ಬೆಂಗಳೂರು: ಉತ್ತರ ಕರ್ನಾಟಕ ನೆರೆ ಪರಿಹಾರ ವಿತರಣೆ ವಿಷಯದಲ್ಲಿ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಹಾಗೂ ಸಾಮಾಜಿಕ ಕಾರ್ಯಕರ್ತ ಚಕ್ರವರ್ತಿ ಸೂಲಿಬೆಲೆ ನಡುವೆ ನಡೆಯುತ್ತಿರುವ ಟ್ವಿಟರ್ ವಾರ್ ಮಹತ್ವದ ತಿರುವು ಪಡೆದುಕೊಂಡಿದೆ.
ಡಿವಿಎಸ್ ಅವರು ಟ್ವಿಟರ್ನಲ್ಲಿ ತಮ್ಮನ್ನು ಬ್ಲಾಕ್ ಮಾಡಿರುವುದಾಗಿ ಸೂಲಿಬೆಲೆ ಅವರು ಸ್ವತಃ ತಮ್ಮ ಖಾತೆಯಲ್ಲಿ ಪೋಸ್ಟ್ ಮಾಡಿದ್ದು, ಸಚಿವರ ನಡೆ ವಿರುದ್ಧ ಟ್ವಿಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
-
Thank you!! pic.twitter.com/AcYviECDSj
— Chakravarty Sulibele (@astitvam) October 2, 2019 " class="align-text-top noRightClick twitterSection" data="
">Thank you!! pic.twitter.com/AcYviECDSj
— Chakravarty Sulibele (@astitvam) October 2, 2019Thank you!! pic.twitter.com/AcYviECDSj
— Chakravarty Sulibele (@astitvam) October 2, 2019
ಉತ್ತರ ಕರ್ನಾಟಕ ನೆರೆ ಸಂತ್ರಸ್ತರಿಗೆ ಕೇಂದ್ರ ಸರ್ಕಾರ ಸಮರ್ಪಕ ಪರಿಹಾರ ನೀಡಿಲ್ಲ ಎಂದು ಆರೋಪಿಸಿದ್ದ ಸೂಲಿಬೆಲೆ ಅವರು ಈಚೆಗೆ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಒಂದು ಟ್ವೀಟ್ ಮಾಡಿದ್ದರು. ಅದಾದ ಮರು ದಿನವೇ ಚಕ್ರವತ್ತಿ ಸೂಲಿಬೆಲೆ ಅವರನ್ನುದ್ದೇಶಿಸಿ ಟ್ವಿಟ್ ಮಾಡಿದ್ದ ಡಿವಿಎಸ್, ’‘ಟೀಕೆ- ಟಿಪ್ಪಣಿ, ವಿಮರ್ಶೆ, ಭಿನ್ನ ಅಭಿಪ್ರಾಯಗಳು ಪ್ರಜಾಪ್ರಭುತ್ವದಲ್ಲಿ ಸಹಜ. ಆದರೆ ಅದು ಯಾವ ಮಟ್ಟದಲ್ಲಿರಬೇಕು ಅನ್ನೋದು ಗೊತ್ತಿರಬೇಕು. ಅದು ಬಿಟ್ಟು ವೈಯುಕ್ತಿಕ ನಿಂದನೆ ಇಳಿಯುವವರ ಬಗ್ಗೆ ನನ್ನ ಬಳಿ ಉತ್ತರವಿಲ್ಲ. ಸಂತ್ರಸ್ತರ ಕಣ್ಣೀರು ಒರೆಸಿದ್ದೇವೆ. ಅವರು ನಮ್ಮವರು ಅವರ ಕ್ಷೇಮ, ಭವಿಷ್ಯ ನಮ್ಮ ಜವಾಬ್ದಾರಿ’’ ಎಂದು ಚಾಟಿ ಬೀಸಿದ್ದರು.
-
ಪ್ರವಾಹ ಪೀಡಿತ ಪ್ರದೇಶಕ್ಕೆ ಬರಬೇಕಾದ ಪರಿಹಾರದ ಬಗ್ಗೆ ಇಲ್ಲ ಸಲ್ಲದ ಕಥೆ ಹೇಳಿ ತಪ್ಪು ಮಾಹಿತಿ ನೀಡಿ ಜನರನ್ನು ದಾರಿ ತಪ್ಪಿಸುತ್ತಿರುವವರ ಬಗ್ಗೆ ನಮಗೆ ಕನಿಕರವಿದೆ. ಪ್ರವಾಹ ಪೀಡಿತ ಪ್ರದೇಶದಲ್ಲಿ ಆಗಬೇಕಾದ ತಕ್ಷಣ ಪರಿಹಾರ,ಮಧ್ಯಂತರ ಪರಿಹಾರ ಮತ್ತು ಧೀರ್ಘ ಕಾಲೀನ ಪರಿಹಾರದ ಬಗ್ಗೆ ಬೇಕಾದ ವರದಿಗಳನ್ನು ತಯಾರಿಸಿರುವ ಬಗ್ಗೆ ಕೇಂದ್ರ ಹಣಕಾಸು1/4
— Sadananda Gowda (@DVSadanandGowda) October 1, 2019 " class="align-text-top noRightClick twitterSection" data="
">ಪ್ರವಾಹ ಪೀಡಿತ ಪ್ರದೇಶಕ್ಕೆ ಬರಬೇಕಾದ ಪರಿಹಾರದ ಬಗ್ಗೆ ಇಲ್ಲ ಸಲ್ಲದ ಕಥೆ ಹೇಳಿ ತಪ್ಪು ಮಾಹಿತಿ ನೀಡಿ ಜನರನ್ನು ದಾರಿ ತಪ್ಪಿಸುತ್ತಿರುವವರ ಬಗ್ಗೆ ನಮಗೆ ಕನಿಕರವಿದೆ. ಪ್ರವಾಹ ಪೀಡಿತ ಪ್ರದೇಶದಲ್ಲಿ ಆಗಬೇಕಾದ ತಕ್ಷಣ ಪರಿಹಾರ,ಮಧ್ಯಂತರ ಪರಿಹಾರ ಮತ್ತು ಧೀರ್ಘ ಕಾಲೀನ ಪರಿಹಾರದ ಬಗ್ಗೆ ಬೇಕಾದ ವರದಿಗಳನ್ನು ತಯಾರಿಸಿರುವ ಬಗ್ಗೆ ಕೇಂದ್ರ ಹಣಕಾಸು1/4
— Sadananda Gowda (@DVSadanandGowda) October 1, 2019ಪ್ರವಾಹ ಪೀಡಿತ ಪ್ರದೇಶಕ್ಕೆ ಬರಬೇಕಾದ ಪರಿಹಾರದ ಬಗ್ಗೆ ಇಲ್ಲ ಸಲ್ಲದ ಕಥೆ ಹೇಳಿ ತಪ್ಪು ಮಾಹಿತಿ ನೀಡಿ ಜನರನ್ನು ದಾರಿ ತಪ್ಪಿಸುತ್ತಿರುವವರ ಬಗ್ಗೆ ನಮಗೆ ಕನಿಕರವಿದೆ. ಪ್ರವಾಹ ಪೀಡಿತ ಪ್ರದೇಶದಲ್ಲಿ ಆಗಬೇಕಾದ ತಕ್ಷಣ ಪರಿಹಾರ,ಮಧ್ಯಂತರ ಪರಿಹಾರ ಮತ್ತು ಧೀರ್ಘ ಕಾಲೀನ ಪರಿಹಾರದ ಬಗ್ಗೆ ಬೇಕಾದ ವರದಿಗಳನ್ನು ತಯಾರಿಸಿರುವ ಬಗ್ಗೆ ಕೇಂದ್ರ ಹಣಕಾಸು1/4
— Sadananda Gowda (@DVSadanandGowda) October 1, 2019
'ಮಂತ್ರಿಗಿರಿ ಭಿಕ್ಷೆ ಅಂತ ನಮಗೆ ಹೇಳುವವರು, ಚಪ್ಪಾಳೆ ಗಿಟ್ಟಿಸಿಕೊಂಡು ದೇಶ ಕಟ್ಟುವವರು ಎಂದು ಹೇಳಿಕೊಳ್ಳುವವರು. ಈ ರೀತಿಯ ಮಾತುಗಳು ಸರಿಯಲ್ಲ. ಹಾರಿಕೆ ಸುದ್ದಿ ಹರಡುವವರು ದೇಶ ದ್ರೋಹಿಗಳು ಎಂದು ಗಾಂಧೀಜಿ ಹೇಳಿದ್ದಾರೆ. ಇವರೆಲ್ಲಾ ಅದೇ ಬ್ರಾಂಡ್‍ಗೆ ಸೇರುತ್ತಾರೆ. ಭಾಷಣಗಳಿಂದ, ಟ್ವೀಟ್‍ನಿಂದ ಜನರನ್ನು ಪ್ರಚೋದನೆ ಮಾಡುವುದಲ್ಲ' ಎಂದು ಟೀಕಿಸಿದ್ದರು.
-
Lol! This man came now. @DVSadanandGowda ರೆ, ನೊಂದಿರುವ ಉತ್ತರ ಕರ್ನಾಟಕದ ಜನರನ್ನು ದಾರಿ ತಪ್ಪಿಸುವವರು ಎನ್ನುವಷ್ಟು ಧಾರ್ಷ್ಟ್ಯ ತೋರಿರುವ ನಿಮ್ಮ ಬಗ್ಗೆ ನಾಡಿಗೇ ಕನಿಕರವಿದೆ. ನಿಮ್ಮ ಮಂತ್ರಿಗಿರಿ ಜನರ ಭಿಕ್ಷೆ ಎನ್ನುವುದನ್ನು ಮರೆಯಬೇಡಿ. ಪ್ರವಾಹ ಕಳೆದು ಜನ ಬದುಕು ಕಟ್ಟಿಕೊಳ್ಳುವ ಕಾಲಕ್ಕೂ ಬರದ ಪರಿಹಾರ ಯಾವ ಪುರುಷಾರ್ಥಕ್ಕೆ? https://t.co/vykCBoDDn5
— Chakravarty Sulibele (@astitvam) October 2, 2019 " class="align-text-top noRightClick twitterSection" data="
">Lol! This man came now. @DVSadanandGowda ರೆ, ನೊಂದಿರುವ ಉತ್ತರ ಕರ್ನಾಟಕದ ಜನರನ್ನು ದಾರಿ ತಪ್ಪಿಸುವವರು ಎನ್ನುವಷ್ಟು ಧಾರ್ಷ್ಟ್ಯ ತೋರಿರುವ ನಿಮ್ಮ ಬಗ್ಗೆ ನಾಡಿಗೇ ಕನಿಕರವಿದೆ. ನಿಮ್ಮ ಮಂತ್ರಿಗಿರಿ ಜನರ ಭಿಕ್ಷೆ ಎನ್ನುವುದನ್ನು ಮರೆಯಬೇಡಿ. ಪ್ರವಾಹ ಕಳೆದು ಜನ ಬದುಕು ಕಟ್ಟಿಕೊಳ್ಳುವ ಕಾಲಕ್ಕೂ ಬರದ ಪರಿಹಾರ ಯಾವ ಪುರುಷಾರ್ಥಕ್ಕೆ? https://t.co/vykCBoDDn5
— Chakravarty Sulibele (@astitvam) October 2, 2019Lol! This man came now. @DVSadanandGowda ರೆ, ನೊಂದಿರುವ ಉತ್ತರ ಕರ್ನಾಟಕದ ಜನರನ್ನು ದಾರಿ ತಪ್ಪಿಸುವವರು ಎನ್ನುವಷ್ಟು ಧಾರ್ಷ್ಟ್ಯ ತೋರಿರುವ ನಿಮ್ಮ ಬಗ್ಗೆ ನಾಡಿಗೇ ಕನಿಕರವಿದೆ. ನಿಮ್ಮ ಮಂತ್ರಿಗಿರಿ ಜನರ ಭಿಕ್ಷೆ ಎನ್ನುವುದನ್ನು ಮರೆಯಬೇಡಿ. ಪ್ರವಾಹ ಕಳೆದು ಜನ ಬದುಕು ಕಟ್ಟಿಕೊಳ್ಳುವ ಕಾಲಕ್ಕೂ ಬರದ ಪರಿಹಾರ ಯಾವ ಪುರುಷಾರ್ಥಕ್ಕೆ? https://t.co/vykCBoDDn5
— Chakravarty Sulibele (@astitvam) October 2, 2019
ತಮ್ಮನ್ನು ಪರೋಕ್ಷವಾಗಿ ದೇಶದ್ರೋಹಿ ಎಂದಿದ್ದಾರೆ ಎಂದು ಆರೋಪಿಸಿದ್ದ ಸೂಲಿಬೆಲೆ, ನೊಂದಿರುವ ಉತ್ತರ ಕರ್ನಾಟಕದ ಜನರನ್ನು ದಾರಿ ತಪ್ಪಿಸುವವರು ಎನ್ನುವಷ್ಟು ದಾರ್ಷ್ಟ್ಯ ತೋರಿರುವ ನಿಮ್ಮ ಬಗ್ಗೆ ನಾಡಿಗೇ ಕನಿಕರವಿದೆ. ನಿಮ್ಮ ಮಂತ್ರಿಗಿರಿ ಜನರ ಭಿಕ್ಷೆ ಎನ್ನುವುದನ್ನು ಮರೆಯಬೇಡಿ. ಪ್ರವಾಹ ಕಳೆದು ಜನ ಬದುಕು ಕಟ್ಟಿಕೊಳ್ಳುವ ಕಾಲಕ್ಕೂ ಬರದ ಪರಿಹಾರ ಯಾವ ಪುರುಷಾರ್ಥಕ್ಕೆ? ಎಂದು ತಿರುಗೇಟು ನೀಡಿದ್ದರು.
ಇಬ್ಬರ ನಡುವಿನ ಟ್ವೀಟ್ ವಾರ್ ಈಗ ಮಹತ್ವದ ತಿರುವು ಪಡೆದುಕೊಳ್ಳುತ್ತಿದ್ದು, ಸದಾನಂದ ಗೌಡ ಅವರು ತಮ್ಮನ್ನು ಬ್ಲಾಕ್ ಮಾಡಿದ್ದಾರೆ ಎಂದು ಸೂಲಿಬೆಲೆ ಮಾಡಿರುವ ಟ್ವೀಟ್ ಈಗ ಮತ್ತೊಂದು ಹಂತಕ್ಕೆ ಕೊಂಡೊಯ್ದಿದೆ.