ಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆ ವೇಳೆ ಶಿವಮೊಗ್ಗದಲ್ಲಿ ಭಾಷಣ ಮಾಡಿದ್ದ ಈಶ್ವರಪ್ಪರನ್ನ ಜನಪ್ರತಿನಿಧಿಗಳ ನ್ಯಾಯಾಲಯ ಆರೋಪ ಮುಕ್ತಗೊಳಿಸಿ ಆದೇಶ ಹೊರಡಿಸಿದೆ.
ಕಳೆದ ವಿಧಾನಸಭಾ ಚುನಾವಣೆ ವೇಳೆ ಒಂದು ಕೋಮುವಿನ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದ ಸಂಬಂಧ ಮಂಜುನಾಥ್ ಎಂಬುವರು ಕೆ.ಎಸ್.ಈಶ್ವರಪ್ಪ ವಿರುದ್ಧ ಶಿವಮೊಗ್ಗ ಠಾಣೆಯಲ್ಲಿ ದೂರು ನೀಡಿದ್ದರು. ಈ ಹಿನ್ನೆಲೆ ಒಂದು ವರ್ಷದಿಂದ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿತ್ತು.
ಇಂದು ಜನಪ್ರತಿನಿಧಿ ನ್ಯಾಯಲಯದಲ್ಲಿ ಅಂತಿಮವಾಗಿ ಈಶ್ವರಪ್ಪ ವಿಚಾರಣೆ ನಡೆಸಿ ಸೂಕ್ತ ಸಾಕ್ಷ್ಯಾಧಾರಗಳ ಕೊರತೆ ಕಾರಣದಡಿಯಲ್ಲಿ ಕೇಸ್ನಿಂದ ಖುಲಾಸೆಗೊಳಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ರಾಮಚಂದ್ರ ಡಿ. ಹುದ್ದಾರ್ ಆದೇಶ ಹೊರಡಿಸಿದ್ದಾರೆ. ಹೀಗಾಗಿ ಜನಪ್ರತಿನಿಧಿ ನ್ಯಾಯಲಯದಿಂದ ಈಶ್ವರಪ್ಪಗೆ ಬಿಗ್ ರೀಲಿಫ್ ಸಿಕ್ಕಿದೆ.