ETV Bharat / state

ನಕಲಿ ವೋಟರ್ ಐಡಿ ಪ್ರಕರಣ: ಶಾಸಕ ಮುನಿರತ್ನಗೆ ಬಿಗ್ ರಿಲೀಫ್

ಶಾಸಕ ಮುನಿರತ್ನಗೆ ಬಿಗ್ ರಿಲೀಫ್
ಶಾಸಕ ಮುನಿರತ್ನಗೆ ಬಿಗ್ ರಿಲೀಫ್
author img

By

Published : Jan 20, 2021, 2:26 PM IST

Updated : Jan 20, 2021, 6:00 PM IST

14:21 January 20

ನಕಲಿ ವೋಟರ್​ ಐಡಿ ಪ್ರಕರಣದ ತನಿಖೆ ಮುಂದುವರೆದಿದೆ ಎಂಬ ಹಿನ್ನೆಲೆಯಲ್ಲಿ ಸಿಬಿಐಗೆ ವಹಿಸಲು ಹೈಕೋರ್ಟ್​ ನಿರಾಕರಿಸಿದೆ.

ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಪತ್ತೆಯಾಗಿದ್ದ ನಕಲಿ ವೋಟರ್ ಐಡಿ ಪ್ರಕರಣವನ್ನು, ಸಿಬಿಐ ತನಿಖೆಗೆ ವಹಿಸಲು ಹೈಕೋರ್ಟ್ ನಿರಾಕರಿಸಿದೆ. ಈ ಮೂಲಕ ಸಿಬಿಐ ತನಿಖೆ ಎದುರಿಸುವ ಭೀತಿಯಲ್ಲಿದ್ದ ಶಾಸಕ ಮುನಿರತ್ನ ಅವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.

ನಕಲಿ ವೋಟರ್ ಐಡಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ, ಎನ್.ಆನಂದ್ ಎಂಬವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.  

ಕೆಲ ಕಾಲ ವಾದ ಪ್ರತಿವಾದ ಆಲಿಸಿದ ಪೀಠ, ಪ್ರಕರಣವನ್ನು ಈ ಹಂತದಲ್ಲಿ ಸಿಬಿಐ ತನಿಖೆಗೆ ವಹಿಸಲು ಯಾವುದೇ ಅಂಶಗಳು ಕಾಣುತ್ತಿಲ್ಲ ಎಂದು ಅಭಿಪ್ರಾಯಪಟ್ಟು, ಅರ್ಜಿ ಇತ್ಯರ್ಥಗೊಳಿಸಿ ಆದೇಶಿಸಿತು.

ಸಿಬಿಐಗೆ ವಹಿಸದಿರಲು ಕಾರಣಗಳು: ಅರ್ಜಿಯ ಹಿಂದಿನ ವಿಚಾರಣೆ ಸಂದರ್ಭದಲ್ಲಿ ನ್ಯಾಯಾಲಯ ಅರ್ಜಿದಾರರು ಆರೋಪಿಸಿರುವಂತೆ ಜಾಲಹಳ್ಳಿ ಠಾಣೆ ಪೊಲೀಸರು, ಸಮರ್ಪಕ ತನಿಖೆ ನಡೆಸಿದ್ದಾರೋ ಇಲ್ಲವೋ ಎಂಬುದನ್ನು ಹಿರಿಯ ಐಪಿಎಸ್ ಅಧಿಕಾರಿಯೊಬ್ಬರಿಂದ ಪರಿಶೀಲಿಸಿ ವರದಿ ನೀಡುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಆದೇಶಿಸಿತ್ತು. ಅದರಂತೆ, ಪೊಲೀಸ್ ಮಹಾನಿರ್ದೇಶಕರು ಜವಾಬ್ದಾರಿಯನ್ನು ನಗರದ ಹೆಚ್ಚುವರಿ ಪೊಲೀಸ್ ಆಯುಕ್ತರಿಗೆ (ಪೂರ್ವ ವಲಯ) ವಹಿಸಿದ್ದರು.

ಇದನ್ನೂ ಓದಿ; 3 ದಿನದೊಳಗೆ ಅನಧಿಕೃತ ಧಾರ್ಮಿಕ ಕಟ್ಟಡಗಳ ಸಮೀಕ್ಷೆ ನಡೆಸುವಂತೆ ಹೈಕೋರ್ಟ್‌ ಆದೇಶ

ಆಯುಕ್ತರು ಪರಿಶೀಲಿಸಿ ನ್ಯಾಯಾಲಯಕ್ಕೆ ಸಲ್ಲಿಸಿದ್ದ ವರದಿಯಲ್ಲಿ, ಜಾಲಹಳ್ಳಿ ಠಾಣೆ ಪೊಲೀಸರು ನಡೆಸಿರುವ ತನಿಖೆಯಲ್ಲಿ ಲೋಪಗಳಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಎರಡೂ ಎಫ್ಐಆರ್​​ಗಳಿಗೆ ಸಂಬಂಧಿಸಿದಂತೆ ತನಿಖೆ ಇನ್ನೂ ಮುಂದುವರೆದಿದೆ. ಆದರೆ, ಮುನಿರತ್ನ ವಿರುದ್ಧ ಆರೋಪ ಮಾಡುತ್ತಿರುವ ಅರ್ಜಿದಾರರು ತನಿಖೆಗೆ ಸೂಕ್ತ ಸಹಕಾರ ನೀಡುತ್ತಿಲ್ಲ. ಅರ್ಜಿದಾರರು ಹಾಗೂ ಮುನಿರತ್ನ ನಡುವೆ ವೈಮನಸ್ಸುಯಿದೆ ಎಂಬ ಅಂಶಗಳನ್ನು 51 ಪುಟಗಳ ವರದಿ ಹಾಗೂ ಪೂರಕ ದಾಖಲೆಗಳಲ್ಲಿ ವಿವರಿಸಿದ್ದರು.  

ಪೊಲೀಸ್ ಆಯುಕ್ತರ ವರದಿ ದಾಖಲಿಸಿಕೊಂಡ ಪೀಠ, ಈ ಹಂತದಲ್ಲಿ ಸಿಬಿಐ ತನಿಖೆಗೆ ವಹಿಸುವ ಯಾವುದೇ ಅಂಶಗಳು ಕಾಣುತ್ತಿಲ್ಲ ಎಂದು ಅಭಿಪ್ರಾಯಪಟ್ಟಿದೆ.

ತನಿಖೆಗೆ ಸಹಕರಿಸಲು ಅರ್ಜಿದಾರರಿಗೆ ಸೂಚನೆ: ತನಿಖೆಗೆ ಅರ್ಜಿದಾರರು ಸಹಕರಿಸುತ್ತಿಲ್ಲ ಎಂಬ ಅಂಶವನ್ನು ಪರಿಗಣಿಸಿರುವ ಪೀಠ, ಅರ್ಜಿದಾರರು ಪೊಲೀಸರ ತನಿಖೆಗೆ ಸಹಕಾರ ನೀಡಬೇಕು ಎಂದು ಹೇಳಿದೆ. ಹಾಗೆಯೇ ಅರ್ಜಿದಾರರು ಎತ್ತಿರುವ ಲೋಪವನ್ನು ಪ್ರಕರಣದ ತನಿಖಾಧಿಕಾರಿ ಗಮನಿಸಬೇಕು ಮತ್ತು ತನಿಖೆಯನ್ನು ಮುಂದುವರೆಸಬೇಕು ಎಂದು ನಿರ್ದೇಶಿಸಿದೆ.

ಪ್ರಕರಣದ ಹಿನ್ನೆಲೆ: 2018ರ ಸಾರ್ವತ್ರಿಕ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ, ಆರ್​​.ಆರ್ ನಗರ ಕ್ಷೇತ್ರದ ಜಾಲಹಳ್ಳಿಯ ಅಪಾರ್ಟ್ಮೆಂಟ್ ಒಂದರಲ್ಲಿ 9 ಸಾವಿರಕ್ಕೂ ಅಧಿಕ ಮತದಾರರ ಗುರುತಿನ ಚೀಟಿಗಳು ಪತ್ತೆಯಾಗಿದ್ದವು. ಮುನಿರತ್ನ ಬೆಂಬಲಿಗರಿಗೆ ಸೇರಿದೆ ಎನ್ನಲಾದ ಅಪಾರ್ಟ್ಮೆಂಟ್​​​ನಲ್ಲಿ ವೋಟರ್ ಐಡಿಗಳ ಜತೆಗೆ ಅವರು ಸ್ಪರ್ಧಿಸಿದ್ದ ಪಕ್ಷದ ಶಾಲು ಹಾಗೂ ಕರಪತ್ರಗಳು ಸಿಕ್ಕಿದ್ದವು.  

ಈ ಹಿನ್ನೆಲೆ ಚುನಾವಣಾ ಆಯೋಗ ಹಾಗೂ ಸ್ಥಳೀಯ ನಿವಾಸಿ ರಾಕೇಶ್ ಪ್ರತ್ಯೇಕವಾಗಿ ಜಾಲಹಳ್ಳಿ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಎಫ್ಐಆರ್ ದಾಖಲಿಸಿಕೊಂಡಿದ್ದ ಪೊಲೀಸರು ಸರಿಯಾಗಿ ತನಿಖೆ ನಡೆಸುತ್ತಿಲ್ಲ, ಹೀಗಾಗಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಕೋರಿ ಅರ್ಜಿದಾರರು ಹೈಕೋರ್ಟ್​​ಗೆ ಪಿಐಎಲ್ ಸಲ್ಲಿಸಿದ್ದರು.

Last Updated : Jan 20, 2021, 6:00 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.