ETV Bharat / state

ಸರ್ಕಾರ ರಚನೆಗೆ ಸಹಕರಿಸಿದವರಿಗೆ ಸಿಎಂ ಅನ್ಯಾಯ ಮಾಡಲ್ಲ: ಸಚಿವ ಭೈರತಿ ಬಸವರಾಜ್

author img

By

Published : Jun 5, 2020, 4:11 PM IST

Updated : Jun 5, 2020, 9:15 PM IST

ಎಂಟಿಬಿ ನಾಗರಾಜ್, ವಿಶ್ವನಾಥ್, ಶಂಕರ್, ರೋಷನ್ ಬೇಗ್ ಅವರಿಗೆ ವಿಧಾನಪರಿಷತ್ ಸ್ಥಾನ ನೀಡಬೇಕು ಎಂದು ಮುಖ್ಯಮಂತ್ರಿಗಳಲ್ಲಿ ನಾವೆಲ್ಲಾ ಮನವಿ ಮಾಡಿದ್ದೇವೆ. ಅನ್ಯಾಯ ಆಗಿದ್ರೆ ಮುಖ್ಯಮಂತ್ರಿಗಳು ಸರಿಪಡಿಸುತ್ತಾರೆ. ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ. ಯಾರಿಗೂ ಅನ್ಯಾಯವಾಗದ ರೀತಿಯಲ್ಲಿ ಮುಖ್ಯಮಂತ್ರಿಗಳು ಹಾಗೂ ಹೈಕಮಾಂಡ್‌ ನೋಡಿಕೊಳ್ಳುತ್ತದೆ- ಸಚಿವ ಭೈರತಿ ಬಸವರಾಜ್

ಸಚಿವ ಬೈರತಿ ಬಸವರಾಜ
ಸಚಿವ ಬೈರತಿ ಬಸವರಾಜ

ಕೆ.ಆರ್.ಪುರ (ಬೆಂಗಳೂರು): ಸರ್ಕಾರ ರಚನೆ ಮಾಡಲು ಸಹಾಯ ಮಾಡಿದ ಯಾರೊಬ್ಬರಿಗೂ ಸಿಎಂ ಬಿ.ಎಸ್​​.ಯಡಿಯೂರಪ್ಪನವರು ಅನ್ಯಾಯ ಮಾಡಲ್ಲ ಎಂದು ನಗರಾಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಹೇಳಿದ್ದಾರೆ.

ನಗರಾಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್

ವಿಧಾನ ಪರಿಷತ್​​ಗೆ ಬಿಜೆಪಿಯಲ್ಲಿ ಈಗಾಗಲೇ ಲಾಬಿ ಶುರುವಾಗಿದೆ. ಮೂಲ ಬಿಜೆಪಿಗರು ಹಾಗೂ ವಲಸಿಗರ ನಡುವೆ ಲಾಬಿ ಜೋರಾಗಿದ್ದು, ಈ ಬಗ್ಗೆ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ ಮಾಧ್ಯಮದವರೊಂದಿಗೆ ಮಾತನಾಡಿ, ಆಸೆ ಎಲ್ಲರಿಗೂ ಇರುತ್ತೆ. ಹಾಗಂತ ಅನ್ಯಾಯವನ್ನಂತೂ ನಮ್ಮ ಮುಖ್ಯಮಂತ್ರಿಗಳು ಯಾರಿಗೂ ಮಾಡುವುದಿಲ್ಲ ಎಂದರು.

ಎಂಟಿಬಿ ನಾಗರಾಜ್, ವಿಶ್ವನಾಥ್, ಶಂಕರ್, ರೋಷನ್ ಬೇಗ್ ಅವರಿಗೆ ವಿಧಾನಪರಿಷತ್ ಸ್ಥಾನ ನೀಡಬೇಕು ಎಂದು ಮುಖ್ಯಮಂತ್ರಿಗಳಲ್ಲಿ ನಾವೆಲ್ಲಾ ಮನವಿ ಮಾಡಿದ್ದೇವೆ. ಅನ್ಯಾಯ ಆಗಿದ್ರೆ ಮುಖ್ಯಮಂತ್ರಿಗಳು ಸರಿಪಡಿಸುತ್ತಾರೆ. ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ. ಯಾರಿಗೂ ಅನ್ಯಾಯವಾಗದ ರೀತಿಯಲ್ಲಿ ಮುಖ್ಯಮಂತ್ರಿಗಳು ಹಾಗೂ ಹೈಕಮಾಂಡ್‌ ನೋಡಿಕೊಳ್ಳುತ್ತದೆ ಎಂಬ ನಂಬಿಕೆ ಇದೆ ಎಂದು ತಿಳಿಸಿದರು.

Last Updated : Jun 5, 2020, 9:15 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.