ಬೆಂಗಳೂರು: ಕಾಂಗ್ರೆಸ್ ಶಾಸಕ ಭೀಮಾನಾಯಕ್ ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿದರು. ಕೆಎಂಎಫ್ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿರುವ ಅವರು ಮಾಜಿ ಸಚಿವ ಹೆಚ್.ಡಿ ರೇವಣ್ಣಗೆ ಠಕ್ಕರ್ ಕೊಡುವ ಪ್ರಯತ್ನ ನಡೆಸಿದ್ದಾರೆ.
ಹಗರಿಬೊಮ್ಮನಹಳ್ಳಿ ಕಾಂಗ್ರೆಸ್ ಶಾಸಕ ಭೀಮಾನಾಯಕ್ ಡಾಲರ್ಸ್ ಕಾಲೊನಿಯಲ್ಲಿರುವ ಸಿ.ಎಂ. ನಿವಾಸಕ್ಕೆ ಭೇಟಿ ನೀಡಿದರು. ರಾಯಚೂರು ಮತ್ತು ಬಳ್ಳಾರಿ ಜಿಲ್ಲಾ ಹಾಲು ಒಕ್ಕೂಟದ ದಿಂದ ಸಿಎಂ ಪರಿಹಾರ ನಿಧಿಗೆ ಹತ್ತು ಲಕ್ಷ ರೂ. ಮೊತ್ತದ ಚೆಕ್ ಅನ್ನು ಸಿಎಂ ಪರಿಹಾರ ನಿಧಿಗೆ ನೀಡಿದರು.
ನಂತರ ಕೆಎಂಎಫ್ ಅಧ್ಯಕ್ಷ ಸ್ಥಾನದ ಚುನಾವಣೆ ಕುರಿತು ಸಿಎಂ ಜೊತೆ ಚರ್ಚೆ ನಡೆಸಿದರು. ಈ ಹಿಂದೆ ನಿರ್ದೇಶಕರ ಹೈಜಾಕ್ ಆರೋಪ ಹಿನ್ನಲೆಯಲ್ಲಿ ಸರ್ಕಾರ ಚುನಾವಣೆ ಮುಂದೂಡಿದ್ದು, ಇದೀಗ ಚುನಾವಣೆಗೆ ದಿನಾಂಕ ನಿಗದಿಪಡಿಸುವಂತೆ ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.
ಸಿಎಂ ಭೇಟಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಭೀಮಾನಾಯಕ್, ರಾಯಚೂರು ಮತ್ತು ಬಳ್ಳಾರಿ ಜಿಲ್ಲಾ ಹಾಲು ಒಕ್ಕೂಟದಿಂದ ಸಿಎಂ ಪರಿಹಾರ ನಿಧಿಗೆ ಹತ್ತು ಲಕ್ಷ ಹಣವನ್ನು ಸಿಎಂ ಪರಿಹಾರ ನಿಧಿಗೆ ನೀಡಿದ್ದೇವೆ. ಕೆಎಂಎಫ್ ಬಗ್ಗೆಯೂ ಸಿಎಂ ಜತೆ ಮಾತನಾಡಿದ್ದೇನೆ. ಆದರೆ, ಪ್ರಕರಣ ನ್ಯಾಯಾಲಯದಲ್ಲಿರುವ ಕಾರಣ ಅದರ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ಸಾಧ್ಯವಿಲ್ಲ. ನ್ಯಾಯಾಲಯದಲ್ಲಿ ಇಂದು ಯಾವ ಆದೇಶ ಬರುತ್ತದೋ ನೋಡಿಕೊಂಡು ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ ಎಂದರು.