ಬೆಂಗಳೂರು: ಕರ್ಫ್ಯೂ ಜಾರಿಯಲ್ಲಿದ್ದರೂ ಕುಂಟು ನೆಪ ಹೇಳಿ ಓಡಾಡುತ್ತಿದ್ದ ವಾಹನ ಸವಾರರಿಗೆ ನಗರ ಪೊಲೀಸರು ಬಿಸಿ ಮುಟ್ಟಿಸುತ್ತಿದ್ದಾರೆ. ಅನಗತ್ಯವಾಗಿ ಬೈಕ್ನಲ್ಲಿ ಸಂಚರಿಸುತ್ತಿದ್ದ ಬೈಕ್ ಸವಾರ ಪೊಲೀಸರೊಂದಿಗೆ ವಾಗ್ವಾದ ನಡೆಸಿರುವ ಘಡನೆ ನಡೆದಿದೆ.
ಅಂಗಡಿ ವ್ಯಾಪಾರ ಮುಗಿಸಿ ಮನೆಗೆ ಹೋಗುತ್ತಿದ್ದೇನೆ ಎಂದು ಬೇಡಿಕೊಳ್ಳುತ್ತಿದ್ದ ವ್ಯಕ್ತಿಗೆ ಈ ಹೊತ್ತಲ್ಲಿ ಯಾವ ಅಂಗಡಿ ಎಂದು ಪ್ರಶ್ನಿಸಿದ ಪೊಲೀಸರ ಜೊತೆ ಮಾತಿಗಿಳಿದಿದ್ದ. ಬಳಿಕ ಪೊಲೀಸರು ಬೈಕ್ ಸೀಜ್ ಮಾಡಿದ್ದು, ಮೇ 12ರ ನಂತರ ತೆಗೆದುಕೊಂಡು ಹೋಗುವಂತೆ ಸೂಚಿಸಿದ್ದಾರೆ.