಗಿ ಬಸ್ಗಳು ಸಂಚರಿಸುತ್ತಿವೆ. ಬಂದ್ ಬೆಂಬಲಿಸಿ ಇಂದು 11 ಗಂಟೆಗೆ ಕೆಲ ಕಾರ್ಮಿಕ ಸಂಘಟನೆಗಳು ಪ್ರತಿಭಟನೆ ನಡೆಸಲಿವೆ. ಶಾಲಾ ಕಾಲೇಜುಗಳು ಆಸ್ಪತ್ರೆಗಳು ಎಂದಿನಂತೆ ಕಾರ್ಯನಿರ್ವಯಿಸಲಿವೆ.
ಭಾರತ ಬಂದ್ ಗಣಿನಗರಿಗೆ ತಟ್ಟದ ಬಿಸಿ:
ಬಳ್ಳಾರಿ ಜಿಲ್ಲೆಗೆ ಬಂದ್ ಬಿಸಿ ತಟ್ಟಿಲ್ಲ. ಯಾವುದೇ ಬಂದ್ ಆಚರಣೆಗೂ ಜಿಲ್ಲಾ ಪೊಲೀಸ್ ಇಲಾಖೆ ಅನುಮತಿ ನೀಡಿಲ್ಲ. ಹೀಗಾಗಿ, ವಿವಿಧ ಕಾರ್ಮಿಕ ಸಂಘಟನೆಗಳು ಕೇವಲ ಪ್ರತಿಭಟನೆ ಮಾಡಲು ನಿರ್ಧರಿಸಿವೆ. ಎಂದಿನಂತೆ ವಾಹನ ಸಂಚಾರ ಸೇರಿದಂತೆ ಎಲ್ಲ ವ್ಯವಹಾರ, ವ್ಯಾಪಾರದ ವಹಿವಾಟು ಇರುತ್ತೆ.

ಹಾವೇರಿ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಎಂದಿನಂತೆ ಸರಕಾರಿ ಮತ್ತು ಖಾಸಗಿ ಬಸ್ ಗಳು ಸಂಚರಿಸುತ್ತಿದ್ದು ಜನಜೀವನ
ಎಂದಿನಂತಿದೆ.
ಬಂದ್ ಬೆಂಬಲಿಸಿ ಹನ್ನೊಂದು ಗಂಟೆಗೆ ಕೆಲ ಕಾರ್ಮಿಕ ಸಂಘಟನೆಗಳು ಪ್ರತಿಭಟನೆ ನಡೆಸಲಿವೆ.
ಎಐಟಿಯುಸಿ, ಸಿಐಟಿಯು ಸೇರಿದಂತೆ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಲಿವೆ.
ಶಾಲಾ ಕಾಲೇಜುಗಳು ಆಸ್ಪತ್ರೆಗಳು ಎಂದಿನಂತೆ ಕಾರ್ಯನಿರ್ವಯಿಸಲಿವೆ.Body:sameConclusion:same