ETV Bharat / state

ಸಚಿವರು, ಶಾಸಕರ ವೇತನ ಕಡಿತದ ತಿದ್ದುಪಡಿ ವಿಧೇಯಕ ಸೇರಿ ನಾಲ್ಕು ಬಿಲ್​ಗಳಿಗೆ ಅಂಗೀಕಾರ - Pay cut amendment bill

ಸದ್ಯದ ಆರ್ಥಿಕ ಪರಿಸ್ಥಿತಿಯನ್ನು ಸರಿದೂಗಿಸುವ ಹಿನ್ನೆಲೆ ನಿವೃತ್ತಿ ವೇತನ, ಭತ್ಯೆ ಮತ್ತು ಇತರೆ ಕಾನೂನು ತಿದ್ದುಪಡಿ ವಿಧೇಯಕಕ್ಕೆ ಅಂಗೀಕಾರ ನೀಡಲಾಯಿತು. ಈ ವೇಳೆ ಕೆಲ ಶಾಸಕರು ಒಪ್ಪಿಗೆ ಸೂಚಿಸಿದರೆ ಇನ್ನು ಕೆಲವರು ವಿಧೇಯಕದ ಬಗ್ಗೆ ತಮ್ಮ ಅಸಮಾಧಾನ ವ್ಯಕ್ತಪಡಿಸಿದರು.

Bill to cut salaries of ministers, MLAs by 30% passed in Karnataka assembly
ವಿಧಾನಸೌಧ (ಸಂಗ್ರಹ ಚಿತ್ರ)
author img

By

Published : Sep 22, 2020, 11:23 PM IST

ಬೆಂಗಳೂರು : ಸಚಿವರು, ಶಾಸಕರ ವೇತನ ಕಡಿತ ಸಂಬಂಧ ವಿಧಾನಮಂಡಲದ ಸಂಬಳಗಳು, ನಿವೃತ್ತಿ ವೇತನಗಳು ಮತ್ತು ಭತ್ಯೆಗಳು ಹಾಗೂ ಕೆಲವು ಇತರ ಕಾನೂನು (ತಿದ್ದುಪಡಿ) ವಿಧೇಯಕ 2020 ಸೇರಿ ಒಟ್ಟು ನಾಲ್ಕು ವಿಧೇಯಕಗಳನ್ನು ಅಂಗೀಕಾರ ಮಾಡಲಾಯಿತು.

ಕೊರೊನಾ ಸಂಕಷ್ಟ ಹಿನ್ನೆಲೆಯಲ್ಲಿ ರಾಜ್ಯದ ಆರ್ಥಿಕ ಪರಿಸ್ಥಿತಿ ಸರಿದೂಗಿಸಬೇಕಿರುವ ಕಾರಣ ಮುಖ್ಯಮಂತ್ರಿಯಾದಿಯಾಗಿ ಸಚಿವರು, ಶಾಸಕರ ಶೇ.30ರಷ್ಟು ವೇತನ ಕಡಿತ ಮಾಡುವ ಸಂಬಂಧ ಸಂಬಳಗಳು, ನಿವೃತ್ತಿ ವೇತನ, ಭತ್ಯೆ ಮತ್ತು ಇತರೆ ಕಾನೂನು ತಿದ್ದುಪಡಿ ವಿಧೇಯಕಕ್ಕೆ ಅಂಗೀಕಾರ ನೀಡಲಾಯಿತು.

ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ವೇತನ, ನಿವೃತ್ತಿ ವೇತನ, ಭತ್ಯೆ ಮತ್ತು ಇತರೆ ಕಾನೂನು ತಿದ್ದುಪಡಿ ವಿಧೇಯಕವನ್ನು ಮಂಡಿಸಿ ಅನುಮೋದನೆ ಪಡೆದುಕೊಂಡರು. ಕೊರೊನಾದಂತಹ ಸನ್ನಿವೇಶವನ್ನು ನಿಭಾಯಿಸಲು ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು, ಸಚಿವರು, ಸಭಾಧ್ಯಕ್ಷರು, ಉಪಸಭಾಧ್ಯಕ್ಷರು, ಸಭಾಪತಿ, ಉಪಸಭಾಪತಿ, ವಿಧಾನಸಭೆ ಮತ್ತು ವಿಧಾನಪರಿಷತ್‌ನ ಪ್ರತಿಪಕ್ಷ ನಾಯಕರು, ಶಾಸಕರ ವೇತನ ಮತ್ತು ಭತ್ಯೆಗಳನ್ನು ಕಡಿಮೆಗೊಳಿಸುವ ಮೂಲಕ ಸಂಪನ್ಮೂಲ ಹೆಚ್ಚಿಸುವ ಪ್ರಸ್ತಾಪ ಮಾಡಲಾಗಿದೆ.

ವಿಧೇಯಕವು 2020ರ ಏ.1ರಿಂದ ಬರುವ 2021ರ ಮಾ.31ರವರೆಗೆ ಜಾರಿಯಲ್ಲಿರಲಿದೆ. ಇದಕ್ಕೂ ಮುನ್ನ ಎ.ಟಿ.ರಾಮಸ್ವಾಮಿ ಸೇರಿದಂತೆ ಕೆಲ ಶಾಸಕರು ವೇತನ ಕಡಿತ ಸಂಬಂಧ ವಿಧೇಯಕದ ಬಗ್ಗೆ ತಮ್ಮ ಅಸಮಾಧಾನ ವ್ಯಕ್ತಪಡಿಸಿದರು.

ಜೆಡಿಎಸ್ ಶಾಸಕ ಕೆ.ಎಸ್.ಲಿಂಗೇಶ್ ಮಾತನಾಡಿ, ಸಂಬಳ ಕಡಿತಕ್ಕೆ ನಮ್ಮ ಸಹಮತ ಇದೆ. ಆದರೆ, ಬಿಳಿ ಆನೆಗಳಾದ ಅಧಿಕಾರಿ ವರ್ಗದ ವೇತನವನ್ನೂ ಕಡಿತ ಮಾಡುವ ಬಗ್ಗೆ ಪರಿಶೀಲಿಸಿ ಎಂದು ಆಗ್ರಹಿಸಿದರು.

ಇದೇ ವೇಳೆ ಮಾತನಾಡಿದ ಶಾಸಕ ಶಂಕರಲಿಂಗೇಗೌಡ, ವೇತನ ಕಡಿತದಿಂದ ಎಷ್ಟು ಹಣ ಬರುತ್ತದೆ. ವೇತನ ಕಡಿತಕ್ಕೆ ನನ್ನ ವಿರೋಧ ಇಲ್ಲ. ಕೇಂದ್ರದಲ್ಲೂ ಮಾಡಿದ್ದಾರೆ. ಆದರೆ, ಶಾಸಕರ ವೇತನದಿಂದ ಬಜೆಟ್​​ನಲ್ಲಿ ಅಷ್ಟು ದೊಡ್ಡ ಹೊರೆ ಬೀಳುತ್ತಾ? ಎಂದು ಪ್ರಶ್ನಿಸಿದರು.

ವಿಧಾನಸಭೆಯಲ್ಲಿ ಕುಷ್ಠರೋಗ ಬಾಧಿತ ವ್ಯಕ್ತಿಗಳ ಸಂಬಂಧದಲ್ಲಿನ ತಾರತಮ್ಯಕಾರಕವಾದ ಉಪಬಂಧವನ್ನು ತೆಗೆದು ಹಾಕುವ 2020ನೇ ಸಾಲಿನ ಕರ್ನಾಟಕ ಭಿಕ್ಷಾಟನೆ ನಿಷೇಧ ತಿದ್ದುಪಡಿ ವಿಧೇಯಕ, 2020ನೇ ಸಾಲಿನ ಕನ್ನಡ ವಿಶ್ವವಿದ್ಯಾಲಯ ಮತ್ತು ಇತರ ಕೆಲವು ಕಾನೂನುಗಳ (ತಿದ್ದುಪಡಿ) ವಿಧೇಯಕ ಮತ್ತು ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ (ತಿದ್ದುಪಡಿ) ವಿಧೇಯಕವನ್ನು ಸದನವು ಅಂಗೀಕರಿಸಿತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.