ETV Bharat / state

ಮಾಸ್ಕ್ ಹಾಕಿಕೊಳ್ಳಿ ಎಂದಿದಕ್ಕೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದ ಬೈಕ್ ಸವಾರ ಅರೆಸ್ಟ್ - wearing the mask

ಬೆಂಗಳೂರಿನ ಪೀಣ್ಯ ಎರಡನೇ ಹಂತದ ಏರಿಯಾದಲ್ಲಿ ಬಿಬಿಎಂಪಿ ಮಾರ್ಷಲ್ ದರ್ಶನ್ ಎಂಬುವರು ಕರ್ತವ್ಯದಲ್ಲಿದ್ದಾಗ ಮಾಸ್ಕ್ ಇಲ್ಲದೆ ಬೈಕ್​ನಲ್ಲಿ ಬರುತ್ತಿದ್ದ ಆರೋಪಿ ಬಾಲುವಿಗೆ ಮಾಸ್ಕ್ ಹಾಕುವಂತೆ ತಿಳಿಸಿದ್ದಾರೆ. ಇಷ್ಟಕ್ಕೆ‌ ಅಕ್ರೋಶಗೊಂಡ ಆರೋಪಿ ಮಾರ್ಷಲ್ ವಿರುದ್ಧ ಕಿಡಿಕಾರಿ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾನೆ. ಈ ಆರೋಪದ ಹಿನ್ನೆಲೆ ಆತನನ್ನು ಬಂಧಿಸಲಾಗಿದೆ.

ಬೈಕ್ ಸವಾರ ಅರೆಸ್ಟ್
ಬೈಕ್ ಸವಾರ ಅರೆಸ್ಟ್
author img

By

Published : Jun 25, 2020, 11:47 PM IST

ಬೆಂಗಳೂರು: ಮಾಸ್ಕ್ ಹಾಕಿಕೊಳ್ಳಿ ಎಂದು ಬುದ್ದಿ ಹೇಳಿದಕ್ಕೆ ಅವಾಚ್ಯ ಶಬ್ಧಗಳಿಂದ ನಿಂದನೆ ಹಾಗೂ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ ಬೈಕ್ ಸವಾರರನ್ನು ರಾಜಗೋಪಾಲ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬೈಕ್ ಸವಾರ ಅರೆಸ್ಟ್
ಬೈಕ್ ಸವಾರ ಅರೆಸ್ಟ್

ಬಾಲು ಬಂಧಿತ ಆರೋಪಿಯಾಗಿದ್ದು, ನಿನ್ನೆ ಪೀಣ್ಯ ಎರಡನೇ ಹಂತದ ಏರಿಯಾದಲ್ಲಿ ಬಿಬಿಎಂಪಿ ಮಾರ್ಷಲ್ ದರ್ಶನ್ ಎಂಬುವರು ಕರ್ತವ್ಯದಲ್ಲಿದ್ದಾಗ ಮಾಸ್ಕ್ ಇಲ್ಲದೆ ಬೈಕ್​ನಲ್ಲಿ ಬರುತ್ತಿದ್ದ ಆರೋಪಿ ಬಾಲುವಿಗೆ ಮಾಸ್ಕ್ ಹಾಕುವಂತೆ ತಿಳಿಸಿದ್ದಾರೆ. ಇಷ್ಟಕ್ಕೆ‌ ಅಕ್ರೋಶಗೊಂಡ ಆರೋಪಿಯು ಮಾರ್ಷಲ್ ವಿರುದ್ಧ ಕಿಡಿಕಾರಿ ಅವಾಚ್ಯ ಶಬ್ಧಗಳಿಂದ ನಿಂದಿಸಿ, ಕ್ಷಣಾರ್ಧದಲ್ಲಿ ಎಸ್ಕೇಪ್ ಆಗಿದ್ದಾನೆ.‌ ಈ ಸಂಬಂಧ ರಾಜಗೋಪಾಲ ನಗರ ಪೊಲೀಸರಿಗೆ ನೀಡಿದ ದೂರಿನ್ವಯ ಐಪಿಸಿ ಸೆಕ್ಷನ್ 353 ಹಾಗೂ 504ರಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಸೆರೆ ಹಿಡಿದಿದ್ದಾರೆ.

ಕೋವಿಡ್-19 ಸೋಂಕು ನಿಯಂತ್ರಿಸುವ ಹಿನ್ನೆಲೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದ ಹಾಗೂ ಮುಖಗವಸು (ಮಾಸ್ಕ್) ಧರಿಸದೇ ಸಾರ್ವಜನಿಕ ಸ್ಥಳಗಳಲ್ಲಿ ಅಡ್ಡಾಡುವವರಿಂದ ಮಾರ್ಷಲ್​​ಗಳು ದಂಡ ಸಂಗ್ರಹಿಸುತ್ತಿದ್ದಾರೆ. ಇಂದು ಮಾಸ್ಕ್ ಧರಿಸದ 1,268 ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳದ 52 ಮಂದಿ ಸೇರಿದಂತೆ ಒಟ್ಟು 1,320 ಮಂದಿಯಿಂದ ಒಟ್ಟು 2.64 ಲಕ್ಷ ರೂ. ದಂಡ ಸಂಗ್ರಹಿಸಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.