ETV Bharat / state

KMF Chairman: ಕೆಎಂಎಫ್ ಅಧ್ಯಕ್ಷರಾಗಿ ಮಾಜಿ ಶಾಸಕ ಭೀಮಾ ನಾಯಕ್ ಅವಿರೋಧ ಆಯ್ಕೆ

ಕೆಎಂಎಫ್​​ ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ಮಾಜಿ ಶಾಸಕ ಭೀಮಾ ನಾಯಕ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಮೊದಲು ಮಾಜಿ ಸಚಿವ ಬಾಲಚಂದ್ರ ಜಾರಕಿಹೊಳಿ ಅವರು ಕೆಎಂಎಫ್​ ಅಧ್ಯಕ್ಷರಾಗಿದ್ದರು.

KMF Chairman
KMF Chairman
author img

By

Published : Jun 22, 2023, 6:42 AM IST

ಬೆಂಗಳೂರು: ರಾಜ್ಯದ ಪ್ರತಿಷ್ಠಿತ ಸಹಕಾರ ಸಂಸ್ಥೆಗಳಲ್ಲಿ ಒಂದಾದ ಕರ್ನಾಟಕ ಹಾಲು ಮಾರಾಟ ಮಹಾಮಂಡಳಿ ಕೆಎಂಎಫ್​​ನ ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ಮಾಜಿ ಶಾಸಕ ಭೀಮಾ ನಾಯಕ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಬುಧವಾರ ನಿಗದಿಪಡಿಸಲಾಗಿದ್ದ ಚುನಾವಣೆಯಲ್ಲಿ ಮಾಜಿ ಶಾಸಕ ಭೀಮಾ ನಾಯಕ್ ಹೊರತುಪಡಿಸಿ ಬೇರೆ ಯಾರೂ ನಾಮಪತ್ರ ಸಲ್ಲಿಕೆ ಮಾಡದಿರುವ ಹಿನ್ನೆಲೆಯಲ್ಲಿ ಭೀಮಾ ನಾಯಕ ಅವರನ್ನು ಸರ್ವಾನುಮತದಿಂದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆಂದು ಘೋಷಣೆ ಮಾಡಲಾಗಿದೆ.

ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಾಜಿ ಸಚಿವ ಬಾಲಚಂದ್ರ ಜಾರಕಿಹೊಳಿಯವರು ಕೆಎಂಎಫ್ ಅಧ್ಯಕ್ಷರಾಗಿ ನೇಮಕವಾಗಿದ್ದರು. ವಿಧಾನಸಭಾ ಚುನಾವಣೆಯಲ್ಲಿ ಹೊಸದಾಗಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷದ ಸರ್ಕಾರವು ಬಿಜೆಪಿ ಸರ್ಕಾರದ ಅವಧಿಯಲ್ಲಿ ರಾಜ್ಯ ಸರ್ಕಾರದ ವತಿಯಿಂದ ಪ್ರತಿನಿಧಿಗಳಾಗಿ ನೇಮಕಗೊಂಡಿದ್ದ ಎಲ್ಲಾ ನಿಗಮ ಮಂಡಳಿ ಹಾಗೂ ಸಹಕಾರ ಸಂಸ್ಥೆಗಳ ನಿರ್ದೇಶಕರ ಆಯ್ಕೆಯನ್ನು ರದ್ದುಪಡಿಸಿತ್ತು. ಬಿಜೆಪಿ ಆಡಳಿತದ ಅವಧಿಯಲ್ಲಿ ಕೆಎಂಎಫ್ ನಿರ್ದೇಶಕರಾಗಿ ನೇಮಕಗೊಂಡಿದ್ದ ಮಾಜಿ ಸಚಿವ ಬಾಲಚಂದ್ರ ಜಾರಕಿಹೊಳಿಯವರ ನಾಮನಿರ್ದೇಶನ ನೇಮಕ ಅವಧಿಯೂ ಪೂರ್ಣಗೊಂಡಿತ್ತು. ಈ ಹಿನ್ನೆಲೆಯಲ್ಲಿ ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆಯನ್ನು ಘೋಷಣೆ ಮಾಡಲಾಗಿತ್ತು.

ಬುಧವಾರ ನಡೆದ ಚುನಾವಣೆಯಲ್ಲಿ ಕೆಎಂಎಫ್ ನಿರ್ದೇಶಕರಾಗಿದ್ದ ಮಾಜಿ ಶಾಸಕ ಭೀಮಾ ನಾಯಕ ಅವರು ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು. ಕೆಎಂಎಫ್ ನಿರ್ದೇಶಕರುಗಳಲ್ಲಿ ಬೇರೆ ಯಾರು ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ನಾಮಪತ್ರ ಸಲ್ಲಿಕೆ ಮಾಡದೇ ಇರುವ ಹಿನ್ನೆಲೆಯಲ್ಲಿ ಭೀಮಾನಾಯಕ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಈ ಹಿಂದೆಯೂ ಭೀಮಾ ನಾಯಕ್ ಪ್ರಯತ್ನಿಸಿ ವಿಫಲರಾಗಿದ್ದರು. ಈ ಬಾರಿ ಅವರಿಗೆ ಅಧ್ಯಕ್ಷ ಸ್ಥಾನದ ಅದೃಷ್ಟ ಒಲಿದಿದೆ.

ಹಗರಿಬೊಮ್ಮನ ಹಳ್ಳಿಯ ಮಾಜಿ ಶಾಸಕರಾಗಿದ್ದ ಭೀಮನಾಯ್ಕ್ ಅವರು ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಭವಗೊಂಡಿದ್ದರು. ಭೀಮಾ ನಾಯಕ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ವರ್ಗದಲ್ಲಿ ಗುರುತಿಸಿಕೊಂಡಿರುವ ರಾಜಕಾರಣಿಯಾಗಿದ್ದಾರೆ. ಕೆಎಂಎಫ್ ಅಧ್ಯಕ್ಷ ಸ್ಥಾನದ ಮೇಲೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಮ್ಮ ಬಣದ ಹಿರಿಯ ಶಾಸಕರಾದ ಮಾಗಡಿ ಕ್ಷೇತ್ರದ ಶಾಸಕ ಬಾಲಕೃಷ್ಣ ಅವರನ್ನು ನೇಮಕ ಮಾಡುವ ಬಗ್ಗೆ ಆಸಕ್ತಿ ವಹಿಸಿದ್ದರು. ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರಿಗೂ ಕೆಎಂಎಫ್ ಅಧ್ಯಕ್ಷ ಸ್ಥಾನ ಕಲ್ಪಿಸುವ ಬಗ್ಗೆ ಚರ್ಚೆ ನಡೆದಿತ್ತು. ಆದರೆ, ಅಂತಿಮವಾಗಿ ಕೆಎಂಎಫ್ ಅಧ್ಯಕ್ಷ ಸ್ಥಾನ ಭೀಮಾನಾಯಕ್ ಅವರಿಗೆ ದಕ್ಕಿದೆ.

ಕೆಎಂಎಫ್‌ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ತಾವು ಸ್ಪರ್ಧಿಸದೇ ಇರುವ ನಿರ್ಧಾರವನ್ನು ಕೆಎಂಎಫ್‌ ಅಧ್ಯಕ್ಷರಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ತೆಗೆದುಕೊಂಡಿದ್ದರು. ಕೆಎಂಎಫ್‌ ಅಧ್ಯಕ್ಷರ ಅಧಿಕಾರದ ಅವಧಿ ಇನ್ನೂ ಒಂದು ವರ್ಷ ಬಾಕಿ ಇದ್ದರೂ ಹಾಗೂ ಹೆಚ್ಚಿನ ನಿರ್ದೇಶಕರ ಬೆಂಬಲವಿದ್ದರೂ ತಾವು ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಮಾಡುವುದಿಲ್ಲ ಎಂದು ಮಾಧ್ಯಮ ಪ್ರಕಟಣೆಯಲ್ಲಿ ಬಾಲಚಂದ್ರ ಜಾರಕಿಹೊಳಿ ಸ್ಷಷ್ಟಪಡಿಸಿದ್ದರು. ಇದರಿಂದಾಗಿ ಪ್ರತಿಷ್ಠಿತ ಸಂಸ್ಥೆಯ ಅಧ್ಯಕ್ಷರ ಸ್ಥಾನಕ್ಕೆ ಚುನಾವಣೆ ನಡೆಯದೇ ಅವಿರೋಧ ಆಯ್ಕೆ ನಡೆಯಿತು. ಕೆಎಂಎಫ್ ಅಧ್ಯಕ್ಷರ ಚುನಾವಣೆ ಸಂದರ್ಭದಲ್ಲಿ ಸಹಕಾರ ಸಚಿವ ಕೆ ಎನ್ ರಾಜಣ್ಣ, ಪಶುಸಂಗೋಪನೆ ಸಚಿವ ಕೆ ವೆಂಕಟೇಶ್ ಸೇರದಂತೆ ಹಲವರು ಹಾಜರಿದ್ದರು.

ಇದನ್ನೂ ಓದಿ: KMF and Amul: ಕೆಎಂಎಫ್ ಮತ್ತು ಅಮುಲ್ ವಿಲೀನ ಪ್ರಸ್ತಾಪ ತಿರಸ್ಕರಿಸಿದ ರಾಜ್ಯ ಸರ್ಕಾರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.