ಬೆಂಗಳೂರು: ರಸ್ತೆ ಖಾಲಿ ಇದೆ ಎಂದು ರೋಡಿಗೆ ಬಂದಿದ್ದ 900ಕ್ಕಿಂತ ಹೆಚ್ಚು ಬೈಕ್ಗಳನ್ನು ನಗರ ಸಂಚಾರ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಹಲವು ಬಾರಿ ತರಹೇವಾರಿ ರೀತಿಯಲ್ಲಿ ಜಾಗೃತಿ ಮೂಡಿಸುತ್ತಿದ್ದರೂ, ಬೈಕ್ ಸವಾರರು ಮಾತ್ರ ರಸ್ತೆಗೆ ಇಳಿಯುವುದನ್ನು ಬಿಟ್ಟಿಲ್ಲ. ಹೀಗಾಗಿ ಇಂತಹ ಬೈಕ್ಗಳನ್ನು ವಶಕ್ಕೆ ಪಡೆಯಲು ಸಂಚಾರ ಪೊಲೀಸರು ಭಾನುವಾರ ವಿಶೇಷ ಕಾರ್ಯಾಚರಣೆ ನಡೆಸಿದರು.
ನಗರ ವ್ಯಾಪ್ತಿಯಲ್ಲಿ ಬರುವ 44 ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ 900ಕ್ಕೂ ಹೆಚ್ಚು ಬೈಕ್ಗಳನ್ನು ವಶಕ್ಕೆ ಪಡೆದುಕೊಂಡರು. ಬಳಿಕ ಸವಾರರು ಮನೆಗೆ ನಡೆದುಕೊಂಡೇ ಹೋದರು.
ಇದೇ ರೀತಿ ಲಾಕ್ಡೌನ್ ಆದೇಶ ಉಲ್ಲಂಘನೆ ಮಾಡಿದರೆ ವಾಸ್ತವಾಂಶ ಪರಿಶೀಲಿಸಿ ಅನಗತ್ಯವಾಗಿ ಬೈಕ್ ಚಲಾಯಿಸುತ್ತಿರುವುದು ಕಂಡು ಬಂದರೆ, ಬೈಕ್ ವಶಕ್ಕೆ ಪಡೆದುಕೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.