ETV Bharat / state

Bharat Bandh: ಮೆಜೆಸ್ಟಿಕ್‌ ಸುತ್ತಮುತ್ತ ಪೊಲೀಸ್​​ ಬಿಗಿ ಭದ್ರತೆ

ರೈತ ಪರ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್ ಹಿನ್ನೆಲೆಯಲ್ಲಿ​​ ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣದ ಸುತ್ತಮುತ್ತ ಪೊಲೀಸ್​​ ಬಿಗಿ ಭದ್ರತೆ ಕಲ್ಪಿಸಲಾಗಿದೆ.

bharat-bandh-tight-security-in-bengaluru-kempegowda-bus-station
Bharat Bandh: ಮೆಜೆಸ್ಟಿಕ್‌ ಸುತ್ತಮುತ್ತ ಪೊಲೀಸ್​​ ಬಿಗಿ ಭದ್ರತೆ
author img

By

Published : Sep 27, 2021, 8:21 AM IST

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತ ಪರ ಸಂಘಟನೆಗಳು ಇಂದು ಕರೆ ನೀಡಿರುವ ಭಾರತ್ ಬಂದ್ ಹಿನ್ನೆಲೆಯಲ್ಲಿ​​ ನಗರದ ಕೆಂಪೇಗೌಡ ಬಸ್ ನಿಲ್ದಾಣದ ಸುತ್ತಮುತ್ತಲು ಪಶ್ಚಿಮ ವಿಭಾಗದ ಪೊಲೀಸರು ಬಿಗಿ ಭದ್ರತೆ ಕಲ್ಪಿಸಿದ್ದಾರೆ.

ಬಸ್ ಸಂಚಾರದಲ್ಲಿ ಯಾವುದೇ ವ್ಯತ್ಯಯವಾಗದಂತೆ ಪೊಲೀಸರನ್ನು ನಿಯೋಜಿಸಲಾಗಿದೆ‌. ಬೆಳ್ಳಂಬೆಳಗ್ಗೆ ಮೆಜೆಸ್ಟಿಕ್​ಗೆ ಬಂದು ಡಿಸಿಪಿ ಸಂಜೀವ್ ಪಾಟೀಲ್ ಭದ್ರತೆ ಪರಿಶೀಲಿಸಿದರು. ಈ ವೇಳೆ ಮಾತನಾಡಿ, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಹಿನ್ನೆಲೆಯಲ್ಲಿ ಕಳೆದ ರಾತ್ರಿಯಿಂದ ಬಂದೋಬಸ್ತ್ ಮಾಡಲಾಗಿದೆ ಎಂದರು.

ಸಿವಿಲ್ ಪೊಲೀಸ್ ಜೊತೆಗೆ ಕೆಎಸ್​​ಆರ್​ಪಿ, ಹಾಗೂ ಸಿಎಆರ್​ ತುಕಡಿ ನಿಯೋಜನೆ ಮಾಡಲಾಗಿದೆ. ಯಾವುದೇ ಹಿಂಸಾತ್ಮಕ ಘಟನೆ ಆಗದಂತೆ ಎಚ್ಚರಿಕೆ ವಹಿಸಲಾಗಿದೆ. ಪಶ್ಚಿಮ ವಿಭಾಗದ ಎಲ್ಲ ಪೊಲೀಸರು ಕಾರ್ಯ ನಿರ್ವಹಿಸುತ್ತಿದ್ದಾರೆ. ಸಂಚಾರಿ ಪೊಲೀಸರನ್ನು ಕೂಡ ನಿಯೋಜನೆ ಮಾಡಲಾಗಿದೆ.‌ಸಾರ್ವಜನಿಕರಿಗೆ ತೊಂದರೆ ಆದರೆ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಬಹುದು ಡಿಸಿಪಿ ತಿಳಿಸಿದರು.

ಇದನ್ನೂ ಓದಿ: ಕೇಂದ್ರ ಜಾರಿಗೊಳಿಸಿರುವ ಕೃಷಿ ಕಾಯ್ದೆಗಳು ಯಾವುವು? ಅವುಗಳ ಬಗ್ಗೆ ನಿಮಗೆಷ್ಟು ಗೊತ್ತು?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.