ETV Bharat / state

ಭಾರತ್ ಬಂದ್ : ಬೆಂಗಳೂರಿನ ಕೆಲ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ವ್ಯವಸ್ಥೆ

ಭಾರತ್​ ಬಂದ್​ ಹಿನ್ನೆಲೆಯಲ್ಲಿ ನಾಳೆ ಬೆಂಗಳೂರಿನ ಕೆಲ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ. ಅಲ್ಲದೆ ಈ ಮಾರ್ಗಗಳ ಬದಲಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗಿದೆ.

bharat-bandh-traffic-prohibition-and-alternatives-on-some-roads-in-bangalore
ಭಾರತ್ ಬಂದ್ : ಬೆಂಗಳೂರಿನ ಕೆಲ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ವ್ಯವಸ್ಥೆ
author img

By

Published : Sep 26, 2021, 7:41 AM IST

ಬೆಂಗಳೂರು: ಕೃಷಿ ಕಾಯ್ದೆಗಳಿಗೆ ಕೇಂದ್ರ ಸರ್ಕಾರ ತಂದಿರುವ ತಿದ್ದುಪಡಿ ವಿರೋಧಿಸಿ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಭಾರತ್​ ಬಂದ್​ ಹಿನ್ನೆಲೆಯಲ್ಲಿ ನಾಳೆ ನಗರದ ಕೆಲ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದ್ದು, ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಸಂಚಾರ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರೈತ ಸಂಘಟನೆಗಳ ನೇತೃತ್ವದಲ್ಲಿ ಎರಡೂವರೆ ಸಾವಿರ ಜನರು ಶೇಷಾದ್ರಿ ರಸ್ತೆಯ ಮೌರ್ಯ ವೃತ್ತದಲ್ಲಿ ಜಮಾವಣೆಗೊಂಡು ಅಲ್ಲಿಂದ ಮೆರವಣಿಗೆಯ ಮುಖಾಂತರ ಫ್ರೀಡಂ ಪಾರ್ಕ್‍ವರೆಗೆ ಸಾಗಿ, ನಂತರ ಅಲ್ಲಿಂದ ಮೈಸೂರು ಬ್ಯಾಂಕ್ ವೃತ್ತದವರೆಗೆ ಮೆರವಣಿಗೆ ಸಾಗಲಿದ್ದಾರೆ. ಮೈಸೂರು ಬ್ಯಾಂಕ್ ವೃತ್ತದಲ್ಲಿ ರೈತರು ಜಮಾವಣೆಗೊಂಡು ರಾಜ್ಯ, ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.

ಬಂದ್ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಸಂಚಾರ ಕೇಂದ್ರ ಉಪ ವಿಭಾಗದ ವ್ಯಾಪ್ತಿಗೆ ಒಳಪಡುವ ಹಲಸೂರು ಗೇಟ್ ಸಂಚಾರ ಪೊಲೀಸ್ ಠಾಣಾ ಸರಹದ್ದಿಗೆ ಸೇರಿರುವ ಕೆ.ಜಿ.ರಸ್ತೆಯಲ್ಲಿ ಸಾರ್ವಜನಿಕರ ಸುಗಮ ಸಂಚಾರಕ್ಕೆ ಯಾವುದೇ ರೀತಿಯ ಅಡಚಣೆಯಾಗದಂತೆ ನೃಪತುಂಗ ರಸ್ತೆಯ ಕೆ.ಆರ್ ವೃತ್ತದಿಂದ ಪೊಲೀಸ್ ಕಾರ್ನರ್​​ವರೆಗೆ ಮತ್ತು ಪೊಲೀಸ್ ಕಾರ್ನರ್ ವೃತ್ತದಿಂದ ಕೆ.ಆರ್.ವೃತ್ತದವರೆಗೆ ವಾಹನಗಳ ಸಂಚಾರಕ್ಕೆ ಮಾರ್ಪಾಡು ಮಾಡಲಾಗಿದೆ. ಈ ಸಂಚಾರ ಮಾರ್ಪಾಡುಗಳು ಸೋಮವಾರ ಬೆಳಗ್ಗೆ 9 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಮಾತ್ರ ಜಾರಿಯಲ್ಲಿರಲಿದೆ.

ಸಂಚಾರ ನಿಷೇಧ:

ಹಲಸೂರು ಗೇಟ್ ಠಾಣೆ ಕಡೆಯಿಂದ ಬಂದು ಪೊಲೀಸ್ ಕಾರ್ನರ್ ಬಳಿ ಎಡ ತಿರುವು ಪಡೆದುಕೊಂಡು ಕೆ.ಜಿ.ರಸ್ತೆ ಕಡೆಗೆ ಸಾಗುವ ಮಾರ್ಗ ಸಂಚಾರ ನಿಷೇಧಿಸಲಾಗಿದೆ. ಹಾಗೆಯೇ ನೃಪತುಂಗ ರಸ್ತೆ ಮೂಲಕ ಬಂದು ಪೊಲೀಸ್ ಕಾರ್ನರ್ ಬಳಿ ಬಲ ತಿರುವು ಪಡೆದು ಕೆ.ಜಿ.ರಸ್ತೆ ಕಡೆಗೆ ಸಾಗುವ ಮಾರ್ಗದಲ್ಲೂ ಸಂಚಾರ ನಿಷೇಧಿಸಲಾಗಿದೆ ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಿದ್ದಾರೆ.

ಪರ್ಯಾಯ ವ್ಯವಸ್ಥೆ:

ಹಲಸೂರು ಗೇಟ್ ಪೊಲೀಸ್ ಠಾಣೆ ಕಡೆಯಿಂದ ಬಂದು ಪೊಲೀಸ್ ಕಾರ್ನರ್ ಬಳಿ ಎಡ ತಿರುವು ಪಡೆದುಕೊಳ್ಳಬೇಕು. ನಂತರ ಕೆ.ಜಿ ರಸ್ತೆಯ ಕಡೆಗೆ ಸಾಗುವ ವಾಹನಗಳು ಪೊಲೀಸ್ ಕಾರ್ನರ್ ವೃತ್ತದಿಂದ ನೇರವಾಗಿ ನೃಪತುಂಗ ರಸ್ತೆಗೆ ಪ್ರವೇಶ ತೆಗೆದುಕೊಳ್ಳಬೇಕು. ನೃಪತುಂಗ ರಸ್ತೆಯಲ್ಲಿ ಸಾಗಿ ಕೆ.ಆರ್. ವೃತ್ತ ತಲುಪಿ ಮುಂದುವರೆಯಲು ಅನುವು ಮಾಡಿಕೊಡಲಾಗಿದೆ.

ಕೆ.ಆರ್.ಸರ್ಕಲ್​​ನಿಂದ ನೃಪತುಂಗ ರಸ್ತೆಯಲ್ಲಿ ಬಂದು ಪೊಲೀಸ್ ಕಾರ್ನರ್ ಬಳಿ ಬಲ ತಿರುವು ಪಡೆದುಕೊಳ್ಳಬಹುದು. ಕೆ.ಜಿ ರಸ್ತೆಗೆ ಸಾಗುವ ಸಂಚಾರ ನಿಷೇಧಿಸಿರುವುದರಿಂದ ಕೆ.ಆರ್. ವೃತ್ತದಿಂದ ಶೇಷಾದ್ರಿ ರಸ್ತೆಯಲ್ಲಿ ಸಾಗಿ ಮುಂದುವರೆಯಲು ಅನುವು ಮಾಡಿಕೊಡಲಾಗಿದೆ.

ದ್ವಿಮುಖ ಸಂಚಾರ ವ್ಯವಸ್ಥೆ:

ನೃಪತುಂಗ ರಸ್ತೆಯಲ್ಲಿ ಕೆ.ಆರ್. ವೃತ್ತದ ಕಡೆಯಿಂದ ಪೊಲೀಸ್ ಕಾರ್ನರ್ ವೃತ್ತದ ಕಡೆಗೆ ಪ್ರಸ್ತುತ ಜಾರಿಯಲ್ಲಿರುವ ಏಕಮುಖ ಸಂಚಾರವನ್ನು ದ್ವಿಮುಖ ಸಂಚಾರ ವ್ಯವಸ್ಥೆಯನ್ನಾಗಿ ಪರಿವರ್ತಿಸಲಾಗುತ್ತದೆ. ಅದರಂತೆ ಕೆ.ಆರ್ ವೃತ್ತದಿಂದ ಪೊಲೀಸ್ ಕಾರ್ನರ್ ವೃತ್ತದವರೆಗೆ ಮತ್ತು ಪೊಲೀಸ್ ಕಾರ್ನರ್ ವೃತ್ತದಿಂದ ಕೆ.ಆರ್ ವೃತ್ತದವರೆಗೆ ರಸ್ತೆಯ ಎರಡು ದಿಕ್ಕಿನಲ್ಲೂ ವಾಹನ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಲಾಗುತ್ತದೆ ಎಂದು ಸಂಚಾರ ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಕ್ಯಾಬ್​​​​​ನಲ್ಲಿ ಅತ್ಯಾಚಾರ ಪ್ರಕರಣ: ಸಂತ್ರಸ್ಥೆ ಮತ್ತು ಆರೋಪಿ ಇಬ್ಬರೂ ಪರಿಚಯಸ್ಥರೆ..!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.