ETV Bharat / state

ಬೆಂಗಳೂರಿನಲ್ಲಿ ಜನವರಿಗೆ ಬೃಹತ್ ಸಣ್ಣ ಕೈಗಾರಿಕೋದ್ಯಮಿಗಳ ಸಮಾವೇಶ: ಸಚಿವ ಎಂಟಿಬಿ ನಾಗರಾಜು

ಬೆಂಗಳೂರಿನಲ್ಲಿ ನಡೆದ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ರಾಜ್ಯದಲ್ಲಿ 9.81 ಲಕ್ಷ ಕೋಟಿ ರೂಪಾಯಿ ಬಂಡವಾಳ ಹೂಡಿಕೆ ಒಪ್ಪಂದ ಮಾಡಿಕೊಂಡಿದ್ದು, ಈ ಬೃಹತ್ ಉದ್ದಿಮೆಗಳಿಗೆ ಭಾರಿ ಪ್ರಮಾಣದಲ್ಲಿ ಬಿಡಿ ಭಾಗಗಳ ಅಗತ್ಯತೆ ಬೀಳಲಿದೆ. ಹೀಗಾಗಿ ಜನವರಿ ಮೊದಲ ವಾರದಲ್ಲಿ ಬೆಂಗಳೂರಿನಲ್ಲಿ ಬೃಹತ್ ಮತ್ತು ಸಣ್ಣ ಉದ್ದಿಮೆದಾರರ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಸಚಿವ ಎಂಟಿಬಿ ನಾಗರಾಜು ಅಭಿಮತ.

Minister MTB Nagaraju spoke in a meeting of Small Industries Department officials
ಸಣ್ಣ ಕೈಗಾರಿಕೆ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಸಚಿವ ಎಂಟಿಬಿ ನಾಗರಾಜು ಮಾತನಾಡಿದರು
author img

By

Published : Nov 24, 2022, 9:50 PM IST

ಬೆಂಗಳೂರು: ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿಒಪ್ಪಂದದಂತೆ ಬೃಹತ್ ಕೈಗಾರಿಕೆಗಳಿಗೆ ಬಿಡಿಭಾಗ ಪೂರೈಕೆಯ ಅಗತ್ಯತೆ ಮನಗೊಂಡಿರುವ ರಾಜ್ಯ ಸರ್ಕಾರ ಇದಕ್ಕೆ ಪೂರಕವಾಗಿ ಮುಂದಿನ ಜನವರಿಯಲ್ಲಿ ಬೃಹತ್ ಮತ್ತು ಸಣ್ಣ ಕೈಗಾರಿಕೋದ್ಯಮಿಗಳ ಸಮಾವೇಶ ಹಮ್ಮಿಕೊಳ್ಳಲು ನಿರ್ಧರಿಸಿದೆ ಎಂದು ಸಚಿವ ಎಂಟಿಬಿ ನಾಗರಾಜು ಹೇಳಿದರು.

ವಿಧಾನ ಸೌಧದಲ್ಲಿ ಗುರುವಾರ ಸಣ್ಣ ಕೈಗಾರಿಕೆ ಇಲಾಖೆಯ ಅಧಿಕಾರಿಗಳ ಸಭೆ ನಡೆಸಿದ ಪೌರಾಡಳಿತ, ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಎಂಟಿಬಿ ನಾಗರಾಜು, ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ರಾಜ್ಯದಲ್ಲಿ 9.81 ಲಕ್ಷ ಕೋಟಿ ರೂಪಾಯಿ ಬಂಡವಾಳ ಹೂಡಿಕೆ ಒಪ್ಪಂದ ಮಾಡಿಕೊಂಡಿರುವ ಬೃಹತ್ ಉದ್ದಿಮೆಗಳಿಗೆ ಭಾರಿ ಪ್ರಮಾಣದಲ್ಲಿ ಬಿಡಿ ಭಾಗಗಳ ಅಗತ್ಯತೆ ಬೀಳಲಿದೆ.

ಅದಕ್ಕಾಗಿ ಮತ್ತಷ್ಟು ಸಣ್ಣ ಮತ್ತು ಅತಿ ಸಣ್ಣ ಕೈಗಾರಿಕೆಗಳ ಸ್ಥಾಪನೆ ಆಗಬೇಕಿದೆ. ಇದರಿಂದಾಗಿ ಜನವರಿ ಮೊದಲ ವಾರದಲ್ಲಿ ಬೆಂಗಳೂರಿನಲ್ಲಿ ಬೃಹತ್ ಮತ್ತು ಸಣ್ಣ ಉದ್ದಿಮೆದಾರರ ಸಮಾವೇಶ ನಡೆಸಲಾಗುವುದು ಎಂದು ಹೇಳಿದರು. ನೆಲಮಂಗಲ ಕೈಗಾರಿಕಾ ವಸಾಹತುವಿಗೆ ನಾಲ್ಕು ಪಥದ ರಸ್ತೆ ನಿರ್ಮಾಣ,ವಿದ್ಯುತ್ ಸಬ್ ಸ್ಟೇಷನ್ ಹಾಗೂ ತ್ಯಾಜ್ಯ ಸಂಸ್ಕರಣಾ ಘಟಕ ಆರಂಭಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಚಿವ ಎಂಟಿಬಿ ನಾಗರಾಜು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಕೈಗಾರಿಕಾ ಇಲಾಖೆ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ, ಕೆಎಸ್ಎಸ್ಐಡಿಸಿ ವ್ಯವಸ್ಥಾಪಕ ನಿರ್ದೇಶಕ ಎಸ್.ಜೆ.ಸೋಮಶೇಖರ್,ಕಾಸಿಯಾ ಅಧ್ಯಕ್ಷ ಕೆ.ಎನ್.ನರಸಿಂಹ ಮೂರ್ತಿ, ಪೀಣ್ಯ ಕೈಗಾರಿಕಾ ಸಂಘದ ಅಧ್ಯಕ್ಷ ಎಚ್.ಮಂಜುನಾಥ್ ಪಾಲ್ಗೊಂಡಿದ್ದರು.

ಇದನ್ನೂ ಓದಿ:ದೇಶಕ್ಕೆ ಸ್ವಾವಲಂಬನೆ ಮಾರ್ಗ ತೋರಿದ್ದು ಲಾಲ್ ಬಹದ್ದೂರ್ ಶಾಸ್ತ್ರಿ: ತಮಿಳುನಾಡು ರಾಜ್ಯಪಾಲ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.